ಹೊಸದಿಲ್ಲಿ: ರಾಜ್ಯ ಗೃಹ ಸಚಿವ ಜಿ.ಪರಮೇಶ್ವರ್ ಒಬ್ಬ ಪ್ರಬುದ್ಧ ರಾಜಕಾರಣಿ, ಪ್ರಜ್ಞಾವಂತರಾಗಿದ್ದು, ಅವರೇ ಇವಿಎಂ ವಿಚಾರದಲ್ಲಿ ರಾಹುಲ್ ಗಾಂಧಿಯವರಂತೆ ಮಾತನಾಡಿದರೆ ಹೇಗೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಟೀಕಿಸಿದ್ದಾರೆ.
ಹೊಸದಿಲ್ಲಿಯಲ್ಲಿ ಇಂದು(ನ.23) ಸಂಸತ್ ಅಧಿವೇಶನಕ್ಕೂ ಮುನ್ನ ಡಾ.ಜಿ.ಪರಮೇಶ್ವರ್ ಹೇಳಿಕೆಗಳಿಗೆ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ರಾಜ್ಯದಲ್ಲಿ ಪರಮೇಶ್ವರ್ ಗೃಹ ಮಂತ್ರಿಯಾಗಿ ಪ್ರಬುದ್ಧ ರಾಜಕಾರಣಿಯಾಗಿದ್ದಾರೆ. ಆದರೆ ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಸೋತು, ಬಿಜೆಪಿಗೆ ಗೆಲುವು ಸಾಧಿಸಿರುವುದಕ್ಕೆ ಇವಿಎಂ ಮೇಲೆ ಅನುಮಾನವಿದೆ ಎಂಬ ಅವರ ಆರೋಪ ಸರಿ ಕಾಣುತ್ತಿಲ್ಲ ಎಂದು ಹೇಳಿದ್ದಾರೆ.
2023ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ 136 ಕ್ಷೇತ್ರದಲ್ಲಿ ಗೆಲುವು ಸಾಧಿಸಿ ಅಧಿಕಾರಕ್ಕೆ ಬಂದಿದೆ. ಆ ವೇಳೆ ಇವಿಎಂ ಮೇಲೆ ಇಲ್ಲದಿರುವ ಅನುಮಾನ ಮಹಾರಾಷ್ಟ್ರದಲ್ಲಿ ಬಿಜೆಪಿ ಗೆಲುವು ಸಾಧಿಸಿದ ತಕ್ಷಣ ಯಾಕೆ ಬರುತ್ತದೆ ಎಂದು ಪ್ರಶ್ನಿಸಿದ್ದಾರೆ.