ಅಯೋಧ್ಯೆ: ರಾಮಮಂದಿರ ಚಳವಳಿಯ ಮುಂಚೂಣಿಯಲ್ಲಿದ್ದ ಬಿಜೆಪಿ ಮುತ್ಸದ್ಧಿಗಳಾದ ಎಲ್.ಕೆ.ಅಡ್ವಾಣಿ ಮತ್ತು ಮುರಳಿ ಮನೋಹರ ಜೋಶಿಯವರನ್ನು ರಾಮಮಂದಿರ ಉದ್ಘಾಟನಾ ಸಮಾರಂಭಕ್ಕೆ ಆಗಮಿಸಿದಂತೆ ಮಂದಿರ ಟ್ರಸ್ಟ್ ಮನವಿ ಮಾಡಿದೆ.
ಈ ಇಬ್ಬರು ಹಿರಿಯ ಮುತ್ಸದ್ಧಿಗಳಿಗೆ ವಯಸ್ಸು ಮತ್ತು ಆರೋಗ್ಯ ಸಮಸ್ಯೆಯಿರುವ ಹಿನ್ನೆಲೆಯಲ್ಲಿ ೨೦೨೪ರ ಜನವರಿ ತಿಂಗಳಿನಲ್ಲಿ ನಡೆಯುವ ರಾಮಮಂದಿರ ಉದ್ಘಾಟನಾ ಸಮಾರಂಭಕ್ಕೆ ಗೈರುಹಾಜರಾಗುವ ಎಲ್ಲ ಸಾಧ್ಯತೆಗಳಿವೆ ಎಂದು ಮಂದಿರ ಟ್ರಸ್ಟ್ ಬಹಿರಂಗಪಡಿಸಿದೆ.
“ಅತ್ಯಂತ ಹಿರಿಯರಾಗಿರುವ ಎಲ್ ಕೆ ಅಡ್ವಾಣಿ ಮತ್ತು ಜೋಶಿ ಅವರಿಗೆ ಆರೋಗ್ಯ ಸಮಸ್ಯೆಯಿದ್ದು, ಈ ಹಿನ್ನೆಲೆಯಲ್ಲಿ ರಾಮಮಂದಿರ ಉದ್ಘಾಟನಾ ಸಮಾರಂಭಕ್ಕೆ ಆಗಮಿಸದಂತೆ ಮನವಿ ಮಾಡಿಕೊಳ್ಳಲಾಗಿದ್ದು, ಇದಕ್ಕೆ ಇಬ್ಬರೂ ಒಪ್ಪಿಕೊಂಡಿದ್ದಾರೆ” ಎಂದು ರಾಮಮಂದಿರ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ತಿಳಿಸಿದ್ದಾರೆ.
ಜನವರಿ 22ರಂದು ನಡೆಯುವ ಪ್ರತಿಷ್ಠೆ ಕಾರ್ಯಕ್ಕೆ ಸಿದ್ಧತೆಗಳು ಭರದಿಂದ ಸಾಗುತ್ತಿದ್ದು, ಜನವರಿ 15ರ ವೇಳೆಗೆ ಎಲ್ಲ ಸಿದ್ಧತೆಗಳು ಪೂರ್ಣಗೊಳ್ಳಲಿದ್ದು, ಪ್ರಾಣ ಪ್ರತಿಷ್ಠೆಯ ಪೂಜಾ ವಿಧಿವಿಧಾನಗಳು ಜನವರಿ 16ರಂದು ಆರಂಭವಾಗಿ 22ರವರೆಗೂ ಮುಂದುವರಿಯಲಿವೆ ಎಂದು ವಿವರಿಸಿದರು. ಈ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಬಾಗವಹಿಸಲಿದ್ದಾರೆ ಎಂದು ಟ್ರಸ್ಟಿ ರಾಯ್ ಸ್ಪಷ್ಟಪಡಿಸಿದರು.