Uncategorized

ರಾಮಮಂದಿರ ಉದ್ಘಾಟನಾ ಸಮಾರಂಭಕ್ಕೆ ಅಡ್ವಾಣಿ, ಜೋಶಿ ಆಗಮಿಸದಂತೆ ಮಂದಿರ ಟ್ರಸ್ಟ್‌ ಮನವಿ

ಅಯೋಧ್ಯೆ: ರಾಮಮಂದಿರ ಚಳವಳಿಯ ಮುಂಚೂಣಿಯಲ್ಲಿದ್ದ ಬಿಜೆಪಿ ಮುತ್ಸದ್ಧಿಗಳಾದ ಎಲ್.ಕೆ.ಅಡ್ವಾಣಿ ಮತ್ತು ಮುರಳಿ ಮನೋಹರ ಜೋಶಿಯವರನ್ನು ರಾಮಮಂದಿರ ಉದ್ಘಾಟನಾ ಸಮಾರಂಭಕ್ಕೆ ಆಗಮಿಸಿದಂತೆ ಮಂದಿರ ಟ್ರಸ್ಟ್‌ ಮನವಿ ಮಾಡಿದೆ.

ಈ ಇಬ್ಬರು ಹಿರಿಯ ಮುತ್ಸದ್ಧಿಗಳಿಗೆ ವಯಸ್ಸು ಮತ್ತು ಆರೋಗ್ಯ ಸಮಸ್ಯೆಯಿರುವ ಹಿನ್ನೆಲೆಯಲ್ಲಿ ೨೦೨೪ರ ಜನವರಿ ತಿಂಗಳಿನಲ್ಲಿ ನಡೆಯುವ ರಾಮಮಂದಿರ ಉದ್ಘಾಟನಾ ಸಮಾರಂಭಕ್ಕೆ ಗೈರುಹಾಜರಾಗುವ ಎಲ್ಲ ಸಾಧ್ಯತೆಗಳಿವೆ ಎಂದು ಮಂದಿರ ಟ್ರಸ್ಟ್ ಬಹಿರಂಗಪಡಿಸಿದೆ.

“ಅತ್ಯಂತ ಹಿರಿಯರಾಗಿರುವ ಎಲ್‌ ಕೆ ಅಡ್ವಾಣಿ ಮತ್ತು ಜೋಶಿ ಅವರಿಗೆ ಆರೋಗ್ಯ ಸಮಸ್ಯೆಯಿದ್ದು, ಈ ಹಿನ್ನೆಲೆಯಲ್ಲಿ ರಾಮಮಂದಿರ ಉದ್ಘಾಟನಾ ಸಮಾರಂಭಕ್ಕೆ ಆಗಮಿಸದಂತೆ ಮನವಿ ಮಾಡಿಕೊಳ್ಳಲಾಗಿದ್ದು, ಇದಕ್ಕೆ ಇಬ್ಬರೂ ಒಪ್ಪಿಕೊಂಡಿದ್ದಾರೆ” ಎಂದು ರಾಮಮಂದಿರ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ತಿಳಿಸಿದ್ದಾರೆ.

ಜನವರಿ 22ರಂದು ನಡೆಯುವ ಪ್ರತಿಷ್ಠೆ ಕಾರ್ಯಕ್ಕೆ ಸಿದ್ಧತೆಗಳು ಭರದಿಂದ ಸಾಗುತ್ತಿದ್ದು, ಜನವರಿ 15ರ ವೇಳೆಗೆ ಎಲ್ಲ ಸಿದ್ಧತೆಗಳು ಪೂರ್ಣಗೊಳ್ಳಲಿದ್ದು, ಪ್ರಾಣ ಪ್ರತಿಷ್ಠೆಯ ಪೂಜಾ ವಿಧಿವಿಧಾನಗಳು ಜನವರಿ 16ರಂದು ಆರಂಭವಾಗಿ 22ರವರೆಗೂ ಮುಂದುವರಿಯಲಿವೆ ಎಂದು ವಿವರಿಸಿದರು. ಈ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಬಾಗವಹಿಸಲಿದ್ದಾರೆ ಎಂದು ಟ್ರಸ್ಟಿ ರಾಯ್ ಸ್ಪಷ್ಟಪಡಿಸಿದರು.

 

andolanait

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

4 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

5 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

6 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

9 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

10 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

10 hours ago