ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20 ರಿಂದ 22 ರವರೆಗೆ ನಡೆಯುತ್ತಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಜಿಲ್ಲೆಯಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಸಮ್ಮೇಳನ ಕಾರ್ಯಕ್ರಮದಲ್ಲಿ ಭಾಗವಹಿಸುವ ಮೂಲಕ ಸಮ್ಮೇಳವನ್ನು ಯಶಸ್ವಿಗೊಳಿಸಬೇಕಾಗಿರುತ್ತದೆ. ಆದ್ದರಿಂದ ಡಿಸೆಂಬರ್ 20 ಮತ್ತು 21 ರಂದು ಜಿಲ್ಲೆಯ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಕನ್ನಡದ ಐಕ್ಯತೆಯ ಧೋತಕವಾಗಿ ನಮ್ಮ ಸಾಹಿತ್ಯ-ಸಂಸ್ಕೃತಿ-ಪರಂಪರೆಯನ್ನು ಬಿಂಬಿಸುವ ಹಾಗೂ ನಾಡು-ನುಡಿಯ ಬಗೆಗಿನ ಅಭಿಮಾನವನ್ನು ಮೂಡಿಸುವ ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು, ಉಪಾನ್ಯಾಸಕರು ಭಾಗವಹಿಸುವ ಮೂಲಕ ಸಾಹಿತ್ಯಾಭಿರುಚಿ ಹೆಚ್ಚಿಸಿಕೊಳ್ಳವ ಮತ್ತು ಕನ್ನಡ ನಾಡು ನುಡಿ ಬಗ್ಗೆ ವಿವಿಧ ಗೋಷ್ಠಿಗಳು ಇರುವುದರಿಂದ ಜ್ಞಾನಾರ್ಜನ ಹೆಚ್ಚಿಸಿಕೊಳ್ಳುವ ಉದ್ದೇಶದಿಂದ ಡಿಸೆಂಬರ್ 20 ಮತ್ತು 21 ರಂದು ಜಿಲ್ಲೆಯ ಎಲ್ಲಾ ಸರ್ಕಾರಿ, ಅನುದಾನ, ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಜಿಲ್ಲಾಡಳಿತ ಎರಡು ದಿನಗಳ ರಜೆ ಘೋಷಿಸಿದೆ.
ಸದರಿ ರಜೆ ಅವಧಿಯನ್ನು ಸರ್ಕಾರಿ ರಜಾ ದಿನದಂದು ಸರಿದೂಗಿಸಿ ಪಾಠ-ಪ್ರವಚನ ನಡೆಸಬೇಕೆಂದು ಮಂಡ್ಯ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ ಕುಮಾರ ಆದೇಶ ಹೊರಡಿಸಿದ್ದಾರೆ.
ತುಮಕೂರು : ರಸ್ತೆಯಲ್ಲಿ ನಿಲ್ಲಿಸಿದ್ದ ಕಾರನ್ನು ತೋ ಮಾಡಿಕೊಂಡು ಠಾಣೆಗೆ ತಂದಿದ್ದ ಕಾರನ್ನು ಬಿಡುಗಡೆ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟು…
ಮೈಸೂರು : ಮಾದಕ ವಸ್ತು ತಯಾರಿಕೆ ಶಂಕೆ ಮೇರೆಗೆ ಮನೆಯೊಂದರ ಮೇಲೆ ಮೈಸೂರು ದಕ್ಷಿಣ ಪೊಲೀಸ್ ಠಾಣೆ ಪೊಲೀಸರು ದಾಳಿ…
ಮೈಸೂರು : ಕಡಿಮೆ ಬಡ್ಡಿ ದರದಲ್ಲಿ ಚಿನ್ನಾಭರಣದ ಮೇಲೆ ಸಾಲ ನೀಡುವುದಾಗಿ ನಂಬಿಸಿ ಗ್ರಾಹಕರಿಂದ ಚಿನ್ನಾಭರಣ ಪಡೆದು ವಂಚಿಸಿ ಪರಾರಿಯಾಗಿದ್ದ…
ಹೊಸದಿಲ್ಲಿ : ನಾಳೆ ಕೇಂದ್ರ ಸರ್ಕಾರದ 2026-27 ಸಾಲಿನ ಆಯವ್ಯಯ ಮಂಡನೆಯಾಗಲಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಂಸತ್ತಿನಲ್ಲಿ…
ಮಳವಳ್ಳಿ : ಪಟ್ಟಣದ ಗ್ರಾಮ ದೇವತೆಗಳಾದ ಶ್ರೀ ಪಟ್ಟಲದಮ್ಮ-ದಂಡಿನ ಮಾರಮ್ಮ ಶಕ್ತಿ ದೇವತೆಗಳ ಸಿಡಿ ಜಾತ್ರಾ ಮಹೋತ್ಸವ ಸಂಪನ್ನಗೊಂಡಿತು. ಜ.27ರಿಂದ…
ಬೆಂಗಳೂರು : ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಛಿಡೆಂಟ್ ಗ್ರೂಪ್ ಅಧ್ಯಕ್ಷ ಮತ್ತು ಸಂಸ್ಥಾಪಕ ಸಿ.ಜೆ.ರಾಯ್ ಅವರು ಶುಕ್ರವಾರ ತಮ್ಮ…