ಬೆಳಗಾವಿ: ಗಡಿನಾಡು ಬೆಳಗಾವಿಯಲ್ಲಿ ಕನ್ನಡಿಗರ ಮನಸ್ಸು ಸಂಭ್ರಮದಲ್ಲಿ ತೇಲಾಡುತ್ತಿರುವಾಗಲೇ ಪೊಲೀಸರ ಅನುಮತಿ ಇಲ್ಲದಿದ್ದರೂ ಇತ್ತ ಮಹಾರಾಷ್ಟ್ರ ಏಕೀಕರಣ ಸಮಿತಿ(ಎಂಇಎಸ್) ಪ್ರತಿ ವರ್ಷದಂತೆ ಕರ್ನಾಟಕ ರಾಜ್ಯೋತ್ಸವದಂದೇ ಕಪ್ಪು ಬಟ್ಟೆ ಧರಿಸಿ ಕರಾಳ ದಿನ ಆಚರಿಸುವ ಮೂಲಕ ಕನ್ನಡಿಗರ ಆಕ್ರೋಶಕ್ಕೆ ಕಾರಣವಾಯಿತು.
ಬೆಳಗಾವಿ, ಬೀದರ, ನಿಪ್ಪಾಣಿ, ಕಾರವಾರ, ಭಾಲ್ಕಿ ಮಹಾರಾಷ್ಟ್ರಕ್ಕೆ ಸೇರಿಸಬೇಕು ಎಂದು ಆಗ್ರಹಿಸಿ ಎಂಇಎಸ್ ವತಿಯಿಂದ ನಡೆದ ಕರಾಳ ದಿನಾಚರಣೆಯಲ್ಲಿ ಕಾರ್ಯಕರ್ತರು ಸೇರಿ ಕನ್ನಡಿಗರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ನಗರದ ಧರ್ಮವೀರ ಸಂಭಾಜಿ ವೃತ್ತದಿಂದ ಆರಂಭಿಸಿದ ಸೈಕಲ್ ರ‍್ಯಾಲಿ ಹಾಗೂ ಕಾಲ್ನಡಿಗೆ ರ‍್ಯಾಲಿ ನಗರದ ಪ್ರಮುಖ ಬೀದಿಗಳಲ್ಲಿ ಸಾಗಿತು. ನಂತರ ಮರಾಠಾ ಮಂದಿರದಲ್ಲಿ ಸಭೆ ನಡೆಸಿ ಮುಕ್ತಾಯಗೊಳಿಸಿದರು.
ಕರ್ನಾಟಕ ಸರ್ಕಾರ ಸೇರಿದಂತೆ ನಾಡದ್ರೋಹಿ ಘೋಷಣೆಗಳನ್ನು ಕೂಗಿದ ಎಂಇಎಸ್ ಕಾರ್ಯಕರ್ತರ ಕರಾಳ ದಿನಾಚರಣೆ ರ‍್ಯಾಲಿಯಲ್ಲಿ ಚಿಕ್ಕ ಚಿಕ್ಕ ಮಕ್ಕಳನ್ನು ಸೇರಿದಿದ್ದರು. ಏನೂ ಅರಿಯದ ಮುಗ್ಧ ಮಕ್ಕಳ ತಲೆಯಲ್ಲಿಯೂ ನಾಡದ್ರೋಹದ ಬೀಜ ಬಿತ್ತುತ್ತಿರುವುದು ಕನ್ನಡಿಗರನ್ನು ಕೆರಳಿಸಿದೆ. ಚಿಕ್ಕ ಚಿಕ್ಕ ಮಕ್ಕಳು ಕಪ್ಪು ಬಟ್ಟೆ ಧರಿಸಿ, ಕಪ್ಪು ಪಟ್ಟಿ ಕಟ್ಟಿಕೊಂಡು, ಕೈಯಲ್ಲಿ ಕಪ್ಪು ಧ್ವಜ ಹಾಗೂ ಕರ್ನಾಟಕ ಸರ್ಕಾರ ವಿರುದ್ಧದ ಫಲಕಗಳನ್ನು ನೀಡಿದ್ದು ಅಸಹ್ಯ ಎನಿಸುವಂತಿತ್ತು.
ಕರಾಳ ದಿನಾಚರಣೆ ಹಿನ್ನೆಲೆಯಲ್ಲಿ ಧರ್ಮವೀರ ಸಂಭಾಜಿ ವೃತ್ತದಿಂದ ಮುಂದೆ ಸಾಗುವ ಎಲ್ಲ ಮಾರ್ಗಗಳನ್ನು ಬ್ಯಾರಿಕೇಡ್ ಹಾಕಿ ಬಂದ್ ಮಾಡಲಾಗಿತ್ತು. ಎಲ್ಲ ಕಡೆಯೂ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿತ್ತು.
ಕಾಡಾನೆಗಳ ಹಾವಳಿಯಿಂದಾಗಿ ಕಾಡಂಚಿನ ಜನರಿಗೆ ತೊಂದರೆಯಾಗುತ್ತಿದೆ. ಆದ್ದರಿಂದ ಆನೆಗಳನ್ನು ಕೊಲ್ಲಲು ಅನುಮತಿ ನೀಡಬೇಕು ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ…
ರಾಜ್ಯಸಭೆಯ ಕಲಾಪದ ವೇಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾತನಾಡುವ ಭರದಲ್ಲಿ ಕೆಲವರು ಅಂಬೇಡ್ಕರ್ ಎನ್ನುವುದನ್ನು ಈಗ ಫ್ಯಾಷನ್…
ದಾ.ರಾ. ಮಹೇಶ್ ವೀರನಹೊಸಹಳ್ಳಿ: ತಾಲ್ಲೂಕಿನ ಬನ್ನಿಕುಪ್ಪೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿತ್ಯ ಅವರೆಕಾಯಿ ಮಾರಾಟದಿಂದಾಗಿ ಟ್ರಾಫಿಕ್ ಜಾಮ್ ಆಗುತ್ತಿದ್ದು, ವಾಹನಗಳ ಸಂಚಾರಕ್ಕೆ…
ಮಂಡ್ಯ: ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20,21 ಮತ್ತು 22ರಂದು ಮೂರು ದಿನಗಳ ಕಾಲ ಜರುಗಲಿರುವ ಕನ್ನಡ ನುಡಿ ಜಾತ್ರೆ…
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…