Categories: Uncategorized

ನಾಳೆಯಿಂದ ಸಂಸತ್‌ನ ಮುಂಗಾರು ಅಧಿವೇಶನ ಆರಂಭ

ಹೊಸದಿಲ್ಲಿ : ಸೋಮವಾರ ಆರಂಭವಾಗಲಿರುವ ಸಂಸತ್‌ನ ಮುಂಗಾರು ಅಧಿವೇಶನಕ್ಕೂ ಮುನ್ನ ಕೇಂದ್ರ ಸರ್ಕಾರ ಭಾನುವಾರ ಕರೆದಿದ್ದ ಸರ್ವಪಕ್ಷ ಸಭೆಯಲ್ಲಿ ‘ಬಿಹಾರದ ಮತದಾರರ ಪಟ್ಟಿ ಪರಿಷ್ಕರಣೆ, ಪಹಲ್ಗಾಮ್ ಉಗ್ರರ ದಾಳಿ ಮತ್ತು ಭಾರತ-ಪಾಕ್ ನಡುವಿನ ಕದನ ವಿರಾಮಕ್ಕೆ ಸಂಬಂಧಿಸಿದಂತೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ವಿಪಕ್ಷಗಳು ಧ್ವನಿ ಎತ್ತಿವೆ.

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ವಿವಿಧ ರಾಜಕೀಯ ಪಕ್ಷಗಳ ನಾಯಕರು ಭಾಗವಹಿಸಿದ್ದರು. ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು, ಅರ್ಜುನ್ ರಾಮ್ ಮೇಘವಾಲ್ ಕೂಡ ಸಭೆಯಲ್ಲಿ ಉಪಸ್ಥಿತರಿದ್ದರು.

ಸುಗಮವಾಗಿ ಕಲಾಪ ನಡೆಯಲು ಸಹಕಾರ ನೀಡಬೇಕು ಎಂದು ಜೆ.ಪಿ.ನಡ್ಡಾ ಅವರು ವಿಪಕ್ಷ ನಾಯಕರಲ್ಲಿ ಮನವಿ ಮಾಡಿದ್ದಾರೆ. ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್ ನಾಯಕ ಗೌರವ್ ಗೊಗೊಯ್, ‘ಭಾರತ ಮತ್ತು ಪಾಕ್ ನಡುವಿನ ಕದನ ವಿರಾಮಕ್ಕೆ ಸಂಬಂಧಿಸಿದ ಟ್ರಂಪ್ ಅವರ ಹೇಳಿಕೆಗಳು, ಪಹಲ್ಗಾಮ್ ದಾಳಿಗೆ ಕಾರಣವಾದ ಲೋಪಗಳು, ಬಿಹಾರದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಯ (ಎಸ್‌ಐಆರ್) ಕುರಿತು ಪ್ರಧಾನಿ ಮೋದಿ ಅವರು ಉತ್ತರಿಸಬೇಕು’ ಎಂದು ಆಗ್ರಹಿಸಿರುವುದಾಗಿ ತಿಳಿಸಿದ್ದಾರೆ.

‘ನಮ್ಮ ಪಕ್ಷ ಎತ್ತಿರುವ ಪ್ರಮುಖ ವಿಷಯಗಳ ಕುರಿತು ಸಂಸತ್ತಿನಲ್ಲಿ ಹೇಳಿಕೆ ನೀಡುವುದು ಪ್ರಧಾನಿ ಮೋದಿಯವರ ಕರ್ತವ್ಯ. ಬಿಹಾರದ ಎಸ್‌ಐಆರ್ ಚುನಾವಣಾ ಹಗರಣ, ಭಾರತ ಮತ್ತು ಪಾಕಿಸ್ತಾನದ ನಡುವೆ ಕದನ ವಿರಾಮಕ್ಕೆ ಮಧ್ಯವರ್ತಿಯಾಗಿ ಟ್ರಂಪ್ ಅವರ ಹೇಳಿಕೆಗಳ ಬಗ್ಗೆ ಸಭೆಯಲ್ಲಿ ಪ್ರಸ್ತಾಪಿಸಲಾಯಿತು’ ಎಂದು ಆಮ್ ಆದ್ಮಿ ಪಕ್ಷದ (ಎಎಪಿ) ಸಂಜಯ್ ಸಿಂಗ್ ತಿಳಿಸಿದ್ದಾರೆ.

‘ರಾಜ್ಯಗಳಲ್ಲಿ ಕಾನೂನು ಮತ್ತು ಸುವ್ಯವಸ್ಥೆ ವಿಫಲವಾಗುತ್ತಿರುವುದರಿಂದ ಕೇಂದ್ರ ಸರ್ಕಾರ ಜವಾಬ್ದಾರಿಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಸಂಸತ್ನಲ್ಲಿ ಇದರ ಬಗ್ಗೆ ಚರ್ಚಿಸಬೇಕು. ವಿಶೇಷವಾಗಿ ಒಡಿಶಾದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವಲ್ಲಿ ಬಿಜೆಪಿ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ’ ಎಂದು ದೂರಿರುವ ಬಿಜೆಡಿಯ ಸಸ್ಮಿತ್ ಪಾತ್ರ, ಇತ್ತೀಚಿನ ಕಾಲೇಜು ವಿದ್ಯಾರ್ಥಿನಿಯ ಆತ್ಮಹತ್ಯೆ ಪ್ರಕರಣ ಮತ್ತು 15 ವರ್ಷದ ಬಾಲಕನಿಗೆ ಪುರುಷರ ಗುಂಪೊಂದು ಬೆಂಕಿ ಹಚ್ಚಿದ ಘಟನೆಯನ್ನು ಉಲ್ಲೇಖಿಸುತ್ತಿದ್ದಾರೆ.

ಸಭೆಯಲ್ಲಿ ಕಾಂಗ್ರೆಸ್ನ ಗೌರವ್ ಗೊಗೊಯ್ ಮತ್ತು ಜೈರಾಮ್ ರಮೇಶ್, ಎನ್ಸಿಪಿ (ಶರದ್ ಪವಾರ್ ಬಣ) ಸುಪ್ರಿಯಾ ಸುಳೆ, ಡಿಎಂಕೆಯ ಟಿ.ಆರ್. ಬಾಲು ಮತ್ತು ಆರ್ಪಿಐ (ಎ) ನಾಯಕ, ಕೇಂದ್ರ ಸಚಿವ ರಾಮದಾಸ್ ಅಠಾವಳೆ ಭಾಗವಹಿಸಿದ್ದರು.

ಕಾಂಗ್ರೆಸ್, ಬಿಜೆಪಿ, ಟಿಎಂಸಿ, ಡಿಎಂಕೆ, ಜೆಡಿಯು, ಸಿಪಿಎಂ, ಸಿಪಿಐ, ಶಿವಸೇನಾ, ಜನಸೇನಾ ಹಾಗೂ ಎನ್ಸಿಪಿ(ಎಸ್ಪಿ) ಪಕ್ಷಗಳಿಗೆ ಸೇರಿದ 50 ಸಂಸದರು ರಾಜ್ಯಸಭೆ ಮತ್ತು ಲೋಕಸಭೆಯಲ್ಲಿ ಶೂನ್ಯ ವೇಳೆ ವಿವಿಧ ವಿಚಾರಗಳಿಗೆ ಸಂಬಂಧಿಸಿದ ಪ್ರಶ್ನೆಗಳನ್ನು ಕೇಳಲು ಸಜ್ಜಾಗಿದ್ದಾರೆ. ವಿವಿಧ ಪಕ್ಷಗಳ ಸಂಸದರಿಂದ 34 ಪ್ರಶ್ನೆಗಳ ಸಲ್ಲಿಕೆಯಾಗಿವೆ ಎಂದು ಮೂಲಗಳು ತಿಳಿಸಿವೆ.

ಈ ಪೈಕಿ, ಏರ್ ಇಂಡಿಯಾ ವಿಮಾನ ಪತನಕ್ಕೆ ಸಂಬಂಧಿಸಿ ಲೋಕಸಭೆಯಲ್ಲಿ 23 ಪ್ರಶ್ನೆಗಳು ಹಾಗೂ ರಾಜ್ಯಸಭೆಯಲ್ಲಿ 11 ಪ್ರಶ್ನೆಗಳನ್ನು ಕೇಳಲಾಗುತ್ತದೆ ಎಂದು ತಿಳಿದುಬಂದಿದೆ.

ಆಂದೋಲನ ಡೆಸ್ಕ್

Recent Posts

ಮಂಡ್ಯ ಕೋರ್ಟ್‌ಗೆ ಮತ್ತೆ ಬಾಂಬ್ ಬೆದರಿಕೆ : ಸ್ಥಳಕ್ಕೆ ಪೊಲೀಸ್-ಬಾಂಬ್ ಸ್ಕ್ವಾಡ್ ದೌಡು

ಮಂಡ್ಯ : ಮಂಡ್ಯ ಜಿಲ್ಲಾ ನ್ಯಾಯಾಲಯಕ್ಕೆ ಮತ್ತೊಮ್ಮೆ ಬಾಂಬ್ ಬೆದರಿಕೆ ಬಂದಿದ್ದು, ಇ-ಮೇಲ್ ಮೂಲಕ “ಕೋರ್ಟ್‌ನಲ್ಲಿ ಬಾಂಬ್ ಇಟ್ಟಿದ್ದೇವೆ” ಎಂದು…

27 mins ago

ಯುದ್ಧ ನಿಲ್ಲಿಸಲು 3 ಷರತ್ತು ಮುಂದಿಟ್ಟ ಇರಾನ್‌!

ಹೊಸದಿಲ್ಲಿ : ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಬೆನ್ನಲ್ಲೇ ಅಮೆರಿಕಾ ಹಾಗೂ ಇಸ್ರೇಲ್ ಜೊತೆ ನಡೆಯುತ್ತಿರುವ ಸಂಘರ್ಷವನ್ನು ಅಂತ್ಯಗೊಳಿಸಲು…

37 mins ago

ಅಮೆರಿಕ ತೈಲ ಟ್ಯಾಂಕರ್ ಮೇಲೆ ಇರಾನ್ ಡ್ರೋನ್ ದಾಳಿ, ಭಾರತೀಯ ನಾವಿಕ ಸಾವು

ಹೊಸದಿಲ್ಲಿ : ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧ ಪರಿಸ್ಥಿತಿ ದಿನದಿಂದ ದಿನಕ್ಕೆ ಮತ್ತಷ್ಟು ಉದ್ವಿಗ್ನವಾಗುತ್ತಿದೆ. ಇರಾನ್ ಹಾಗೂ ಅಮೆರಿಕ-ಇಸ್ರೇಲ್ ನಡುವಿನ ಸಂಘರ್ಷದ…

57 mins ago

ವಿಶ್ವಕಪ್‌ ಗೆದ್ದ ಬಳಿಕ ರೈಲು ಹತ್ತಿ ಬಂದ ಶಿವಂ ದುಬೆ!

ಮುಂಬೈ : ಭಾರತ ತಂಡ ಟಿ20 ವಿಶ್ವಕಪ್ 2026ರಲ್ಲಿ ನ್ಯೂಜಿಲೆಂಡ್‌ನ್ನು 96 ರನ್‌ಗಳಿಂದ ಮಣಿಸಿ ಐತಿಹಾಸಿಕ ಗೆಲುವು ಸಾಧಿಸಿದೆ. ಫೈನಲ್‌ನಲ್ಲಿ…

1 hour ago

ಫಾರುಕ್ ಹತ್ಯೆ ಯತ್ನ : ಆರೋಪಿ ಕಮಲ್‌ ಸಿಂಗ್‌ ಹೇಳಿದ್ದೇನು?

ಜಮ್ಮು : ರಾಷ್ಟ್ರೀಯ ಸಮ್ಮೇಳನ ಅಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಡಾ. ಫಾರುಕ್ ಅಬ್ದುಲ್ಲಾ ಅವರ ಮೇಲೆ ಬುಧವಾರ ಸಂಜೆ…

1 hour ago

ಅಡುಗೆ ಅನಿಲ ಕೊರತೆ ; ಸಂಸದರು ಬಾಯಿ ಬಿಡಬೇಕು ; ಡಿ.ಕೆ.ಶಿವಕುಮಾರ್‌

ಬೆಂಗಳೂರು : ಬೇರೆ ವಿಚಾರಗಳಲ್ಲಿ ಮಾತನಾಡುವ ಸಂಸದರು ಅಡುಗೆ ಅನಿಲ ಕೊರತೆ ವಿಚಾರವಾಗಿ ಸಂಸತ್ತಿನಲ್ಲಿ ಮಾತನಾಡಬೇಕು. ರಾಜ್ಯಕ್ಕೆ ನ್ಯಾಯ ಒದಗಿಸಿಕೊಡಬೇಕು…

2 hours ago