ಮೈಸೂರು : ಅಯೋಧ್ಯೆಯಲ್ಲಿ ವಿರಾಜಮಾನರಾಗುತ್ತಿರುವ ರಾಮಲಲ್ಲಾ ವಿಗ್ರಹ ಕೆತ್ತನೆಗೆ ಶಿಲೆ ಸಿಕ್ಕ ಸ್ಥಳದಲ್ಲಿ ಏರ್ಪಡಿಸಿದ್ದ ಶ್ರೀ ರಾಮನ ಪೂಜೆಗೆ ಸಂಸದ ಪ್ರತಾಪ್ ಸಿಂಹ ಭೇಟಿ ನೀಡಿದ ವೇಳೆ ಸ್ಥಳೀಯ ಗ್ರಾಮಸ್ಥರು ಮತ್ತು ದಲಿತರು ಘೇರಾವ್ ಹಾಕಿ, ಪೂಜೆಗೆ ಅವಕಾಶ ಕಲ್ಪಿಸದೆ ವಾಪಸ್ ಕಳುಹಿಸಿದ ಘಟನೆ ಮೈಸೂರು ತಾಲೂಕು ಹಾರೋಹಳ್ಳಿಯಲ್ಲಿ ಇಂದು ಬೆಳಗ್ಗೆ ನಡೆದಿದೆ.
ಆಯೋಧ್ಯೆ ರಾಮ ಮಂದಿರದಲ್ಲಿ ಪ್ರಾಣ ಪ್ರತಿಷ್ಠಾಪನೆಯ ರಾಮಲಲ್ಲಾ ಮೂರ್ತಿಯ ಕೃಷ್ಣ ಶಿಲೆ ಕಲ್ಲು ಹಾರೋಹಳ್ಳಿ ಬಳಿಯ ಗಯಜ್ಜೇಗೌಡನಪುರದ ರಾಮದಾಸ್ ಅವರ ಜಮೀನಿನಲ್ಲಿ ಸಿಕ್ಕಿತ್ತು. ಈ ಜಾಗದಲ್ಲಿ ರಾಮಮಂದಿರ ನಿರ್ಮಾಣ ಮಾಡುವುದಾಗಿ ಸ್ಥಳೀಯ ಶಾಸಕ ಜಿ.ಟಿ.ದೇವೇಗೌಡ ನೇತೃತ್ವದಲ್ಲಿ ಸೋಮವಾರ ಬೆಳಗ್ಗೆ ಭೂಮಿಪೂಜೆ ಮತ್ತು ರಾಮನ ಪೂಜೆ ಏರ್ಪಡಿಸಲಾಗಿತ್ತು.
ಸ್ಥಳಕ್ಕೆ ಸಂಸದ ಪ್ರತಾಪ್ ಸಿಂಹ ಇಂದು ಬೆಳಗ್ಗೆ ಆಗಮಿಸುತ್ತಿದ್ದಂತೆ ಸ್ಥಳೀಯ ಗ್ರಾಮಸ್ಥರು ಮತ್ತು ದಲಿತ ಮುಖಂಡರು ಜಮೀನಿನ ಬಳಿಯೇ ತಡೆದು ಘೇರಾವ್ ಮಾಡಿ “ಗೋ ಬ್ಯಾಕ್ ಪ್ರತಾಪ್ ಸಿಂಹ’, ‘ದಲಿತ ವಿರೋಧಿ ಪ್ರತಾಪ್ ಸಿಂಹನಿಗೆ ಧಿಕ್ಕಾರ’.. ಇತ್ಯಾದಿ ಘೋಷಣೆಗಳನ್ನು ಕೂಗಿದರು.
ಮಾಜಿ ತಾಪಂ ಸದಸ್ಯ ಹಾರೋಹಳ್ಳಿ ಸುರೇಶ್ ಮಾತನಾಡಿ, ”ನೀವೊಬ್ಬ ದಲಿತ ವಿರೋಧಿ. ನಿಮ್ಮ ನಡವಳಿಕೆಯಿಂದ ದಲಿತರ ಭಾವನೆಗೆ ಧಕ್ಕೆಯುಂಟಾಗಿದೆ. ಮಹಿಷ ದಸರಾ ಆಚರಣೆ ಸಂದರ್ಭದಲ್ಲಿ ದಲಿತರನ್ನು ತುಳಿದು ಹಾಕಿ ಬಿಡುತ್ತೇನೆ, ಹೊಸಕಿ ಹಾಕಿ ಬಿಡುತ್ತೇನೆ ಎಂದು ಬೆದರಿಸಿದ್ದ ನೀವು ದಲಿತರ ಜಮೀನಿಗೆ ಏಕೆ ಬರುತ್ತೀರಿ? ಇಲ್ಲಿಂದ ಹೊರ ನಡೆಯಿರಿ” ಎಂದು ಹೇಳಿದರು.
ಈ ವೇಳೆ ಸಂಸದ ಪ್ರತಾಪ್ ಸಿಂಹ, “ನನ್ನ ಹೇಳಿಕೆಯನ್ನು ತಿರುಚಲಾಗಿದೆ. ನಾನು ದಲಿತ ವಿರೋಧಿಯಲ್ಲ” ಎಂದು ಪರಿಸ್ಥಿತಿ ತಿಳಿಗೊಳಿಸಲು ಪ್ರಯತ್ನ ಮಾಡಿದರು, ಸಮಾಧಾನಗೊಳ್ಳದ ಗ್ರಾಮಸ್ಥರು, “ನೀವು ಏನು ಹೇಳುವುದು ಬೇಡ, ಇಲ್ಲಿಂದ ವಾಪಸ್ ಹೋಗಿ” ಪಟ್ಟು ಹಿಡಿದರು.
ಗುವಹಾಟಿ : ಆರಂಭದಲ್ಲಿ ಬೌಲರ್‌ಗಳ ಅಬ್ಬರ ನಂತರ ವೈಭವ್ ಸೂರ್ಯವಂಶಿ ಅವರ ಸ್ಫೋಟಕ ಅರ್ಧಶತಕದ ಆಟದಿಂದ ಚೆನ್ನೈ ಸೂಪರ್ ಕಿಂಗ್ಸ್…
ಮೈಸೂರು: ನಗರದ ಪ್ರತಿಷ್ಠಿತ ಮೈಸೂರು ರೇಸ್ ಕ್ಲಬ್ ಸದಸ್ಯರಾಗಿ ಗೀತಿಕಾ ಬಸಪ್ಪ (152 ಮತ), ಡಾ.ಕೆ.ರವಿ (147), ಕಲೆಂಗಡ ಮಂದಣ್ಣ…
ಬೆಂಗಳೂರು : ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಯಾಣವು ಡಿಜಿಟಲ್ ರೂಪಾಂತರದ ಹೊಸ್ತಿಲಲ್ಲಿದ್ದು, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು…
ಟೆಹ್ರಾನ್ : ಅಮೆರಿಕದೊಂದಿಗೆ ಕದನ ವಿರಾಮಕ್ಕೆ ಸಂಬಂಧಿಸಿದಂತೆ ಯಾವುದೇ ನೇರ ಮಾತುಕತೆ ನಡೆದಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಇರಾನ್ ವಿದೇಶಾಂಗ…
ವಾಷಿಂಗ್ಟನ್ : ಹಾರ್ಮುಜ್ ಜಲಸಂಧಿಯನ್ನು ತಕ್ಷಣ ತೆರೆಯದಿದ್ದರೆ ಇರಾನ್‌ನ ಎಲ್ಲ ತೈಲ ಬಾವಿಗಳು ಮತ್ತು ಖಾರ್ಗ್ ದ್ವೀಪಗಳನ್ನು ಸಂಪೂರ್ಣವಾಗಿ ನಾಶಪಡಿಸುವುದಾಗಿ…
ಬೆಂಗಳೂರು : ದೇಶದಲ್ಲಿ ಮೊದಲ ಬಾರಿಗೆ ಮಕ್ಕಳಿಗೆ ಮೀಸಲಾಗಿ 450 ಹಾಸಿಗೆಗಳ ಬೃಹತ್, ಅತ್ಯಾಧುನಿಕ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಇಂದಿರಾ…