Uncategorized

ರಾಮನ ಪೂಜೆಗೆ ಅವಕಾಶ ನೀಡದೆ ಸಂಸದ ಪ್ರತಾಪ ಸಿಂಹಗೆ ದಲಿತರಿಂದ ಘೇರಾವ್‌!

ಮೈಸೂರು : ಅಯೋಧ್ಯೆಯಲ್ಲಿ ವಿರಾಜಮಾನರಾಗುತ್ತಿರುವ ರಾಮಲಲ್ಲಾ ವಿಗ್ರಹ ಕೆತ್ತನೆಗೆ ಶಿಲೆ ಸಿಕ್ಕ ಸ್ಥಳದಲ್ಲಿ ಏರ್ಪಡಿಸಿದ್ದ ಶ್ರೀ ರಾಮನ ಪೂಜೆಗೆ  ಸಂಸದ ಪ್ರತಾಪ್ ಸಿಂಹ ಭೇಟಿ ನೀಡಿದ ವೇಳೆ  ಸ್ಥಳೀಯ ಗ್ರಾಮಸ್ಥರು ಮತ್ತು ದಲಿತರು ಘೇರಾವ್ ಹಾಕಿ, ಪೂಜೆಗೆ ಅವಕಾಶ ಕಲ್ಪಿಸದೆ ವಾಪಸ್ ಕಳುಹಿಸಿದ ಘಟನೆ ಮೈಸೂರು ತಾಲೂಕು ಹಾರೋಹಳ್ಳಿಯಲ್ಲಿ ಇಂದು ಬೆಳಗ್ಗೆ ನಡೆದಿದೆ.

ಆಯೋಧ್ಯೆ ರಾಮ ಮಂದಿರದಲ್ಲಿ ಪ್ರಾಣ ಪ್ರತಿಷ್ಠಾಪನೆಯ ರಾಮಲಲ್ಲಾ ಮೂರ್ತಿಯ ಕೃಷ್ಣ ಶಿಲೆ ಕಲ್ಲು ಹಾರೋಹಳ್ಳಿ ಬಳಿಯ ಗಯಜ್ಜೇಗೌಡನಪುರದ ರಾಮದಾಸ್ ಅವರ ಜಮೀನಿನಲ್ಲಿ ಸಿಕ್ಕಿತ್ತು. ಈ ಜಾಗದಲ್ಲಿ ರಾಮಮಂದಿರ ನಿರ್ಮಾಣ ಮಾಡುವುದಾಗಿ ಸ್ಥಳೀಯ ಶಾಸಕ ಜಿ.ಟಿ.ದೇವೇಗೌಡ ನೇತೃತ್ವದಲ್ಲಿ ಸೋಮವಾರ ಬೆಳಗ್ಗೆ ಭೂಮಿಪೂಜೆ ಮತ್ತು ರಾಮನ ಪೂಜೆ ಏರ್ಪಡಿಸಲಾಗಿತ್ತು.

ಸ್ಥಳಕ್ಕೆ ಸಂಸದ ಪ್ರತಾಪ್ ಸಿಂಹ ಇಂದು ಬೆಳಗ್ಗೆ ಆಗಮಿಸುತ್ತಿದ್ದಂತೆ ಸ್ಥಳೀಯ ಗ್ರಾಮಸ್ಥರು ಮತ್ತು ದಲಿತ ಮುಖಂಡರು ಜಮೀನಿನ ಬಳಿಯೇ ತಡೆದು ಘೇರಾವ್ ಮಾಡಿ “ಗೋ ಬ್ಯಾಕ್ ಪ್ರತಾಪ್ ಸಿಂಹ’, ‘ದಲಿತ ವಿರೋಧಿ ಪ್ರತಾಪ್ ಸಿಂಹನಿಗೆ ಧಿಕ್ಕಾರ’.. ಇತ್ಯಾದಿ ಘೋಷಣೆಗಳನ್ನು ಕೂಗಿದರು.

ಮಾಜಿ ತಾಪಂ ಸದಸ್ಯ ಹಾರೋಹಳ್ಳಿ ಸುರೇಶ್ ಮಾತನಾಡಿ, ”ನೀವೊಬ್ಬ ದಲಿತ ವಿರೋಧಿ. ನಿಮ್ಮ ನಡವಳಿಕೆಯಿಂದ ದಲಿತರ ಭಾವನೆಗೆ ಧಕ್ಕೆಯುಂಟಾಗಿದೆ. ಮಹಿಷ ದಸರಾ ಆಚರಣೆ ಸಂದರ್ಭದಲ್ಲಿ ದಲಿತರನ್ನು ತುಳಿದು ಹಾಕಿ ಬಿಡುತ್ತೇನೆ, ಹೊಸಕಿ ಹಾಕಿ ಬಿಡುತ್ತೇನೆ ಎಂದು ಬೆದರಿಸಿದ್ದ ನೀವು ದಲಿತರ ಜಮೀನಿಗೆ ಏಕೆ ಬರುತ್ತೀರಿ? ಇಲ್ಲಿಂದ ಹೊರ ನಡೆಯಿರಿ” ಎಂದು ಹೇಳಿದರು.

ಈ ವೇಳೆ ಸಂಸದ ಪ್ರತಾಪ್ ಸಿಂಹ, “ನನ್ನ ಹೇಳಿಕೆಯನ್ನು ತಿರುಚಲಾಗಿದೆ. ನಾನು ದಲಿತ ವಿರೋಧಿಯಲ್ಲ” ಎಂದು ಪರಿಸ್ಥಿತಿ ತಿಳಿಗೊಳಿಸಲು ಪ್ರಯತ್ನ ಮಾಡಿದರು, ಸಮಾಧಾನಗೊಳ್ಳದ ಗ್ರಾಮಸ್ಥರು, “ನೀವು ಏನು ಹೇಳುವುದು ಬೇಡ, ಇಲ್ಲಿಂದ ವಾಪಸ್ ಹೋಗಿ” ಪಟ್ಟು ಹಿಡಿದರು.

andolanait

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

4 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

5 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

6 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

9 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

10 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

10 hours ago