Mysore
20
haze

Social Media

ಸೋಮವಾರ, 22 ಡಿಸೆಂಬರ್ 2025
Light
Dark

ಕೇಂದ್ರ ಸಚಿವ ಎಚ್‌ಡಿಕೆಗೆ ಸವಾಲು ಹಾಕಿದ ಸಚಿವ ಎನ್.ಚಲುವರಾಯಸ್ವಾಮಿ

ಮೈಸೂರು: ಬಾಯಿಗೆ ಬಂದಂತೆ ಮಾತನಾಡಿದರೆ ಕೇಳಿಸಿಕೊಳ್ಳೋಕೆ ನಾವು ಸಿದ್ಧರಿಲ್ಲ. ಇತಿಹಾಸದ ಚರ್ಚೆ ಅವಶ್ಯಕತೆ ಇದ್ದರೆ ಆಹ್ವಾನ ಕೊಡುತ್ತೇನೆ ಎಂದು ಸಚಿವ ಚಲುವರಾಯಸ್ವಾಮಿ ಸವಾಲು ಹಾಕಿದ್ದಾರೆ.

ಈ ಬಗ್ಗೆ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜಮೀರ್‌ ಹಾಗೂ ಆ ನಾಲ್ವರ ಜೊತೆ ಇದ್ದಿದ್ದು ನನ್ನ ಕರಾಳ ದಿನ ಎಂಬ ಕುಮಾರಸ್ವಾಮಿ ಹೇಳಿಕೆ ವಿರುದ್ಧ ವಾಗ್ದಾಳಿ ನಡೆಸಿದರು.

ನನಗೆ ಕುಮಾರಸ್ವಾಮಿಯವರಂತೆ ಮಾಧ್ಯಮದವರ ಮುಂದೆ ನಾಲಿಗೆ ಹರಿಬಿಡಲು ಸಾಧ್ಯವಿಲ್ಲ. ಅವರು ಚರ್ಚೆಗೆ ಬರುವುದಾದರೆ ಒಂದು ವೇದಿಕೆ ಸಿದ್ಧಮಾಡಿ. ಯಾರು ಹೊಲಸು, ಕಚಡ ಎಂದು ಚರ್ಚೆ ಮಾಡೋಣ ಎಂದು ಸವಾಲು ಹಾಕಿದರು.

ಇನ್ನು ಉಪಚುನಾವಣೆ ಸಂಬಂಧ ಮಾತನಾಡಿದ ಅವರು, ಮೂರು ಕ್ಷೇತ್ರಗಳಲ್ಲೂ ನಾವೇ ಗೆಲುವು ಸಾಧಿಸುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Tags:
error: Content is protected !!