Shobha Karandlaje
ಬೆಂಗಳೂರು: ಬಳ್ಳಾರಿ ಗಲಭೆಗೆ ಕಾರಣಕರ್ತರಾದ ಶಾಸಕ ನಾರಾ ಭರತ್‍ರೆಡ್ಡಿಯನ್ನು ದ್ವೇಷಭಾಷಣ ಕಾಯ್ದೆಯಡಿ ಬಂಧಿಸಿ ಸರ್ಕಾರ ಜೈಲಿಗೆ ಏಕೆ ಹಾಕಿಲ್ಲ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ರಾಜ್ಯ ಸರ್ಕಾರವನ್ನು ಪ್ರಶ್ನಿಸಿದ್ದಾರೆ.
ರಾಜ್ಯ ಸರ್ಕಾರ ವಿಧಾನಮಂಡಲದ ಉಭಯಸದನಗಳಲ್ಲಿ ಅಂಗೀಕರಿಸಿರುವ ಕರ್ನಾಟಕ ದ್ವೇಷಭಾಷಣ ನಿಯಂತ್ರಣ ಕಾಯ್ದೆಯಡಿ ಬಂಧಿಸುವುದಾದರೆ ಮೊದಲು ನಾರಾ ಭರತ್‍ರೆಡ್ಡಿ ಆಪ್ತ ಸತೀಶ್‍ರೆಡ್ಡಿ ಹಾಗೂ ಅವರ ಬೆಂಬಲಿಗರನ್ನು ಬಂಧಿಸಿ ಜೈಲಿಗೆ ಹಾಕಬೇಕು. ಸರ್ಕಾರ ಈ ಪ್ರಕರಣದಲ್ಲಿ ಯಾರನ್ನು ರಕ್ಷಣೆ ಮಾಡಲು ಹೊರಟಿದೆ ಎಂದು ಕಿಡಿಕಾರಿದರು.
ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ದ್ವೇಷಭಾಷಣ ವಿಧೇಯಕ ಬಿಜೆಪಿಯವರನ್ನು ಗುರಿಯಾಗಿಟ್ಟುಕೊಂಡು ಜಾರಿ ಮಾಡಲು ಸರ್ಕಾರ ಹೊರಟಿದೆ. ನಾವು ಮಾತನಾಡಿದರೆ ದ್ವೇಷಭಾಷಣ. ಹಾಗಾದರೆ ಕಾಂಗ್ರೆಸ್ ಶಾಸಕ ಬಳ್ಳಾರಿಗೆ ಬೆಂಕಿ ಹಚ್ಚುತ್ತೇನೆಂದು ಹೇಳುತ್ತಿರುವುದು ಶಾಂತಿ ಸಂದೇಶವೇ ಎಂದು ತರಾಟೆಗೆ ತೆಗೆದುಕೊಂಡರು.
ನಮ್ಮ ಗೃಹಸಚಿವರಾದ ಡಾ.ಜಿ.ಪರಮೇಶ್ವರ್‍ರವರಿಗೆ ಬೇರೆ ಯಾವುದೇ ವಿಚಾರಗಳೂ ಗೊತ್ತಿರುವುದಿಲ್ಲ. ಏನೇ ಕೇಳಿದರೂ ಗೊತ್ತಿಲ್ಲ ಎಂದು ಸಿದ್ಧಪಡಿಸಿದ ಉತ್ತರ ಕೊಡುತ್ತಾರೆ. ಆದರೆ ಬಳ್ಳಾರಿ ಎಸ್ಪಿ ಘಟನೆ ನಡೆದ ದಿನ ಕುಡಿದು ಮಲಗಿದ್ದರು ಎಂದು ಇವರಿಗೆ ಯಾರು ಹೇಳಿದ್ದರು? ಎಂದು ಪ್ರಶ್ನಿಸಿದರು.
ನಾರಾ ಭರತ್‍ರೆಡ್ಡಿಗೆ ಎಷ್ಟು ದುರಹಂಕಾರ ಎಂದರೆ ಇಡೀ ಬಳ್ಳಾರಿಗೇ ಬೆಂಕಿ ಹಚ್ಚುತ್ತೇನೆ ಎಂದು ಹೇಳುತ್ತಾರೆ. ಚಿಕ್ಕ ವಯಸ್ಸು, ರಾಜಕೀಯದಲ್ಲಿ ಬೆಳೆಯಲು ಇನ್ನೂ ಅವಕಾಶವಿತ್ತು. ಇಂತಹ ದುರಹಂಕಾರಿಗಳಿಗೆ ಸರ್ಕಾರ ಸರಿಯಾದ ಪಾಠ ಕಲಿಸಬೇಕೆಂದು ಒತ್ತಾಯಿಸಿದರು.
ಹುಬ್ಬಳ್ಳಿ: ಹನ್ನೊಂದು ವರ್ಷಗಳ ಬಳಿಕ ಚಾಂಪಿಯನ್ ಪಟ್ಟಕ್ಕೇರುವ ಕರ್ನಾಟಕದ ಕನಸು ನನಸಾಗಲಿಲ್ಲ. ಇದೇ ಮೊದಲ ಬಾರಿಗೆ ಫೈನಲ್‌ಗೆ ಬಂದು, ಜಮ್ಮು-ಕಾಶ್ಮೀರ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ತಾಲೂಕು ಕೇಂದ್ರದಲ್ಲಿ ವಿಭಾಗಿಯ ಮಟ್ಟದ ಸೇವಾಲಾಲ್ ಜಯಂತಿ ಕಾರ್ಯಕ್ರಮವನ್ನು…
ಬೆಂಗಳೂರು: ಹಣೆ ಬರಹದಲ್ಲಿ ಬರೆದಿದ್ದರೆ ನನ್ನ ಅಣ್ಣ ಸಿಎಂ ಆಗುತ್ತಾರೆ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಹೇಳಿಕೆ ನೀಡಿದ್ದಾರೆ. ಈ…
ಹೇಮಂತ್‌ಕುಮಾರ್ ಮಂಡ್ಯ: ನಗರದ ಹಲವಾರು ಬಡಾವಣೆಗಳಲ್ಲಿನ ರಸ್ತೆಗಳು ಸಾರ್ವಜನಿಕ ಮೂತ್ರಾಲಯವಾಗಿ ಮೂಗುಮುಚ್ಚಿಕೊಂಡು ಸಂಚರಿಸಬೇಕಾದ ಪರಿಸ್ಥಿತಿಯನ್ನು ಕಾಣುತ್ತಿದ್ದೇವೆ. ಎಲ್ಲೆಂದರಲ್ಲಿ ಕಸ ಎರಚಾಡುತ್ತ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ನಟ ದರ್ಶನ್ ವಿರುದ್ಧ ಸುಳ್ಳು ದಾಖಲೆ ಸೃಷ್ಟಿಸಿದ್ದಾರೆ ಎಂಬ…
ಟೆಹರಾನ್: ಇರಾನ್ ಮತ್ತು ಇಸ್ರೇಲ್ ನಡುವೆ ಯುದ್ಧದ ಕಾರ್ಮೋದ ಹೆಚ್ಚಿದ್ದು, ಇರಾನ್‌ನ ಸರ್ವೋಚ್ಛ ನಾಯಕ ಅಲಿ ಖಮೇನಿ ಹಾಗೂ ಅಧ್ಯಕ್ಷ…