Uncategorized

ಹೆಚ್‌ಡಿಕೆ ಮನೆಗೆ ನಿರ್ಮಲಾನಂದನಾಥ ಸ್ವಾಮಿಜಿ ಭೇಟಿ : ಶೀಘ್ರ ಗುಣಮುಖರಾಗುವಂತೆ ಆಶಿರ್ವಾದ

ಬೆಂಗಳೂರು : ಹೆಚ್‌.ಡಿ.ಕುಮಾರಸ್ವಾಮಿ ಅವರ ನಿವಾಸಕ್ಕೆ  ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪರಮಪೂಜ್ಯ ಜಗದ್ಗುರುಗಳಾದ ಡಾ. ಶ್ರೀ ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರು ಇಂದು ಭೇಟಿ ನೀಡಿ ಕುಮಾರಸ್ವಾಮಿ ಅವರಿಗೆ ಆಶಿರ್ವದಿಸಿದ್ದಾರೆ. 

ಈ ವೇಳೆ, ಹೃದಯ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದ ಕುಮಾರಸ್ವಾಮಿ ಅವರ ಆರೋಗ್ಯ ವಿಚಾರಿಸಿದ ಸ್ವಾಮಿಗಳು, ಬೇಗ ಗುಣ ಮುಖರಾಗುವಂತೆ ಆಶಿರ್ವದಿಸಿದರು.

ಶ್ರೀಗಳ ಭೇಟಿ ಕುರಿತು ಟ್ವೀಟ್‌ ಮಾಡಿರುವ ಕುಮಾರಸ್ವಾಮಿ ಅವರು,  ಗುರುಗಳ ದರ್ಶನ ಭಾಗ್ಯ ಇಂದು ನನ್ನ ಮನೆಯಲ್ಲಿಯೇ ದೊರೆತಿದ್ದು ನನ್ನ ಭಾಗ್ಯವೇ ಸರಿ.

ಇತ್ತೀಚೆಗೆ ನಾನು 3ನೇ ಬಾರಿ ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರ ಬಗ್ಗೆ ಹಾಗೂ ನನ್ನ ಆರೋಗ್ಯದ ಕುರಿತಾಗಿ ಪರಮಪೂಜ್ಯರು ವಿಚಾರಿಸಿ ಆಶೀರ್ವದಿಸಿದರು ಎಂದು ಭಾವನಾತ್ಮಕ ನುಡಿಗಳನ್ನು ಬರೆದುಕೋಂಡಿದ್ದಾರೆ. 

 

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಶಿವಾನಂದಪುರಿ ಶ್ರೀಗಳಿಗೆ ಕನಕ ಭವನ ನಿರ್ವಹಣೆ ಹೊಣೆ

ಮಂಜು ಕೋಟೆ ಕುರುಬ ಸಮಾಜದ ಎರಡು ಬಣಗಳ ನಡುವೆ ಉಂಟಾಗಿದ್ದ ಗೊಂದಲ; ಸಿಎಂ ಸಿದ್ದರಾಮಯ್ಯ ಸೂಚನೆಯಂತೆ ಕ್ರಮ ಎಚ್.ಡಿ.ಕೋಟೆ: ಮುಖ್ಯಮಂತ್ರಿ…

46 mins ago

ರಿಂಗ್ ರಸ್ತೆಯಲ್ಲಿ ಸಿಗ್ನಲ್ ಲೈಟ್‌ಗಳ ಅಳವಡಿಕೆ

೩೫ ಕಡೆಗಳಲ್ಲಿ ಹೈಬ್ರಿಡ್ ಸಿಗ್ನಲ್ ಲೈಟ್; ವಾಹನ ಸಂಚಾರ ದಟ್ಟಣೆ ನಿಯಂತ್ರಿಸಲು ಪೊಲೀಸ್ ಇಲಾಖೆ ಕ್ರಮ ಮೈಸೂರು: ಭವಿಷ್ಯದಲ್ಲಿ ರಿಂಗ್…

51 mins ago

ಹುಲಿ ಸೆರೆಗೆ ಬಂತು ಥರ್ಮಲ್ ಡ್ರೋನ್‌

ಕಾಡಂಚಿನ ವ್ಯಾಘ್ರ ಸೆರೆಗೆ ಹಗಲು-ರಾತ್ರಿ ಕಾರ್ಯಾಚರಣೆ ಚಿರತೆ ಸೆರೆಗೆ ತಂತ್ರಜ್ಞಾನ ಬಳಕೆ ಮಾಡಿದ್ದ ಅರಣ್ಯ ಇಲಾS ಮೈಸೂರು: ಕಳೆದ ಎರಡು…

56 mins ago

ಕೃಷಿ ಮೇಳಕ್ಕೆ 10 ಲಕ್ಷ ಜನ ಭೇಟಿ

ಹೇಮಂತ್‌ಕುಮಾರ್ ದಾಖಲೆ ಸೃಷ್ಟಿ ; ಹಲವು ಅಚ್ಚರಿಗಳ ತಾಣವಾದ ಮೂರು ದಿನಗಳ ಮೇಳ  ಮಂಡ್ಯ: ಮೂರು ದಿನಗಳ ಕಾಲ ವಿ.ಸಿ.ಫಾರಂನಲ್ಲಿ…

1 hour ago

ಸೆಲ್ಫಿ ವಿಡಿಯೋ ಮಾಡಿ ಆಟೋ ಚಾಲಕ ಆತ್ಮಹತ್ಯೆಗೆ ಯತ್ನ

ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…

10 hours ago