Mysore
27
moderate rain

Social Media

ಮಂಗಳವಾರ, 17 ಮಾರ್ಚ್ 2026
Light
Dark

ಕುಕ್ಕರಹಳ್ಳಿ ಕೆರೆಯಲ್ಲಿ ಕಟ್ಟಡ ನಿರ್ಮಾಣಕ್ಕೆ ವಿರೋಧ ; ಪ್ರತಿಭಟನೆ

ಮೈಸೂರು : ಕುಕ್ಕರಹಳ್ಳಿ ಕೆರೆಯ ಪರಿಸರ ಸಂರಕ್ಷಣೆ ಮಾಡಬೇಕು ಎಂದು ಒತ್ತಾಯಿಸಿ ಪರಿಸರ ಸಂರಕ್ಷಿಸಿ ಹೋರಾಟ ಸಮಿತಿ ವತಿಯಿಂದ ಕುಕ್ಕರಹಳ್ಳಿ ಕೆರೆ ಬಳಿ ಪ್ರತಿಭಟನೆ ನಡೆಸಲಾಯಿತು.

ಕೆರೆ ಪ್ರದೇಶದಲ್ಲಿ ಯಾವುದೇ ರೀತಿಯ ವಾಣಿಜ್ಯ ಮತ್ತು ಬಹುಮಹಡಿ ಕಟ್ಟಡ ನಿರ್ಮಿಸಬಾರದು. ಇಲ್ಲಿನ ಪರಿಸರ ರಕ್ಷಿಸಬೇಕು. ಇಲ್ಲವಾದರೆ ಪರಿಸರವಾದಿಗಳು, ವಿದ್ಯಾರ್ಥಿಗಳು, ಸಾರ್ವಜನಿಕರು ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಈ ಪ್ರದೇಶದಲ್ಲಿ ಮೈಸೂರು ಅಭಿವೃದ್ಧಿ ಪ್ರಾಧಿಕಾರ ಉದ್ಯಾನದ 2.20 ಎಕರೆ ಪ್ರದೇಶವನ್ನು ವಾಣಿಜ್ಯ ವಲಯಕ್ಕೆ ಬದಲಾಯಿಸಿಕೊಂಡಿದೆ. ನಿತ್ಯ ಮುಂಜನೆ ಹಾಗೂ ಸಂಜೆಯ ವೇಳೆ ಈ ಪ್ರದೇಶವನ್ನು ವಾಯುವಿಹಾರಿಗಳು ತಮ್ಮ ಉತ್ತಮ ಆರೋಗ್ಯಕ್ಕಾಗಿ ವ್ಯಾಯಾಮ ಮಾಡುವುದು ಹಾಗೂ ಚಿಕ್ಕ ಮಕ್ಕಳಿಗೆ ಆಟವಾಡಲು ಬಳಸಿಕೊಳ್ಳುತ್ತಿದ್ದಾರೆ. ಇಲ್ಲಿನ ಕೆರೆ ದೇಶ-ವಿದೇಶಗಳ ಅಪರೂಪದ ಪಕ್ಷಿಗಳಿಗೆ ಆಶ್ರಯ ತಾಣವಾಗಿದೆ. ಇಂತಹ ಪ್ರದೇಶದಲ್ಲಿ ವಾಣಿಜ್ಯ ಮತ್ತು ಬಹುಮಹಡಿ ಕಟ್ಟಡ ನಿರ್ಮಿಸಲು ಯೋಜನೆ ರೂಪಿಸುವುದು ಸರಿಯಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು.

ಹೋರಾಟಗಾರರಾದ ಭಾನುಮೋಹನ್, ಅರವಿಂದ್ ಶರ್ಮ, ಕೆರೆ ಜಯರಾಮಯ್ಯ, ಸೋಸಲೆ ಸಿದ್ದರಾಜು, ಗಂಟಯ್ಯ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

 

Tags:
error: Content is protected !!