ಮೈಸೂರು : ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಹಲವಾರು ಸೇವೆಗಳನ್ನು ಪಡೆಯಲು ಅನುಕೂಲವಾಗುವ ನಿಟ್ಟಿನಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಅಭಿವೃದ್ಧಿಪಡಿಸಿರುವ ಪಂಚಮಿತ್ರ ಪೋರ್ಟಲ್‌ಅನ್ನು ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಹೆಚ್.ಸಿ.ಮಹಾದೇವಪ್ಪ ಅವರು ಇಂದು ಜಲದರ್ಶಿನಿ ಅತಿಥಿ ಗೃಹದಲ್ಲಿ ಲೋಕಾರ್ಪಣೆಗೊಳಿಸಿದರು.
ಈ ವೇಳೆ ಮಾತನಾಡಿದ ಸಚಿವರು, ಸಾರ್ವಜನಿಕರು ತಮಗೆ ಅವಶ್ಯಕವಿರುವ ವಿವಿಧ ಮಾಹಿತಿ ಮತ್ತು ವಿವರಗಳನ್ನು ಪಡೆಯಲು, ಗ್ರಾಮ ಪಂಚಾಯತಿಗಳಿಗೆ ಸಂಬಂಧಿಸಿದ ಸೇವೆಗಳಿಗೆ ಆನ್-ಲೈನ್ ನಲ್ಲಿ ಅರ್ಜಿ ಸಲ್ಲಿಸಲು, ಸಲ್ಲಿಸಿದ ಅರ್ಜಿಗಳ ಸ್ಥಿತಿಗತಿಯನ್ನು ಪರಿಶೀಲಿಸಲು ಹಾಗೂ ಕುಂದುಕೊರತೆಗಳನ್ನು ದಾಖಲಿಸಲು “ಪಂಚಮಿತ್ರ” ವೇದಿಕೆಯು ಅನುಕೂಲವಾಗಲಿದೆ. ಈ ಸೌಲಭ್ಯವನ್ನು ಎಲ್ಲಾ ಸಾರ್ವಜನಿಕರು ಸದುಪಯೋಗ ಮಾಡಿಕೊಳ್ಳಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಡಾ.ಡಿ.ತಿಮ್ಮಯ್ಯ, ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ.ಗಾಯಿತ್ರಿ, ಅಪರ ಜಿಲ್ಲಾಧಿಕಾರಿ ಪಿ.ಶಿವರಾಜು, ಸಹಾಯಕ ಕಾರ್ಯದರ್ಶಿ ಕುಲದೀಪ್, ಕಾರ್ಯನಿರ್ವಾಹಕ ಅಧಿಕಾರಿಗಳಾದ ಎಂ.ಎಸ್.ಗಿರಿಧರ್, ಬಿ.ಕೆ.ಮನು, ಸಿ.ಕೃಷ್ಣ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಾದ ಕೆ.ರುಕ್ಮಾಂಗದ, ಪ್ರಕಾಶ್ ಸೇರಿದಂತೆ ಇನ್ನಿತರರು ಹಾಜರಿದ್ದರು.
ಮೈಸೂರು: ಪ್ರಸಿದ್ಧ ಯಾತ್ರಾ ಸ್ಥಳ ಚಾಮುಂಡಿ ಬೆಟ್ಟದ ಸಮಗ್ರ ಅಭಿವೃದ್ಧಿ ಕಾಮಗಾರಿಯು ಕೇಂದ್ರ ಸರ್ಕಾರದ ಪ್ರಸಾದ ಯೋಜನೆಯಡಿ ಜನವರಿ ಮೊದಲ…
ಗಿರೀಶ್ ಹುಣಸೂರು ಬಿಡಿ ಮೊಟ್ಟೆಗೆ ೭.೫೦ ರೂ.; ರಫ್ತು ಹೆಚ್ಚಳದಿಂದ ಭಾರೀ ಹೊಡೆತ ಮೈಸೂರು: ಮಾಗಿ ಚಳಿಗಾಲ ಆರಂಭ, ಚಂಡಮಾರುತದಿಂದ ಹವಾಮಾನ…
ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…
ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…
ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್‌ಗಳ ರಜಾ…