Uncategorized

ಪಂಚಮಿತ್ರ ಪೋರ್ಟಲ್ ಲೋಕಾರ್ಪಣೆ ಮಾಡಿದ ಉಸ್ತುವಾರಿ ಸಚಿವ ಎಚ್‌.ಸಿ.ಮಹದೇವಪ್ಪ

ಮೈಸೂರು : ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಹಲವಾರು ಸೇವೆಗಳನ್ನು ಪಡೆಯಲು ಅನುಕೂಲವಾಗುವ ನಿಟ್ಟಿನಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಅಭಿವೃದ್ಧಿಪಡಿಸಿರುವ ಪಂಚಮಿತ್ರ ಪೋರ್ಟಲ್‌ಅನ್ನು ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಹೆಚ್.ಸಿ.ಮಹಾದೇವಪ್ಪ ಅವರು ಇಂದು ಜಲದರ್ಶಿನಿ ಅತಿಥಿ ಗೃಹದಲ್ಲಿ ಲೋಕಾರ್ಪಣೆಗೊಳಿಸಿದರು.

ಈ ವೇಳೆ ಮಾತನಾಡಿದ ಸಚಿವರು, ಸಾರ್ವಜನಿಕರು ತಮಗೆ ಅವಶ್ಯಕವಿರುವ ವಿವಿಧ ಮಾಹಿತಿ ಮತ್ತು ವಿವರಗಳನ್ನು ಪಡೆಯಲು, ಗ್ರಾಮ ಪಂಚಾಯತಿಗಳಿಗೆ ಸಂಬಂಧಿಸಿದ ಸೇವೆಗಳಿಗೆ ಆನ್-ಲೈನ್ ನಲ್ಲಿ ಅರ್ಜಿ ಸಲ್ಲಿಸಲು, ಸಲ್ಲಿಸಿದ ಅರ್ಜಿಗಳ ಸ್ಥಿತಿಗತಿಯನ್ನು ಪರಿಶೀಲಿಸಲು ಹಾಗೂ ಕುಂದುಕೊರತೆಗಳನ್ನು ದಾಖಲಿಸಲು “ಪಂಚಮಿತ್ರ” ವೇದಿಕೆಯು ಅನುಕೂಲವಾಗಲಿದೆ. ಈ ಸೌಲಭ್ಯವನ್ನು ಎಲ್ಲಾ ಸಾರ್ವಜನಿಕರು ಸದುಪಯೋಗ ಮಾಡಿಕೊಳ್ಳಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಡಾ.ಡಿ.ತಿಮ್ಮಯ್ಯ, ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ.ಗಾಯಿತ್ರಿ, ಅಪರ ಜಿಲ್ಲಾಧಿಕಾರಿ ಪಿ.ಶಿವರಾಜು, ಸಹಾಯಕ ಕಾರ್ಯದರ್ಶಿ ಕುಲದೀಪ್, ಕಾರ್ಯನಿರ್ವಾಹಕ ಅಧಿಕಾರಿಗಳಾದ ಎಂ.ಎಸ್.ಗಿರಿಧರ್, ಬಿ.ಕೆ.ಮನು, ಸಿ.ಕೃಷ್ಣ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಾದ ಕೆ.ರುಕ್ಮಾಂಗದ, ಪ್ರಕಾಶ್ ಸೇರಿದಂತೆ ಇನ್ನಿತರರು ಹಾಜರಿದ್ದರು.

andolana

Recent Posts

ಭಾರೀ ಮಳೆಗೆ ಕೊಚ್ಚಿ ಹೋದ ಚೆಕ್ ಡ್ಯಾಂ: 15 ಅಡಿಗೂ ಹೆಚ್ಚು ಪ್ರವಾಹ

ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…

8 hours ago

ಭಾರೀ ಮಳೆಗೆ ಮನೆ ಕುಸಿತ: ಲಕ್ಷಾಂತರ ರೂ. ನಷ್ಟ

ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ…

8 hours ago

ಧರ್ಮಸ್ಥಳ ಸೌಜನ್ಯ ಪ್ರಕರಣ: ಮರು ತನಿಖೆಗೆ ಸುಪ್ರೀಂಕೋರ್ಟ್ ಮಹತ್ವದ ಆದೇಶ

ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…

10 hours ago

ಕಾಡಾನೆ ದಾಳಿ: ವ್ಯಕ್ತಿ ಸಾವು

ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…

12 hours ago

ಗಣೇಶ ವಿಸರ್ಜನೆ ಮೆರವಣಿಗೆ ರಾಜಕೀಯ ದಾಳವಾಗದಿರಲಿ…

ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…

16 hours ago

ಕಾಂಗ್ರೆಸ್‌ನಲ್ಲೀಗ ಆತಂಕದ ಕಾರ್ಮೋಡ…

ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…

16 hours ago