Mysore
28
overcast clouds

Social Media

ಭಾನುವಾರ, 12 ಏಪ್ರಿಲ 2026
Light
Dark

ಯಾವಾಗ ಏನಾಗುತ್ತೋ ಗೊತ್ತಿಲ್ಲ ಎಂದಿದ್ದ ಪರಮೇಶ್ವರ್‌ ಸ್ಪಷ್ಟನೆ

ಮೈಸೂರು: ರಾಜಕೀಯದಲ್ಲಿ ಯಾವಾಗ ಏನಾಗುತ್ತೋ ಗೋತ್ತಿಲ್ಲ ಎಂಬ ಹೇಳಿಕೆ ನೀಡಿದ್ದ ಗೃಹ ಸಚಿವ ಡಾ.ಜಿ ಪರಮೇಶ್ವರ್‌ ಆ ವಿವಾದದ ಬಗ್ಗೆ ಶುಕ್ರವಾರ ಸ್ಪಷ್ಟನೆ ನೀಡಿದ್ದಾರೆ.

ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಿನ್ನೆಯ ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ. ನಾನು ಆ ರೀತಿ ಎಲ್ಲಿಯೂ ಹೇಳಿಲ್ಲ. ನಮ್ಮ ಸರ್ಕಾರ ಸುಭದ್ರವಾಗಿದೆ. ಐದು ವರ್ಷವೂ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಮುಂದುವರೆಯಲಿದ್ದಾರೆ ಎಂದು ಹೇಳಿದರು.

ಸಿಎಂ ಸಿದ್ದರಾಮಯ್ಯ ಸುಭದ್ರ ಆಡಳಿತ ನೀಡುತ್ತಿದ್ದಾರೆ. ಪಕ್ಷದ ಅಧ್ಯಕ್ಷರು ಬದಲಾದರೆ ಅಂತ ಈ ರೀತಿ ಹೇಳಿದೆ ಅಷ್ಟೇ, ನಾನು ಪಕ್ಷದ ವಿಚಾರವಾಗಿ ಬೇಗ ಕಟ್ಟಡ ಕಟ್ಟಿ ಅಂತ ಹೇಳಿದ್ದೆ ಅಷ್ಟೇ ಎಂದು ಸ್ಪಷ್ಟನೇ ನೀಡಿದರು.

ಕಾಂಗ್ರೆಸ್‌ ಕಚೇರಿಯಲ್ಲಿ ಪರಮೇಶ್ವರ್‌ ಹೇಳಿದ್ದೇನು?
ಮೈಸೂರಿನ ಕಾಂಗ್ರೆಸ್‌ ಕಚೇರಿಯಲ್ಲಿ ಗುರುವಾರ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಪರಮೇಶ್ವರ್‌, ಆದಷ್ಟು ಬೇಗ ಮೈಸೂರಿನಲ್ಲಿ ಕಾಂಗ್ರೆಸ್‌ ಕಚೇರಿ ಕಟ್ಟುಬಿಡಿ. ಮುಂದೆ ಏನ್‌ ಆಗತ್ತೋ ಗೊತ್ತಿಲ್ಲ. ಇವತ್ತಿನ ರಾಜಕೀಯ ಬೆಳವಣಿಗೆ ನೋಡಿದ್ರೆ ಏನೂ ಹೇಳಲಿಕ್ಕೆ ಆಗಲ್ಲ ಅಂತ ಹೇಳಿದ್ದರು.

ಇಲ್ಲಿನ ಕಾಂಗ್ರೆಸ್‌ ಭವನ ನಿರ್ಮಾಣಕ್ಕೆ ಸ್ಥಳ ಪಡೆಯಲು ನಾನು ಸಾಕಷ್ಟು ಹೋರಾಟ ಮಾಡಿದ್ದೇನೆ. ಚಂದ್ರಪ್ರಭಾ ಅರಸು ಜೊತೆ ಸಾಕಷ್ಟು ಮೀಟಿಂಗ್‌ ಮಾಡಿದ್ದೇನೆ. ಈಗ ಶೀಘ್ರದಲ್ಲೇ 15 ಕೋಟಿ ವೆಚ್ಚದಲ್ಲಿ ಕಾಂಗ್ರೆಸ್ ಕಚೇರಿಯನ್ನು ಕಟ್ಟಲು ಸಿಎಂ ಹೊರಟಿದ್ದಾರೆ ಎಂದು ಪರಮೇಶ್ವರ್‌ ಹೇಳಿದ್ರು.

Tags:
error: Content is protected !!