Mysore
16
few clouds

Social Media

ಶುಕ್ರವಾರ, 30 ಜನವರಿ 2026
Light
Dark

ರಾಹುಲ್‌ ಗಾಂಧಿ ದ್ವಿ ಪೌರತ್ವ ಪ್ರಕರಣ:‌ ಪರಿಶೀಲನೆಗೆ ಮುಂದಾದ ಕೇಂದ್ರ ಸರ್ಕಾರ

ನವದೆಹಲಿ: ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ ದ್ವಿಪೌರತ್ವ ಅಂಶ ಪರಿಶೀಲನೆ ಮಾಡುವುದಾಗಿ ಕೇಂದ್ರ ಸರ್ಕಾರ ತಿಳಿಸಿದೆ.

ರಾಹುಲ್‌ ಗಾಂಧಿ ಬ್ರಿಟನ್‌ ಪ್ರಜೆಯಾಗಿರುವ ಕಾರಣ ಅವರ ಭಾರತದ ಪೌರತ್ವ ರದ್ದು ಮಾಡಬೇಕೆಂದು ಕೋರಿ ಕರ್ನಾಟಕದ ಶಿಶಿರ್‌ ವಿಘ್ನೇಶ್‌ ಎಂಬುವವರು ಅರ್ಜಿ ಸಲ್ಲಿಸಿದ್ದರು.

ಈ ಅರ್ಜಿಯ ಬಗ್ಗೆ ಪ್ರತಿಕ್ರಿಯೆ ನೀಡಲು ಕೇಂದ್ರ ಗೃಹ ಸಚಿವಾಲಯಕ್ಕೆ ಅಲಹಾಬಾದ್‌ ಹೈಕೋರ್ಟ್‌ ಸೂಚನೆ ನೀಡಿತ್ತು.

ಇದಕ್ಕೆ ಪ್ರತಿಕ್ರಿಯೆ ನೀಡಿದ ಕೇಂದ್ರ ಸರ್ಕಾರ ರಾಹುಲ್‌ ಗಾಂಧಿ ಅವರ ದ್ವಿಪೌರತ್ವ ವಿಷಯವನ್ನು ಪರಿಶೀಲನೆ ನಡೆಸುವುದಾಗಿ ತಿಳಿಸಿದೆ.

ಕೇಂದ್ರ ಗೃಹ ಸಚಿವಾಲಯವು ಅರ್ಜಿದಾರರು ಮಾಡಿದ ಪ್ರಾತಿನಿಧ್ಯವನ್ನು ಸಚಿವಾಲಯದಲ್ಲಿ ಸ್ವೀಕರಿಸಲಾಗಿದೆ. ಡಿಸೆಂಬರ್.‌19ರಂದು ಈ ವಿಚಾರವನ್ನು ಪಟ್ಟಿ ಮಾಡಿ ಪರಿಶೀಲನೆ ವಿವರಗಳನ್ನು ತಿಳಿಸಲಾಗುವುದು ಎಂದು ಮಾಹಿತಿ ನೀಡಿದೆ.

ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ವಿಘ್ನೇಶ್‌ ಅವರು, ಸರ್ಕಾರವು ತಕ್ಷಣವೇ ರಾಹುಲ್‌ ಗಾಂಧಿಯವರ ಭಾರತೀಯ ಪೌರತ್ವವನ್ನು ಹಿಂತೆಗೆದುಕೊಳ್ಳುತ್ತದೆ ಎಂದು ಭಾವಿಸುತ್ತೇನೆ ಎಂದಿದ್ದಾರೆ.

 

Tags:
error: Content is protected !!