Mysore
27
few clouds

Social Media

ಶನಿವಾರ, 06 ಡಿಸೆಂಬರ್ 2025
Light
Dark

ಪಹಲ್ಗಾಮ್‌ ದಾಳಿಯಲ್ಲಿ ಭಾಗಿಯಾಗಿದ್ದ ಮೂವರು ಉಗ್ರರ ಫೋಟೋ ರಿಲೀಸ್:‌ ಸುಳಿವು ಕೊಟ್ಟವರಿಗೆ 20 ಲಕ್ಷ ರೂ ಬಹುಮಾನ

ಶ್ರೀನಗರ: ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಭಾಗಿಯಾಗಿದ್ದ ಮೂವರು ಉಗ್ರರ ಪೋಸ್ಟರ್‌ಗಳನ್ನು ಜಮ್ಮು-ಕಾಶ್ಮೀರ ಪೊಲೀಸರು ಬಿಡುಗಡೆಗೊಳಿಸಿದ್ದಾರೆ.

ಉಗ್ರರ ಸುಳಿವು ಕೊಟ್ಟವರಿಗೆ 20 ಲಕ್ಷ ರೂ ಬಹುಮಾನ ನೀಡುವುದಾಗಿ ಘೋಷಣೆ ಮಾಡಲಾಗಿದ್ದು, ಉಗ್ರರ ಸುಳಿವು ಕೊಟ್ಟವರ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು ಎಂದು ತಿಳಿಸಿದ್ದಾರೆ.

ಕಳೆದ ಏಪ್ರಿಲ್.‌22ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನ ಬೈಸರನ್‌ ಕಣಿವೆಯಲ್ಲಿ ಭಯೋತ್ಪಾದಕರು ಹಿಂದುಗಳನ್ನೇ ಗುರಿಯಾಗಿಸಿಕೊಂಡು ಗುಂಡಿನ ದಾಳಿ ನಡೆಸಿದ್ದರು.

ಇದನ್ನೂ ಓದಿ:- ಭಾರತೀಯ ಸೇನೆಗೆ ಬೆಂಬಲ ಸೂಚಿಸಿ ನಾಳೆಯಿಂದ ತಿರಂಗಯಾತ್ರೆ: ಬಿ.ವೈ.ವಿಜಯೇಂದ್ರ

ಪರಿಣಾಮ 26 ಮಂದಿ ಸಾವನ್ನಪ್ಪಿದ್ದರು. ಈ ದಾಳಿಯಲ್ಲಿ ಭಾಗಿಯಾಗಿದ್ದ ಭಯೋತ್ಪಾದಕರನ್ನು ಪತ್ತೆ ಹಚ್ಚಲು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮೂವರು ಶಂಕಿತ ಪಾಕ್‌ ಉಗ್ರರ ಪೋಸ್ಟರ್‌ಗಳನ್ನು ಬಿಡುಗಡೆಗೊಳಿಸಿದ್ದಾರೆ. ಪೋಸ್ಟರ್‌ಗಳನ್ನು ಅಂಟಿಸಿ ಉಗ್ರರ ಸುಳಿವು ಕೊಟ್ಟವರಿಗೆ 20 ಲಕ್ಷ ರೂ ಬಹುಮಾನ ನೀಡುವುದಾಗಿ ಘೋಷಣೆ ಮಾಡಿದ್ದಾರೆ.

Tags:
error: Content is protected !!