Mysore
21
mist

Social Media

ಶನಿವಾರ, 13 ಡಿಸೆಂಬರ್ 2025
Light
Dark

ವಿಪಕ್ಷಗಳ ವಿರುದ್ಧ ಹರಿಹಾಯ್ದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಕಾಂಗ್ರೆಸ್‌ ಪಕ್ಷ ಎಂದಿಗೂ ಜನರ ಸಮಸ್ಯೆಗಳ ಬಗ್ಗೆ ಮಾತನಾಡುವುದು ಕಡಿಮೆ ಎಂದು ಪ್ರಧಾನಿ ನರೇಂದ್ರ ಮೋದಿ ಕಿಡಿಕಾರಿದ್ದಾರೆ.

ಈ ಬಗ್ಗೆ ದೆಹಲಿಯಲ್ಲಿಂದು ಮಾತನಾಡಿದ ಅವರು, ಇಂದಿನಿಂದ ಆರಂಭವಾಗಲಿರುವ ಸಂಸತ್‌ ಚಳಿಗಾಲದ ಅಧಿವೇಶನವನ್ನು ಅತ್ಯಂತ ಸುಗಮವಾಗಿ ನಡೆಸಬೇಕು ಎಂದು ವಿಪಕ್ಷಗಳಿಗೆ ಮನವಿ ಮಾಡಿದರು.

75ನೇ ವರ್ಷದ ಸಂವಿಧಾನ ದಿನಾಚರಣೆಯ ಸಂದರ್ಭದಲ್ಲಿ ಅಧಿವೇಶನ ನಡೆಯುತ್ತಿದೆ. ಎಲ್ಲಾ ವಿಚಾರಗಳ ಕುರಿತು ಚರ್ಚೆಗೆ ಅವಕಾಶ ಕೊಡುತ್ತೇವೆ. ಜನರ ಸಮಸ್ಯೆಗಳ ಬಗ್ಗೆ ಪ್ರಾಮಾಣಿಕವಾಗಿ ಚರ್ಚೆ ನಡೆಯಬೇಕಿದೆ. ಕಾಂಗ್ರೆಸ್ ಪಕ್ಷ ಎಂದಿಗೂ ಜನರ ಸಮಸ್ಯೆಗಳ ಬಗ್ಗೆ ಮಾತನಾಡುವುದು ಕಡಿಮೆ. ಹೀಗಾಗಿ ಕಾಂಗ್ರೆಸ್‌ ಪಕ್ಷವನ್ನು ಜನ ತಿರಸ್ಕಾರ ಮಾಡಿದ್ದಾರೆ ಎಂದು ಲೇವಡಿ ಮಾಡಿದರು.

ಇನ್ನು ದೇಶದ ಜನ ಎಲ್ಲವನ್ನು ಅರ್ಥಮಾಡಿಕೊಂಡಿದ್ದಾರೆ. ವಿಪಕ್ಷಗಳಿಂದ ಕಲಾಪದ ಸಮಯ ಹಾಳು ಮಾಡುವ ಕೆಲಸ ಆಗುತ್ತಿದೆ. ಜನರ ನಿರೀಕ್ಷೆಯಂತೆ ವಿಪಕ್ಷಗಳು ನಡೆದುಕೊಳ್ಳುತ್ತಿಲ್ಲ ಎಂದು ವಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದರು.

Tags:
error: Content is protected !!