ಮಂಡ್ಯ : ಪಾಂಡವಪುರದ ಆರತಿ ಉಕ್ಕಡ ದೇವಸ್ಥಾನಕ್ಕೆ ಹೋಗುತ್ತಿದ್ದ ರಾಧಾ, ಅಪ್ಸರಾ ಮತ್ತು ಸ್ನೇಹಿತೆಯರ ಮೇಲೆ ಮೌನ ಮತ್ತು ತಂಡದವರು ಹಲ್ಲೆ ನಡೆಸಿ ಕೊಲೆ ಯತ್ನ ನಡೆಸಿರುವ ಬಗ್ಗೆ ದೂರು ನೀಡಿದರೂ ಪೊಲೀಸರು ಕ್ರಮ ಕೈಗೊಂಡಿಲ್ಲ ಎಂದು ಮಂಗಳಮುಖಿಯರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಅರುಂಧತಿ ಜಿ. ಹೆಗಡೆ ಆರೋಪಿಸಿದರು.
ಕೆಲ ದಿನಗಳ ಹಿಂದೆ ಆರತಿ ಉಕ್ಕಡ ದೇವಸ್ಥಾನಕ್ಕೆ ತೆರಳುತ್ತಿದ್ದ ರಾಧಾ, ಅಪ್ಸರಾ ಇತರರನ್ನು ಅಡ್ಡಗಟ್ಟಿದ ಮೌನ ಮತ್ತು ತಂಡದವರು ಅವರ ಮೇಲೆ ಹಲ್ಲೆ ನಡೆಸಿ ಶ್ರೇಯಾಳ ಎಂಬವರ ಸ್ನೇಹಿತ ಶರತ್ ಎಂಬಾತನ ಮೂಲಕ ಕಿಡ್ನ್ಯಾಪ್ ಮಾಡಿಸಿ ಲೈಂಗಿಕವಾಗಿ ಕಿರುಕುಳ ನೀಡಿ ಕುಂತಿಬೆಟ್ಟದ ಬಳಿ ಕರೆದೊಯ್ದು ಪೆಟ್ರೋಲ್ ಹಾಕಿ ಹತ್ಯೆ ಮಾಡಲು ಯತ್ನಿಸಿದ್ದಾರೆ. ಅವರ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದರೂ ಯಾವುದೇ ಕ್ರಮಕೈಗೊಂಡಿಲ್ಲ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ದೂರಿದರು.
ಮಂಗಳಮುಖಿಯರ ಮೇಲೆ ದೌರ್ಜನ್ಯ, ದಬ್ಬಾಳಿಕೆಗಳು ಹಲವೆಡೆ ನಡೆದಿದ್ದು, ಕೆಲ ಪ್ರಕರಣಗಳಲ್ಲಿ ಮೌನ ಮತ್ತಿತರರು ಜಾಮೀನಿನ ಮೇಲೆ ಹೊರಬಂದಿದ್ದಾರೆ. ಈ ರೀತಿಯ ಕೃತ್ಯಗಳನ್ನು ನಡೆಸುತ್ತಿರುವ ಬಗ್ಗೆ ಪೊಲೀಸರಿಗೆ ಅ. ೧೪ರಂದು ಮಾಹಿತಿ ನೀಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆದರೆ ಆರೋಪಿಗಳು ಪ್ರಬಲ ವ್ಯಕ್ತಿಗಳ ಬೆಂಬಲದೊಂದಿಗೆ ಪ್ರಕರಣವನ್ನು ಮುಚ್ಚಿಹಾಕಲು ಒತ್ತಡ ಹೇರುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ಪ್ರಕರಣದಲ್ಲಿ ದೂರು ವಾಪಸ್ ಪಡೆಯಬೇಕು, ಇಲ್ಲದಿದ್ದರೆ ಕೊಲೆಮಾಡುವುದಾಗಿ ಬೆದರಿಕೆ ಹಾಕುತ್ತಿದ್ದಾರೆ. ನಮ್ಮ ಜೀವಕ್ಕೆ ಏನಾದರೂ ತೊಂದರೆ ಉಂಟಾದಲ್ಲಿ ಪೊಲೀಸರು ಮತ್ತು ಕೃತ್ಯ ಎಸಗಿರುವ ಆರೋಪಿಗಳೇ ಕಾರಣ ಎಂದು ಎಚ್ಚರಿಕೆ ನೀಡಿದರು.
ಮಂಗಳಮುಖಿಯರಾದ ಚೈತ್ರಾ, ಚಂದನಾ, ರಾಧಾ, ಸ್ವಾತಿ ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.
ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…
ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…
ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್‌ಗಳ ರಜಾ…
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…
ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…
ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…