ನವದೆಹಲಿ: ಕೇರಳ ರಾಜ್ಯದ ವಯನಾಡು ಜಿಲ್ಲೆಗೆ ನೂತನ ಸಂಸದರಾಗಿ ಆಯ್ಕೆಯಾಗಿರುವ ಪ್ರಿಯಾಂಕಾ ಗಾಂಧಿ ಅವರು ನಾಳೆ ಅಧಿಕೃತವಾಗಿ ಸಂಸತ್‌ನಲ್ಲಿ ಪ್ರಮಾಣ ವಚನ ಸ್ವೀಕಾರಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಈ ಕುರಿತು ಇಂದು(ನ.27) ಪ್ರಿಯಾಂಕಾ ಗಾಂಧಿಯವರಿಗೆ ವಯನಾಡು ಕ್ಷೇತ್ರದ ಕಾಂಗ್ರೆಸ್ ನಾಯಕರು ಪ್ರಮಾಣ ಪತ್ರವನ್ನು ರಾಹುಲ್ ಗಾಂಧಿ ಸಮ್ಮುಖದಲ್ಲಿ ಹಸ್ತಾಂತರಿಸಿದ್ದಾರೆ. ಹೀಗಾಗಿ ನಾಳೆ ಲೋಕಸಭೆಯಲ್ಲಿ ಪ್ರಿಯಾಂಕಾ ಅವರು ಸಂಸದರಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ ಎಂದು ಮಾಹಿತಿ ಲಭ್ಯವಾಗಿದೆ.
ಕಾಂಗ್ರೆಸ್‌ನ ಭದ್ರಕೋಟೆಯಾಗಿರುವ ವಯನಾಡು ಕ್ಷೇತ್ರದಲ್ಲಿ ನೂತನ ಸಂಸದರಾಗಿ ಆಯ್ಕೆಯಾಗಿರುವ ಪ್ರಿಯಾಂಕಾ ಗಾಂಧಿ ಅವರು, ಕ್ಷೇತ್ರಕ್ಕೆ ಅಧಿಕ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡು ಮುಂದಿನ ದಿನಗಳಲ್ಲಿ ಸ್ಥಳೀಯ ಸಮಸ್ಯೆಗಳನ್ನು ಬಗೆಹರಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.
ವಯನಾಡು ಕ್ಷೇತ್ರದ ಉಪಚುನಾವಣೆಯಲ್ಲಿ ಪ್ರಿಯಾಂಕಾ ಗಾಂಧಿ ಅವರು ನಾಲ್ಕು ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಅಲ್ಲದೇ ಈ ಕ್ಷೇತ್ರದಲ್ಲಿ ಹಿಂದೆ ಸ್ಪರ್ಧಿಸಿದ್ದ ತಮ್ಮ ಸಹೋದರ ರಾಹುಲ್ ಗಾಂಧಿಯವರ ಮತಗಳ ಅಂತರವನ್ನು ಮುರಿದು ಅಧಿಕ ದಾಖಲೆಯ ಮತಗಳನದ್ನು ಪಡೆದಿದ್ದಾರೆ.