Mysore
25
broken clouds

Social Media

ಶುಕ್ರವಾರ, 25 ಏಪ್ರಿಲ 2025
Light
Dark

ಕಾಂಗ್ರೆಸ್‌ ಸರ್ಕಾರ ವೋಟಿಗಾಗಿ ರಾಜ್ಯವನ್ನು ಇಸ್ಲಾಮಿಕರಣ ಮಾಡಲು ಹೊರಟಿದೆ: ಆರ್‌.ಅಶೋಕ್‌

ಮೈಸೂರು: ಕಾಂಗ್ರೆಸ್‌ ಸರ್ಕಾರ ರಂಜಾನ್‌ ವೇಳೆ ರಜೆ ನೀಡುವುದಕ್ಕೆ ಮುಂದಾಗಿದ್ದು, ವೋಟಿಗಾಗಿ ಇಡೀ ರಾಜ್ಯವನ್ನೇ ಇಸ್ಲಾಮಿಕರಣ ಮಾಡಲು ಹೊರಟಿದೆ ಎಂದು ಸರ್ಕಾರದ ವಿರುದ್ಧ ವಿರೋಧ ಪಕ್ಷ ಆರ್‌.ಅಶೋಕ್‌ ಆರೋಪಿಸಿದ್ದಾರೆ.

ಮೈಸೂರಿನಲ್ಲಿ ಇಂದು(ಫೆಬ್ರವರಿ.24) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಇಂದು ನಡೆಯುವ ಹೋರಾಟಕ್ಕೆ ನಾನು ಭಾಗವಹಿಸಲು ಬಂದಿದ್ದೇನೆ. ನಮ್ಮ ಹಿಂದೂ ಸಂಘಟನೆಗಳಿಗೆ ನಮ್ಮ ಬೆಂಬಲ ಇದೆ. ಇವರನ್ನು ಮಟ್ಟ ಹಾಕಲೇಬೇಕು ಇಲ್ಲ ಅಂದರೆ ದೇಶಕ್ಕೆ ಉಳಿಗಾಲ ಇಲ್ಲ ಎಂದಿದ್ದಾರೆ.

ಇತ್ತೀಚೆಗೆ ಉದಯಗಿರಿ ಪೊಲೀಸ್‌ ಠಾಣೆಯ ಮೇಲೆ ನಡೆದ ಕಲ್ಲು ತೂರಾಟದ ಪ್ರಕರಣ ಇಡೀ ರಾಜ್ಯವೇ ಬೆಚ್ಚಿ ಬೀಳುವ ಘಟನೆಯಾಗಿದೆ. ರಾಜ್ಯದಲ್ಲಿ ಪೋಲಿಸರನ್ನು ಕಂಡರೆ ದೊಡ್ಡ ದೊಡ್ಡ ರಾಜಕಾರಣಿಗಳು ಮತ್ತು ಪ್ರಭಾವವುಳ್ಳ ವ್ಯಕ್ತಗಳೇ ಭಯ ಪಡುತ್ತಾರೆ. ಹೀಗಾಗಿರುವಾಗ ಈ ಕಿಡಿಗೇಡಿಗಳು ಪೊಲೀಸರ ಮೇಲೆಯೇ ದಾಳಿ ನಡೆಸಿದ್ದಾರೆ. ಅವರನ್ನು ಪೊಲೀಸರು ನಿಯಂತ್ರಿಸದಿದ್ದರೆ ಪೊಲೀಸ್‌ ಠಾಣೆಗೆ ಬೆಂಕಿ ಹಚ್ಚುತ್ತಿದ್ದರು ಎಂದು ವಾಗ್ದಾಳಿ ನಡೆಸಿದ್ದಾರೆ.

ಈ ಸಂದರ್ಭದಲ್ಲಿ ಪೊಲೀಸರಿಗೆ ಆತ್ಮಸ್ಥೈರ್ಯ ತುಂಬುವ ಕೆಲಸವನ್ನು ನಾವು ಮಾಡಿದ್ದೇವೆ. ಅದಕ್ಕೆ ಪೊಲೀಸರು ಕ್ರಮ ತೆಗೆದುಕೊಳ್ಳುತ್ತಿದ್ದು, ಕೆಲವು ಮಂದಿಯನ್ನು ಬಂಧಿಸಿದ್ದಾರೆ. ಆದರರೆ ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಅವರು ಉದಯಗಿರಿ ಪೊಲೀಸ್‌ ಠಾಣೆಗೆ ಬಂದು ಹೋದಮೇಲೆ ಆರೋಪಿಗಳನ್ನು ಬಂಧಿಸುವುದೇ ನಿಂತು ಹೋಗಿದೆ ಎಂದು ಆರೋಪ ಮಾಡಿದ್ದಾರೆ.

Tags: