Categories: Uncategorized

ಆದಿಚುಂಚನಗಿರಿ ಶ್ರೀಗಳ ನಡೆ ದಾರಿ ತಪ್ಪುತ್ತಿದೆ ಹೇಳಿಕೆ : ಕ್ಷೆಮೆಯಾಚಿಸಿದ ಶಾಸಕ ರಮೇಶ್‌ ಬಂಡಿಸಿದ್ದೇಗೌಡ

ಮಂಡ್ಯ : ನಾನು ಯಾವಾಗ ಮಾತನಾಡಿದರೂ ವಿವಾದ ಆಗುತ್ತೆ. ನನ್ನ ಮಾತಿನಿಂದ ನೋವಾಗಿದ್ದರೆ, ಡಾ.ನಿರ್ಮಲಾನಂದನಾಥ ಸ್ವಾಮೀಜಿ ಅವರ ಕ್ಷಮೆ ಯಾಚಿಸುತ್ತೇನೆ ಎಂದು ಶ್ರೀರಂಗಪಟ್ಟಣ ಶಾಸಕ ಎ.ಬಿ.ರಮೇಶ್ ಬಾಬು ಬಂಡಿಸಿದ್ದೇಗೌಡ ಹೇಳಿದ್ದಾರೆ.

ಶನಿವಾರ ಶ್ರೀರಂಗಪಟ್ಟಣದ ಬಿಜಿಎಸ್ ಶಾಲೆ ಅವರಣದಲ್ಲಿ ನೂತನ ಆದಿಚುಂಚನಗಿರಿ ಬಾಲ ಜಗತ್ ಆಂಗ್ಲ ಮಾಧ್ಯಮ, ಪ್ರಾಥಮಿಕ ಮತ್ತು ಪ್ರೌಢಶಾಲೆ ಮತ್ತು ಪದವಿಪೂರ್ವ ಕಾಲೇಜು ಹಾಗೂ ಗಣಪತಿ ದೇವಾಲಯದ ಕಟ್ಟಡಗಳ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡುವಾಗ ಶಾಸಕ ಎ.ಬಿ.ರಮೇಶ್ ಬಾಬು ಬಂಡಿಸಿದ್ದೇಗೌಡ ಅವರು, ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ಡಾ.ನಿರ್ಮಲಾನಂದನಾಥ ಸ್ವಾಮೀಜಿಯವರು ದಾರಿ ತಪ್ಪುತ್ತಿದ್ದಾರೆ ಎಂದು ಹೇಳಿದ್ದ ಬಗ್ಗೆ ಎಲ್ಲೆಡೆ ವ್ಯಾಪಕ ಚರ್ಚೆಗೆ ಕಾರಣವಾಗಿತ್ತು. ಖಂಡನೆ ಕೂಡ ವ್ಯಕ್ತವಾಗಿತ್ತು. ತಾವು ನೀಡಿದ್ದ ಹೇಳಿಕೆ ಕುರಿತು ಶಾಸಕ ಎ.ಬಿ. ರಮೇಶ್‌ಬಾಬು ಬಂಡಿಸಿದ್ದೇಗೌಡ ಭಾನುವಾರ ಕ್ಷಮೆಯಾಚಿಸಿದರು.

ಮಂಡ್ಯದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ರಮೇಶ್ ಬಾಬು ಅವರು, ನಾನು ನಾನು ಮಠ ಸರಿ ಇಲ್ಲ ಎಂದು ಹೇಳಿಲ್ಲ. ಹಿಂದೆ ಇದ್ದ ಶ್ರೀ ಬಾಲಗಂಗಾಧರನಾಥ ಶ್ರೀಗಳು ಎಲ್ಲರನ್ನೂ ವಿಶ್ವಾಸಕ್ಕೆ ತೆಗಡದುಕೊಂಡು ಹೋಗುತ್ತಿದ್ದರು. ಅವರು ಕಟ್ಟಿ ಬೆಳೆಸಿದ ಚುಂಚನಗಿರಿ ಮಠ ನಂತರವೂ ಚೆನ್ನಾಗಿ ನಡೆದುಕೊಂಡು ಹೋಗಬೇಕು ಎಂಬ ಭಾವನೆಯಲ್ಲಿ ನಾನು ಹೇಳಿದ್ದೆ ಎಂದು ಸ್ಪಷ್ಟನೆ ನೀಡಿದರು.

ಈಗಿನ ಪೀಠಾಧ್ಯಕ್ಷರಾದ ಶ್ರೀ ನಿರ್ಮಾಲನಂದನಾಥಸ್ವಾಮೀಜಿ ಅವರ ಬಗ್ಗೆ ಮಾತನಾಡುವಷ್ಟು ದೊಡ್ಡ ವ್ಯಕ್ತಿ ನಾನಲ್ಲ. ಮಾತನಾಡುವ ಸಂದರ್ಭದಲ್ಲಿ ಸಣ್ಣ ಪದ ವ್ಯತ್ಯಾಸ ಆಗುತ್ತೆ. ಒಕ್ಕಲಿಗರ ಸಂಘದ ಅನೇಕರು ನನ್ನ ಹೇಳಿಕೆ ಬಗ್ಗೆ ಮಾತನಾಡಿದ್ದಾರೆ. ಅವರ ಮನಸ್ಸಿಗೆ ನೋವಾಗಿದ್ದರೆ ವಿಷಾದ ವ್ಯಕ್ತಪಡಿಸುತ್ತೇನೆ. ನಿರ್ಮಲಾನಂದನಾಥಸ್ವಾಮೀಜಿ ಅವರ ಮನಸ್ಸಿಗೆ ನೋವಾಗುವ ರೀತಿ ನಡೆದುಕೊಂಡಿಲ್ಲ. ನನ್ನ ಮಾತಿನಿಂದ ನೋವಾಗಿದ್ದರೆ ಕ್ಷಮೆಯಾಚಿಸುತ್ತೇನೆ ಎಂದು ಹೇಳಿದರು.

ಇದನ್ನು ಮುಂದುವರಿಸಿಕೊಂಡು ಹೋಗುವುದು ಬೇಡ, ಇಲ್ಲಿಗೆ ಬಿಡಿ. ಕೆಟ್ಟ ಯೋಚನೆಯಲ್ಲಿ ನಾನು ಮಾತನಾಡಿಲ್ಲ. ಮಾತಿನ ಭರದಲ್ಲಿ ಈ ರೀತಿ ಆಗಿದೆ ಅಷ್ಟೇ ಎಂದು ಹೇಳಿದರು.

ನಾನು ಮಠದ ಸದ್ಭಕ್ತನಾಗಿದ್ದು, ಯಾರೂ ಕೂಡ ಅನ್ಯತಾ ಭಾವಿಸಬಾರದು ಎಂದು ವಿವಾದಕ್ಕೆ ತೆರೆ ಎಳೆಯುವ ಪ್ರಯತ್ನ ಮಾಡಿದರು.

ನಮ್ಮ ಮಠ ಎಲ್ಲರ ಪರವಾಗಿ ಇರಬೇಕು. ಎಲ್ಲರನ್ನೂ ಒಂದೇ ಸದ್ಭಾವನೆಯಲ್ಲಿ ಕಾಣಬೇಕು. ನನ್ನ ಮಾತನ್ನು ನನ್ನ ಸ್ನೇಹಿತರು ತಿರುಚುವ ಕೆಲಸ ಮಾಡುತ್ತಿದ್ದಾರೆ. ಮುಂದೆ ಅದು ಯಾರು ಎಂಬುದು ಗೊತ್ತಾಗುತ್ತದೆ ಎಂದರು.

ಶಾಸಕ ರಮೇಶ್ ಬಾಬು ಬಂಡಿಸಿದ್ದೇಗೌಡ ಅವರು ನೀಡಿದ್ದ ಹೇಳಿಕೆಯ ಬಗ್ಗೆ ಕಾರ್ಯಕ್ರಮಕ್ಕೆ ಆಗಮಿಸಿದ್ದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ತೀವ್ರಸಮಾಧಾನ ವ್ಯಕ್ತಪಡಿಸಿದ್ದರು. ಅಲ್ಲದೆ ತಾವೂ ಕೂಡ ಹಿಂದೆ ತಾವೇ ಆಡಿದ್ದ ಮಾತಿಗೆ ಮಾಜಿ ಪ್ರಧಾನಿಗಳಾದ ಎಚ್.ಡಿ.ದೇವೇಗೌಡರ ಸಲಹೆಯಂತೆ ಶ್ರೀಗಳ ಕ್ಷಮೆಯಾಚಿಸಿದ್ದೆ ಎಂದು ನೆನಪಿಸಿಕೊಂಡರು.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಭಾರೀ ಮಳೆಗೆ ಕೊಚ್ಚಿ ಹೋದ ಚೆಕ್ ಡ್ಯಾಂ: 15 ಅಡಿಗೂ ಹೆಚ್ಚು ಪ್ರವಾಹ

ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…

13 hours ago

ಭಾರೀ ಮಳೆಗೆ ಮನೆ ಕುಸಿತ: ಲಕ್ಷಾಂತರ ರೂ. ನಷ್ಟ

ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ…

13 hours ago

ಧರ್ಮಸ್ಥಳ ಸೌಜನ್ಯ ಪ್ರಕರಣ: ಮರು ತನಿಖೆಗೆ ಸುಪ್ರೀಂಕೋರ್ಟ್ ಮಹತ್ವದ ಆದೇಶ

ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…

15 hours ago

ಕಾಡಾನೆ ದಾಳಿ: ವ್ಯಕ್ತಿ ಸಾವು

ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…

17 hours ago

ಗಣೇಶ ವಿಸರ್ಜನೆ ಮೆರವಣಿಗೆ ರಾಜಕೀಯ ದಾಳವಾಗದಿರಲಿ…

ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…

20 hours ago

ಕಾಂಗ್ರೆಸ್‌ನಲ್ಲೀಗ ಆತಂಕದ ಕಾರ್ಮೋಡ…

ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…

21 hours ago