ಬೆಂಗಳೂರು: ಅತ್ಯಾಚಾರ ಮತ್ತು ಲೈಗಿಂಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಜಾಮೀನು ಅರ್ಜಿಯನ್ನು ಹೈಕೋರ್ಟ್‌ನ ಏಕ ಸದಸ್ಯ ಪೀಠವೂ ವಜಾಗೊಳಿಸಿದೆ.
ಈ ಕುರಿತು ಇಂದು(ನ.22) ವಿಚಾರಣೆ ನಡೆಸಿದ ಹೈಕೋರ್ಟ್‌ನ ಏಕ ಸದಸ್ಯ ಪೀಠವೂ ಅಶ್ಲೀಲ ದೃಶ್ಯ (4ನೇ ಕೇಸ್) ಪ್ರಕರಣದ ಜಾಮೀನು ಅರ್ಜಿಯನ್ನು ವಜಾಗೊಳಿಸಿ ನ್ಯಾಯಾಂಗ ಬಂಧನದಲ್ಲಿರುವಂತೆ ಆದೇಶ ಹೊರಡಿಸಿದೆ.
ಕೆಲ ದಿನಗಳ ಹಿಂದೆ ಅತ್ಯಾಚಾರ ಮತ್ತು ಲೈಗಿಂಕ ದೌರ್ಜನ್ಯ ಆರೋಪದ ಮೂರು ಪ್ರಕರಣಗಳಲ್ಲಿ ಹೈಕೋರ್ಟ್ ಹಾಗೂ ಸುಪ್ರೀಂಕೋರ್ಟ್‌ನಲ್ಲಿಯೂ ಮಾಜಿ ಸಂಸದ ಪ್ರಜ್ವಲ್ ರೇವಣ್ಣರವರ ಜಾಮೀನು ಅರ್ಜಿ ವಜಾಗೊಂಡಿತ್ತು. ಆದರೆ ನಾಲ್ಕನೇ ಪ್ರಕರಣದಲ್ಲಿ ಜಾಮೀನು ನಿರೀಕ್ಷೆಯಲ್ಲಿದ್ದ ಪ್ರಜ್ವಲ್‌ಗೆ ಅರ್ಜಿಯನ್ನು ವಜಾಗೊಳಿಸಿ ಬಿಗ್ ಶಾಕ್ ನೀಡಿದೆ.