Mysore
21
overcast clouds

Social Media

ಭಾನುವಾರ, 22 ಡಿಸೆಂಬರ್ 2024
Light
Dark

ಓದುಗರ ಪತ್ರ: ಪಾರ್ಕಿಂಗ್ ವ್ಯವಸ್ಥೆ ಮಾಡಿ

ಮೈಸೂರಿನ ಜೆ.ಪಿ.ನಗರ, ಕುವೆಂಪುನಗರ, ಬೆಮಲ್ ನಗರ, ವಿಜಯನಗರ, ಬಲ್ಲಾಳ್ ವೃತ್ತ, ಸೂರ್ಯ ಬೇಕರಿ ವೃತ್ತ, ಬಸವನಗುಡಿ, ವಿಶ್ವಮಾನವ ಜೋಡಿ ರಸ್ತೆ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿ ಪಾರ್ಕಿಂಗ್ ಸಮಸ್ಯೆ ಕಾಡುತ್ತಿದ್ದು, ವಾಹನ ಸವಾರರು ತಮ್ಮ ವಾಹನಗಳನ್ನು ಎಲ್ಲೆಂದರಲ್ಲಿ ನಿಲ್ಲಿಸುತ್ತಿದ್ದಾರೆ. ಈ ರಸ್ತೆಗಳಲ್ಲಿ ಬೆಳಿಗ್ಗೆ ಮತ್ತು ಸಂಜೆಯ ವೇಳೆ ವಾಹನ ದಟ್ಟಣೆ ಹೆಚ್ಚಿರುತ್ತದೆ. ಆದರೆ ವಾಹನ ಸವಾರರು ರಸ್ತೆ ಬದಿಗಳಲ್ಲಿ ತಮ್ಮ ವಾಹನಗಳನ್ನು ಅಡ್ಡಾದಿಡ್ಡಿ ಪಾರ್ಕಿಂಗ್ ಮಾಡುತ್ತಿದ್ದು, ಟ್ರಾಫಿಕ್ ಸಮಸ್ಯೆಗೆ ಕಾರಣವಾಗುತ್ತಿದೆ. ಈ ರಸ್ತೆಗಳಲ್ಲಿ ವಾಣಿಜ್ಯ ಸಂಕೀರ್ಣಗಳು ಹೆಚ್ಚಾಗಿರುವುದರಿಂದ ಜನಸಂದಣಿಯೂ ಹೆಚ್ಚಾಗಿರುತ್ತದೆ. ಇಂತಹ ಸ್ಥಳದಲ್ಲಿ ಟ್ರಾಫಿಕ್ ಸಮಸ್ಯೆಯಾಗುತ್ತಿರುವುದು ಪಾದಚಾರಿಗಳಿಗೆ ಕಿರಿಕಿರಿಯುಂಟು ಮಾಡುತ್ತಿದೆ. ಅಲ್ಲದೆ ಫುಟ್‌ ಪಾತ್‌ಗಳನ್ನೂ ಕೆಲ ಅಂಗಡಿಯವರು ಆಕ್ರಮಿಸಿಕೊಂಡಿದ್ದು, ಪಾದಾಚಾರಿಗಳು ವಿಧಿಯಿಲ್ಲದೆ ರಸ್ತೆಯಲ್ಲಿಯೇ ಸಂಚರಿಸಬೇಕಿದೆ. ಆದ್ದರಿಂದ ಸಂಬಂಧಪಟ್ಟವರು ಈ ಬಗ್ಗೆ ಗಮನಹರಿಸಿ ಪ್ರಮುಖ ರಸ್ತೆಗಳಲ್ಲಿ ಟ್ರಾಫಿಕ್ ಸಮಸ್ಯೆ ಉಂಟಾಗದಂತೆ ಪಾರ್ಕಿಂಗ್ ವ್ಯವಸ್ಥೆ ಮಾಡಬೇಕಿದೆ.

-ನಾಗೇಶ್, ಮಾನಸಗಂಗೋತ್ರಿ, ಮೈಸೂರು.

Tags: