Categories: Uncategorized

ಓದುಗರ ಪತ್ರ | ಬಸ್ ತಂಗುದಾಣದ ಸುತ್ತಲಿನ ಗಿಡಗಂಟಿ ತೆರವುಗೊಳಿಸಿ

ಎಚ್.ಡಿ.ಕೋಟೆ ತಾಲ್ಲೂಕಿನ ಅಂತರಸಂತೆ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯ ಮುಂಭಾಗದಲ್ಲಿ ಗ್ರಾಮೀಣ ಅಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆವತಿಯಿಂದ ತಾಲ್ಲೂಕು ಪಂಚಾಯಿತಿಯ ಅನಿರ್ಬಂಧಿತ ಅನುದಾನದಡಿ ಸುಮಾರು 4 ಲಕ್ಷ ರೂ. ವೆಚ್ಚದಲ್ಲಿ ಬಸ್ ತಂಗುದಾಣವನ್ನು ನಿರ್ಮಿಸಲಾಗಿದೆ ಈ ಬಸ್ ತಂಗುದಾಣವನ್ನು ನಿರ್ಮಿಸಿ ಕೆಲವು ತಿಂಗಳುಗಳಷ್ಟೇ ಕಳೆದಿದ್ದು, ಸರಿಯಾಗಿ ನಿರ್ವಹಣೆ ಮಾಡದ ಪರಿಣಾಮ ಸಾರ್ವಜನಿಕರ ಉಪಯೋಗದಿಂದ ದೂರಾಗಿದೆ.

ಈ ನಿಲ್ದಾಣದ ಸಮೀಪದಲ್ಲಿಯೇ ಸರ್ಕಾರಿ ಪ್ರೌಢಶಾಲೆ, ಪದವಿಪೂರ್ವ ಕಾಲೇಜು ಹಾಗೂ ಮಹದೇಶ್ವರಸ್ವಾಮಿ ದೇವಸ್ಥಾನವಿದ್ದು, ಉಪನ್ಯಾಸಕರು, ವಿದ್ಯಾರ್ಥಿಗಳು ಹಾಗೂ ದೇವಾಲಯಕ್ಕೆ ಬರುವ ಭಕ್ತರು ಇದೇ ಬಸ್ ತಂಗುದಾಣದಲ್ಲಿ ನಿಂತು ಬಸ್‌ಗಾಗಿ ಕಾಯುತ್ತಾರೆ. ಆದರೆ, ಈ ಬಸ್ ನಿಲ್ದಾಣದ ಸುತ್ತ ಗಿಡಗಂಟೆ ಬೆಳೆದುಕೊಂಡಿದ್ದು, ವಿಷಜಂತುಗಳ ಆತಂಕದಿಂದಾಗಿ ಯಾರೂ ಈ ನಿಲ್ದಾಣದೊಳಗೆ ಹೋಗಲು ಸಾಧ್ಯ ವಾಗುತ್ತಿಲ್ಲ. ಇದರೊಂದಿಗೆ ಕೆಲ ಸರ್ಕಾರಿ ಬಸ್‌ಗಳವರು ಈ ನಿಲ್ದಾಣದ ಸಮೀಪ ಶಿಕ್ಷಕರು, ವಿದ್ಯಾರ್ಥಿಗಳು ನಿಂತಿದ್ದರೂ ನಿಲುಗಡೆ ನೀಡದೆ ಹೋಗುತ್ತಿದ್ದಾರೆ. ಬಸ್‌ಗಳೇ ನಿಲುಗಡೆ ನೀಡದ ಮೇಲೆ ಬಸ್ ತಂಗುದಾಣವನ್ನು ನಿರ್ಮಿಸಿದರೆ ಫಲವೇನು? ಕೂಡಲೇ ಈ ಬಗ್ಗೆ ಸಂಬಂಧಪಟ್ಟವರು ಕ್ರಮವಹಿಸಿ ಬಸ್ ತಂಗುದಾಣದ ಸುತ್ತ ಬೆಳೆದಿರುವ ಗಿಡಗಂಟಿಗಳನ್ನು ತೆರವುಗೊಳಿಸುವ ಜತೆಗೆ ಬಸ್‌ಗಳು ನಿಲುಗಡೆ ನೀಡುವಂತೆ ಸೂಚನೆ ನೀಡಬೇಕಿದೆ.

-ಪ್ರಶಾಂತ್‌, ಅಂತರಸಂತೆ, ಎಚ್.ಡಿ.ಕೋಟೆ ತಾ

ಆಂದೋಲನ ಡೆಸ್ಕ್

Recent Posts

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ಜೈಲೇ ಮೊದಲ ಪಾಠ ಶಾಲೆ! ಕೊಲೆ ಆರೋಪಿಯೇ ಪ್ರಥಮ ಗುರು!

ಪಂಜು ಗಂಗೊಳ್ಳಿ ಜೈಲಿನ ಅನಕ್ಷರಸ್ಥ ಕೈದಿಗಳನ್ನು ಅಕ್ಷರಸ್ಥರನ್ನಾಗಿಸಲು ಮಹತ್ವದ ಯೋಜನೆ ರಾಜೇಶ್ ಕುಮಾರ್ ಯಾವತ್ತೂ ಶಾಲೆಯ ಮಟ್ಟಿಲು ಹತ್ತಿದವನಲ್ಲ. ಹಾಗಾಗಿ,…

12 mins ago

ನಾಳೆ ಶ್ರೀ ಅಯ್ಯಪ್ಪ ಕ್ಷೇತ್ರದ ಮುಖಮಂಟಪ ಲೋಕಾರ್ಪಣೆ

ಸುಂಟಿಕೊಪ್ಪದಲ್ಲಿ ೧೮ ಲಕ್ಷ ರೂ. ವೆಚ್ಚದ ಮಂಟಪ ನಿರ್ಮಾಣ ೩ ದಿನಗಳ ಧಾರ್ಮಿಕ ಕಾರ್ಯಕ್ರಮ ಸುಂಟಿಕೊಪ್ಪ: ಇಲ್ಲಿನ ಶ್ರೀ ಪುರಂ…

3 hours ago

‘ದೇಸಿ ಬೀಜಗಳನ್ನು ಉಳಿಸಿದರೆ ವಿಷಮುಕ್ತ ಆಹಾರ ನೀಡಲು ಸಾಧ್ಯ’

ಪಿರಿಯಾಪಟ್ಟಣ: ದೇಸಿ ಬೀಜಗಳನ್ನು ಉಳಿಸಿದರೆ ಮಾತ್ರ ಮುಂದಿನ ಯುವ ಜನಾಂಗಕ್ಕೆ ವಿಷಮುಕ್ತ ಆಹಾರ ನೀಡಲು ಸಾಧ್ಯ ಎಂದು ಸಾವಯವ ರೈತ…

3 hours ago

ಕ್ರಿಸ್‌ಮಸ್ ಹಬ್ಬಕ್ಕೆ ಅರಮನೆ ನಗರಿ ಸಜ್ಜು

ಮೈಸೂರು: ಕ್ರಿಸ್‌ಮಸ್ ಆಚರಣೆಗೆ ಕ್ಷಣಗಣನೆ ಶುರುವಾಗಿದ್ದು, ಮಾರುಕಟ್ಟೆಯಲ್ಲಿ ಖರೀದಿ ಭರಾಟೆ ಜೋರಾಗಿದ್ದರೆ, ಚರ್ಚ್‌ಗಳ ಅಂಗಳವನ್ನು ವಿದ್ಯುತ್ ದೀಪಗಳಿಂದ ಸಿಂಗರಿಸುವ ಕಾರ್ಯ…

3 hours ago

ಡಿಎಚ್‌ಒ ವರ್ಗಾವಣೆಯಲ್ಲಿ ಎಡವಟ್ಟು

ಕೆ.ಬಿ.ರಮೇಶನಾಯಕ ಟಿಎಚ್‌ಒ ಹುದ್ದೆಗೆ ಡಿಎಚ್‌ಒ ವರ್ಗಾವಣೆ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆ ಮೈಸೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ…

3 hours ago