Mysore
25
haze

Social Media

ಬುಧವಾರ, 31 ಡಿಸೆಂಬರ್ 2025
Light
Dark

ಓದುಗರ ಪತ್ರ: ಬೀದಿನಾಯಿಗಳ ಹಾವಳಿಗೆ ಕಡಿವಾಣ ಹಾಕಿ

ಪಿರಿಯಾಪಟ್ಟಣ ತಾಲ್ಲೂಕಿನ ಅರೇನಹಳ್ಳಿ ಗ್ರಾಮದಲ್ಲಿ ಬೀದಿನಾಯಿಗಳ ಹಾವಳಿ ಹೆಚ್ಚಾಗಿದ್ದು, ಸಾರ್ವಜನಿಕರು ರಸ್ತೆಯಲ್ಲಿ ತಿರುಗಾಡಲು ಆತಂಕಪಡುವಂತಾಗಿದೆ.
ಈ ನಾಯಿಗಳು ಗ್ರಾಮದ ಬೀದಿ ಬೀದಿಗಳಲ್ಲಿ ಗುಂಪು ಗುಂಪಾಗಿ ಓಡಾಡುತ್ತಿದ್ದು, ರಾತ್ರಿ ವೇಳೆ ಬೈಕ್‌ ಸವಾರರ ಮೇಲೆ ದಾಳಿ ಮಾಡುತ್ತಿವೆ. ಈ ವೇಳೆ ನಾಯಿಗಳಿಗೆ ಹೆದರಿ ಅನೇಕ ಬೈಕ್‌ ಸವಾರರು ವೇಗವಾಗಿ ಬೈಕ್‌ ಚಲಾಯಿಸಿ ನಿಯಂತ್ರಣ ತಪ್ಪಿ ಗಾಯಗೊಂಡಿರುವ ಉದಾಹರಣೆಗಳಿವೆ. ಅಲ್ಲದೆ ನಾಯಿಗಳು ಗುಂಪು ಗುಂಪಾಗಿ ಓಡಾಡುವುದರಿಂದ ಮಹಿಳೆಯರು, ಮಕ್ಕಳು, ಹಿರಿಯ ನಾಗರಿಕರು ಒಬ್ಬಂಟಿಯಾಗಿ ರಸ್ತೆಯಲ್ಲಿ ತಿರುಗಾಡಲು ಭಯಪಡುವಂತಾಗಿದೆ. ಅಲ್ಲದೆ ಇವು ಮಕ್ಕಳ ಮೇಲೂ ದಾಳಿಗೆ ಮುಂದಾಗುವ ಸಾಧ್ಯತೆ ಇದ್ದು, ಸಂಬಂಧಪಟ್ಟವರು ಈ ಬಗ್ಗೆ ಗಮನಹರಿಸಿ ಬೀದಿ ನಾಯಿಗಳ ಹಾವಳಿಗೆ ಕಡಿವಾಣ ಹಾಕಬೇಕಿದೆ.

-ಸಂಜು ಪುಟ್ಟೇಗೌಡ, ಅರೇನಹಳ್ಳಿ ಗ್ರಾಮ, ಪಿರಿಯಾಪಟ್ಟಣ ತಾ.

Tags:
error: Content is protected !!