Mysore
23
mist

Social Media

ಶುಕ್ರವಾರ, 02 ಜನವರಿ 2026
Light
Dark

ಓದುಗರ ಪತ್ರ: ರಸ್ತೆ, ಉದ್ಯಾನಗಳಿಗೆ ಸಿಸಿ ಕ್ಯಾಮೆರಾ ಅಳವಡಿಸಿ

ಇತ್ತೀಚಿನ ದಿನಗಳಲ್ಲಿ ಮೈಸೂರಿನಲ್ಲಿ ಹಣ,ಒಡವೆ ಕಳ್ಳತನ ಪ್ರಕರಣಗಳು ಹೆಚ್ಚಾಗಿ ದಾಖಲಾಗುತ್ತಿವೆ. ಅಷ್ಟೇ ಅಲ್ಲದೆ ರಸ್ತೆಯಲ್ಲಿ ನಿಲ್ಲಿಸಿರುವ ದ್ವಿಚಕ್ರ ವಾಹನಗಳು ಹಾಗೂ ಇತರ ವಾಹನಗಳನ್ನು ಕಳ್ಳತನ ಮಾಡಲಾಗುತ್ತಿದೆ.

ರಸ್ತೆಗಳಲ್ಲಿ ಕೆಲ ಯುವಕರು ಗಲಾಟೆ ಮಾಡುತ್ತಾ ಕಿರುಚಾಡುತ್ತಾ ತೊಂದರೆ ಕೊಡುವುದು ಮಾಮೂಲಿ ಎಂಬಂತಾಗಿದೆ. ರಾತ್ರಿಯ ವೇಳೆಯಲ್ಲಿ ದುಬಾರಿ ಬೈಕ್‌ಗಳಲ್ಲಿ ಅತೀ ವೇಗವಾಗಿ ಚಾಲನೆ ಮಾಡುವ ಮೂಲಕ ಸಾರ್ವಜನಿಕರ ನೆಮ್ಮದಿಗೆ ಭಂಗ ತಂದಿದ್ದಾರೆ.

ಉದ್ಯಾನವನಗಳಲ್ಲಿ ಕುಳಿತು ಧೂಮಪಾನ, ಮದ್ಯಪಾನ ಮಾಡಿ ವಾತಾವರಣವನ್ನು ಹದಗೆಡಿಸಲಾಗುತ್ತಿದೆ. ಶಾಲಾ ಕಾಲೇಜು ವಿದ್ಯಾರ್ಥಿಗಳು ಪ್ರೀತಿ ಪ್ರೇಮದ ನೆಪದಲ್ಲಿ ಉದ್ಯಾನವನಗಳಲ್ಲಿಯೇ ಮೋಜು ಮಸ್ತಿ ಮಾಡುತ್ತಿದ್ದಾರೆ.

ಇದರಿಂದ ವಾಯುವಿಹಾರಕ್ಕೆ ಬರುವವರಿಗೆ ಮುಜುಗರವಾಗುತ್ತಿದೆ. ಇಂತಹ ಕೃತ್ಯಗಳನ್ನು ತಡೆಯಲು ರಸ್ತೆಗಳ ಬದಿ ಹಾಗೂ ಉದ್ಯಾನವನಗಳಲ್ಲಿ ಸಿ ಸಿ ಕ್ಯಾಮೆರಾಗಳನ್ನು ಅಳವಡಿಸಲು ಸಂಬಂಧಪಟ್ಟವರು ಕ್ರಮ ಕೈಗೊಳ್ಳಬೇಕಿದೆ.

– ನಾಗೇಶ್, ಮಾನಸಗಂಗೋತ್ರಿ, ಮೈಸೂರು

 

Tags:
error: Content is protected !!