Mysore
18
overcast clouds

Social Media

ಬುಧವಾರ, 28 ಜನವರಿ 2026
Light
Dark

ರಾಜ್ಯದ 42 ಶಾಲೆಗಳಲ್ಲಿ ಎಲ್‌ಕೆಜಿ ಆರಂಭಕ್ಕೆ ಸಮ್ಮತಿ

ಬೆಂಗಳೂರು: ರಾಜ್ಯದ 42 ಶಾಲೆಗಳಲ್ಲಿ ಎಲ್‌ಕೆಜಿ ಹಾಗೂ 51 ಶಾಲೆಗಳಲ್ಲಿ ಆಂಗ್ಲ ಮಾಧ್ಯಮದ ಹೆಚ್ಚುವರಿ ವಿಭಾಗ ಆರಂಭಿಸಲು ಶಾಲಾ ಶಿಕ್ಷಣ ಇಲಾಖೆ ಅನುಮೋದನೆ ನೀಡಿದೆ.

ಪ್ರಸಕ್ತ ಶೈಕ್ಷಣಿಕ ವರ್ಷದ ಆರಂಭದಲ್ಲಿ ಕರ್ನಾಟಕದ ಏಳು ಜಿಲ್ಲೆಗಳಲ್ಲಿ ಒಂದು ಸಾವಿರಕ್ಕೂ ಹೆಚ್ಚು ಪೂರ್ವ ಪ್ರಾಥಮಿಕ ಶಾಲೆಗಳನ್ನು ಆರಂಭಿಸಲಾಗಿತ್ತು.

ಈಗ ಮತ್ತೆ 42 ಶಾಲೆಗಳಿಗೆ ಇಲಾಖೆಯ ಆಯುಕ್ತ ಕೆ.ವಿ.ತ್ರಿಲೋಕ್‌ ಚಂದ್ರ ಅನುಮತಿ ನೀಡಿದ್ದಾರೆ.

ಸರ್ಕಾರಿ ಶಾಲೆಗಳ ಬಲವರ್ಧನೆಗೆ ಕೆಲ ವರ್ಷಗಳ ಹಿಂದಯೇ ಕರ್ನಾಟಕ ಪಬ್ಲಿಕ್‌ ಶಾಲೆಗಳನ್ನು ಆರಂಭಿಸಲಾಗಿತ್ತು. ಹಾಗೆಯೇ ಒಂದನೇ ತರಗತಿಯಿಂದಲೇ ಆಂಗ್ಲ ಮಾಧ್ಯಮ ಶಾಲೆಗಳನ್ನು ಆರಂಭಿಸಲು ಅನುಮತಿ ನೀಡಿತ್ತು. ಪ್ರಸ್ತುತ ಇರುವ 286 ಪಬ್ಲಿಕ್‌ ಶಾಲೆಗಳಲ್ಲಿ ಹೆಚ್ಚು ವಿದ್ಯಾರ್ಥಿಗಳು ದಾಖಲಾಗಿರುವ 51 ಶಾಲೆಗಳಲ್ಲಿ ಹೆಚ್ಚುವರಿ ಆಂಗ್ಲ ಮಾಧ್ಯಮ ವಿಭಾಗ ಆರಂಭಿಸಲಾಗುತ್ತಿದೆ.

ಹೊಸದಾಗಿ ಆಂಗ್ಲ ಮಾಧ್ಯಮ ಶಾಲೆ ಆರಂಭಿಸಲು, ಒಂದನೇ ತರಗತಿಯಿಂದಲೇ ಕನ್ನಡ ಮಾಧ್ಯಮದ ಜೊತೆ ಆಂಗ್ಲ ಮಾಧ್ಯಮಕ್ಕೂ ಅವಕಾಶ ನೀಡಲು ಹಾಗೂ ಹೆಚ್ಚುವರಿ ವಿಭಾಗದ ಮಂಜೂರು ಮಾಡಲು ಪ್ರಸ್ತಾವ ಸಲ್ಲಿಸುವಂತೆ ಶಾಲಾ ಶಿಕ್ಷಣ ಇಲಾಖೆ ಈಚೆಗೆ ಸೂಚನೆ ನೀಡಿತ್ತು.

Tags:
error: Content is protected !!