Mysore
18
overcast clouds

Social Media

ಮಂಗಳವಾರ, 16 ಡಿಸೆಂಬರ್ 2025
Light
Dark

ವಿಧಾನಸೌಧದ ಗುಮ್ಮಟ್ಟದಲ್ಲಿ ಬಿರುಕು ; ಸ್ಪೀಕರ್ ಯು.ಟಿ ಖಾದರ್ ಪರಿಶೀಲನೆ

ಬೆಂಗಳೂರು : ವಿಧಾನಸೌಧದ ಪೂರ್ವ ದಿಕ್ಕಿನಲ್ಲಿರುವ ಗುಮ್ಮಟದಲ್ಲಿ ಬಿರುಕು ಕಾಣಿಸಿಕೊಂಡಿದ್ದು, ಮಳೆ ನೀರು ಸೋರಿಕೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಇಂದು ಸ್ಪೀಕರ್‌ ಯುಟಿ ಖಾದರ್‌ ದಿಢೀರ್‌ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸ್ಪೀಕರ್, ಇದು ನಮ್ಮ ವ್ಯಾಪ್ತಿಗೆ ಬರುವುದಿಲ್ಲ. ಡಿಪಿಆರ್‌ ಹಾಗೂ ಲೋಕೋಪಯೋಗಿ ಇಲಾಖೆಯವರ ಅಡಿಯಲ್ಲಿ ಬರುತ್ತದೆ. ಅವರ ಗಮನಕ್ಕೆ ತಂದು ಸರಿಪಡಿಸಲು ಹೇಳುತ್ತೇನೆ. ಇದೊಂದು ಬಹಳ ವರ್ಷದ ಕಟ್ಟಡವಾಗಿದ್ದರಿಂದ ಕೆಲವೊಂದು ಲೋಪದೋಷ ಆಗಿರಬಹುದು. ನಾನು ಆದಷ್ಟು ಬೇಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ವಿಚಾರ ತಿಳಿಸುತ್ತೇನೆ ಎಂದು ಹೇಳಿದರು.

Tags:
error: Content is protected !!