ಬೆಂಗಳೂರು: ರಾಜ್ಯದ ಪಂಚ ಗ್ಯಾರಂಟಿಗಳ ಕುರಿತು ಸುಳ್ಳು ಜಾಹೀರಾತು ನೀಡಿದ್ದ ಆರೋಪದ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಬಿಜೆಪಿ ಘಟಕದ ವಿರುದ್ಧ ರಾಜ್ಯ ಸರ್ಕಾರ ಕೇಸ್ ದಾಖಲಿಸಲು ನಿರ್ಧರಿಸಿದೆ.
ಈ ವಿಚಾರಕ್ಕೆ ಸಂಬಂಧಿಸಿದಂತೆ ಖುದ್ದು ಸಿಎಂ ಸಿದ್ದರಾಮಯ್ಯ ತಮ್ಮ ಎಕ್ಸ್ ಖಾತೆಯ ಮೂಲಕ ಎಚ್ಚರಿಕೆ ನೀಡಿದ್ದಾರೆ.
ಸಿಎಂ ಸಿದ್ದರಾಮಯ್ಯ ತಮ್ಮ ಎಕ್ಸ್ ಖಾತೆಯಲ್ಲಿ ಮಹಾರಾಷ್ಟ್ರ ಬಿಜೆಪಿ ಘಟಕದ ವಿರುದ್ಧ ಪೋಸ್ಟ್ ಮಾಡಿದ್ದು, ಕರ್ನಾಟಕ ಸರ್ಕಾರ ರಾಜ್ಯದಲ್ಲಿ ಗ್ಯಾರಂಟಿಗಳನ್ನು ಜಾರಿ ಮಾಡದೆ ವಂಚಿಸಿದೆ ಎನ್ನುವ ಸುಳ್ಳು ಜಾಹೀರಾತನ್ನು ನೀಡಿದೆ. ಪುಟಗಟ್ಟಲೆ ನೀಡಿದ್ದ ಮಹಾರಾಷ್ಟ್ರದ ಬಿಜೆಪಿ ವಿರುದ್ಧ ಕರ್ನಾಟಕ ಸರ್ಕಾರ ಕೇಸು ದಾಖಲಿಸಿ ಸರಿಯಾದ ಪಾಠ ಕಲಿಸಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.





