Categories: Uncategorized

ಪ್ರತಿಮಾ ಹತ್ಯೆ ಪ್ರಕರಣ: ಆರೋಪಿ ಕಿರಣ್‍ ನ.15ರ ವರೆಗೆ ಪೊಲೀಸ್ ಕಸ್ಟಡಿಗೆ

ಬೆಂಗಳೂರು : ಬೆಂಗಳೂರಿನ ದೊಡ್ಡಕಲ್ಲಸಂದ್ರದ ಕುವೆಂಪು ನಗರದಲ್ಲಿ ನಡೆದಿದ್ದ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ಭೂ ವಿಜ್ಞಾನಿ ಕೆ.ಎಸ್.ಪ್ರತಿಮಾ(40) ಅವರ ಹತ್ಯೆ ಪ್ರಕರಣದ ಆರೋಪಿ ಕಿರಣ್‍ನನ್ನು ನಗರದ ಮ್ಯಾಜಿಸ್ಟ್ರೇಟ್ ಕೋರ್ಟ್ 10 ದಿನಗಳ ಕಾಲ ಸೋಮವಾರ ಪೊಲೀಸ್ ಕಸ್ಟಡಿಗೆ ನೀಡಿದೆ.

ಸೋಮವಾರ ಬಂಧಿತ ಆರೋಪಿ ಕಿರಣ್‍ನನ್ನು ವೈದ್ಯಕೀಯ ತಪಾಸಣೆಯ ಬಳಿಕ ಬೆಂಗಳೂರಿನ 2ನೆ ಹೆಚ್ಚುವರಿ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ ಬಿ.ಎಸ್.ವೇದಮೂರ್ತಿ ಅವರ ಮುಂದೆ ಹಾಜರುಪಡಿಸಲಾಗಿತ್ತು. ಘಟನೆಯ ಮಾಹಿತಿ ಪಡೆದ ಮ್ಯಾಜಿಸ್ಟ್ರೇಟ್ ಅವರು ಆರೋಪಿಯನ್ನು ನ.15ರ ವರೆಗೆ ಪೊಲೀಸರ ವಶಕ್ಕೆ ನೀಡಿದ್ದಾರೆ.

ಪ್ರತಿಮಾ ಅವರ ಮಾಜಿ ಕಾರು ಚಾಲಕನಾದ ಆರೋಪಿ ಕಿರಣ್‍ನನ್ನು ಮಲೆ ಮಹದೇಶ್ವರ ಬೆಟ್ಟದಲ್ಲಿ ಬಂಧಿಸಲಾಗಿತ್ತು. ಕೆಲಸ ಕಳೆದುಕೊಂಡಿದ್ದ ಕಿರಣ್ ಕಳೆದ ಶನಿವಾರ ಪ್ರತಿಮಾ ಅವರ ಮನೆಗೆ ತೆರಳಿ ಮತ್ತೆ ಕೆಲಸಕ್ಕೆ ನೇಮಕ ಮಾಡಿಕೊಳ್ಳುವಂತೆ ಕೋರಿದ್ದ. ಇದಕ್ಕೆ ನಿರಾಕರಿಸಿದ ಕಾರಣಕ್ಕೆ ಪ್ರತಿಮಾ ಅವರನ್ನು ಕೊಲೆ ಮಾಡಿರುವುದಾಗಿ ಕಿರಣ್ ಒಪ್ಪಿಕೊಂಡಿದ್ದಾನೆ ಎನ್ನಲಾಗಿದೆ.

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ತುಡ್ಕಿ ಮೂಲದ ಪ್ರತಿಮಾ ಅವರು 2008ರಲ್ಲಿ ಭೂ ವಿಜ್ಞಾನಿಯಾಗಿ ನೇಮಕವಾಗಿದ್ದರು. 2019ರಲ್ಲಿ ಹಿರಿಯ ಭೂ ವಿಜ್ಞಾನಿಯಾಗಿ ಬಡ್ತಿ ಪಡೆದಿದ್ದರು.

andolanait

Recent Posts

ಮಹದೇಶ್ವರ ಬೆಟ್ಟ ಮುಖ್ಯರಸ್ತೆ ಬದಿಯಲ್ಲಿ ಒಂಟಿಸಲಗ ದರ್ಶನ: ಭಯಭೀತರಾದ ವಾಹನ ಸವಾರರು

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ತೆರಳುತ್ತಿದ್ದ ಬಾಲಕನ…

5 hours ago

ಸೈಬರ್ ಕ್ರೈಂ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ: ಕಳೆದುಹೋಗಿದ್ದ 104 ಮೊಬೈಲ್ ವಶಕ್ಕೆ

ಮಡಿಕೇರಿ: ಕೊಡಗು ಜಿಲ್ಲೆಯ ಸೈಬರ್ ಕ್ರೈಂ ಪೊಲೀಸರು ಒಂದು ತಿಂಗಳ ಕಾಲ ಕ್ಷಿಪ್ರ ಕಾರ್ಯಾಚರಣೆ ಮಾಡುವ ಮೂಲಕ ನಾಗರಿಕರು ಕಳೆದುಕೊಂಡ…

5 hours ago

ಮಕ್ಕಳಿಗೆ ಜಂತುಹುಳು ಮಾತ್ರೆ ನೀಡಿದ ಶಾಸಕ ಅನಿಲ್ ಚಿಕ್ಕಮಾದು

ಎಚ್.ಡಿ.ಕೋಟೆ: ಮಾದಾಪುರ ಗ್ರಾಮದ ಚಂದ್ರಮೌಳೇಶ್ವರ ಮಲ್ಲಿಕಾರ್ಜುನ ಸ್ವಾಮಿ ಜಾತ್ರಾ ಮಹೋತ್ಸವದಲ್ಲಿ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನದ ಪ್ರಯುಕ್ತ ಅರಣ್ಯ ಮತ್ತು…

6 hours ago

ಕಾಯಕ ಶರಣರ ಆದರ್ಶ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು: ಡಾ.ಬಿ.ವಿ.ನಂದೀಶ್

ಮಂಡ್ಯ: ಕಾಯಕ ಶರಣರು ಸಮಾಜಕ್ಕೆ ವಚನಗಳ ಮೂಲಕ ಅನೇಕ ಕೊಡುಗೆಗಳನ್ನು ನೀಡಿದ್ದಾರೆ. ಯುವ ಜನತೆಯೂ ಕಾಯಕ ಶರಣರ ಆದರ್ಶ, ಮೌಲ್ಯಗಳನ್ನು…

6 hours ago

ಮಕ್ಕಳು ಅಂತರ್ಜಾಲದ ಬಳಕೆ ಕಡಿಮೆ ಮಾಡಬೇಕು: ಬಿ.ಸಿ.ಶಿವಾನಂದ ಮೂರ್ತಿ

ಮಂಡ್ಯ: ಪ್ರಸ್ತುತ ಕಾಲದಲ್ಲಿ ಮಕ್ಕಳು ಅಂತರ್ಜಾಲ ಬಳಕೆಯನ್ನು ಹೆಚ್ಚು ಮಾಡುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಮುಳುಗಿ ಹೋಗಿದ್ದಾರೆ ಇದರಿಂದ ಮಕ್ಕಳ ಮನಸ್ಥಿತಿ…

6 hours ago

ಮಂಡ್ಯ ಜಿಲ್ಲೆ ಇ-ಪೌತಿ ಖಾತಾ ಆಂದೋಲನದಲ್ಲಿ ರಾಜ್ಯಕ್ಕೆ ಪ್ರಥಮ

ಮಂಡ್ಯ: ಪೌತಿ ಖಾತೆ ಪ್ರಕ್ರಿಯೆಯನ್ನು ಮಂಡ್ಯ ಜಿಲ್ಲೆಯು ಈ ಪೌತಿ ಖಾತೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದು, ಈ ಪೌತಿ ಖಾತೆಯನ್ನು…

6 hours ago