ಬೆಂಗಳೂರು : ಬೆಂಗಳೂರಿನ ದೊಡ್ಡಕಲ್ಲಸಂದ್ರದ ಕುವೆಂಪು ನಗರದಲ್ಲಿ ನಡೆದಿದ್ದ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ಭೂ ವಿಜ್ಞಾನಿ ಕೆ.ಎಸ್.ಪ್ರತಿಮಾ(40) ಅವರ ಹತ್ಯೆ ಪ್ರಕರಣದ ಆರೋಪಿ ಕಿರಣ್‍ನನ್ನು ನಗರದ ಮ್ಯಾಜಿಸ್ಟ್ರೇಟ್ ಕೋರ್ಟ್ 10 ದಿನಗಳ ಕಾಲ ಸೋಮವಾರ ಪೊಲೀಸ್ ಕಸ್ಟಡಿಗೆ ನೀಡಿದೆ.
ಸೋಮವಾರ ಬಂಧಿತ ಆರೋಪಿ ಕಿರಣ್‍ನನ್ನು ವೈದ್ಯಕೀಯ ತಪಾಸಣೆಯ ಬಳಿಕ ಬೆಂಗಳೂರಿನ 2ನೆ ಹೆಚ್ಚುವರಿ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ ಬಿ.ಎಸ್.ವೇದಮೂರ್ತಿ ಅವರ ಮುಂದೆ ಹಾಜರುಪಡಿಸಲಾಗಿತ್ತು. ಘಟನೆಯ ಮಾಹಿತಿ ಪಡೆದ ಮ್ಯಾಜಿಸ್ಟ್ರೇಟ್ ಅವರು ಆರೋಪಿಯನ್ನು ನ.15ರ ವರೆಗೆ ಪೊಲೀಸರ ವಶಕ್ಕೆ ನೀಡಿದ್ದಾರೆ.
ಪ್ರತಿಮಾ ಅವರ ಮಾಜಿ ಕಾರು ಚಾಲಕನಾದ ಆರೋಪಿ ಕಿರಣ್‍ನನ್ನು ಮಲೆ ಮಹದೇಶ್ವರ ಬೆಟ್ಟದಲ್ಲಿ ಬಂಧಿಸಲಾಗಿತ್ತು. ಕೆಲಸ ಕಳೆದುಕೊಂಡಿದ್ದ ಕಿರಣ್ ಕಳೆದ ಶನಿವಾರ ಪ್ರತಿಮಾ ಅವರ ಮನೆಗೆ ತೆರಳಿ ಮತ್ತೆ ಕೆಲಸಕ್ಕೆ ನೇಮಕ ಮಾಡಿಕೊಳ್ಳುವಂತೆ ಕೋರಿದ್ದ. ಇದಕ್ಕೆ ನಿರಾಕರಿಸಿದ ಕಾರಣಕ್ಕೆ ಪ್ರತಿಮಾ ಅವರನ್ನು ಕೊಲೆ ಮಾಡಿರುವುದಾಗಿ ಕಿರಣ್ ಒಪ್ಪಿಕೊಂಡಿದ್ದಾನೆ ಎನ್ನಲಾಗಿದೆ.
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ತುಡ್ಕಿ ಮೂಲದ ಪ್ರತಿಮಾ ಅವರು 2008ರಲ್ಲಿ ಭೂ ವಿಜ್ಞಾನಿಯಾಗಿ ನೇಮಕವಾಗಿದ್ದರು. 2019ರಲ್ಲಿ ಹಿರಿಯ ಭೂ ವಿಜ್ಞಾನಿಯಾಗಿ ಬಡ್ತಿ ಪಡೆದಿದ್ದರು.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…