ದಕ್ಷಿಣ ಕನ್ನಡ: ಕ್ರಿಕೆಟ್ ಆಟಗಾರ ಸೂರ್ಯಕುಮಾರ್ ಯಾದವ್ ಅವರು ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ಭೇಟಿ ನೀಡಿ ಆಶ್ಲೇಷ ಬಲಿ ಪೂಜೆ, ಮಹಾಪೂಜೆ ಹಾಗೂ ಅಭಿಷೇಕವನ್ನು ನೆರವೇರಿಸಿದರು.
ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲ್ಲೂಕಿನಲ್ಲಿರುವ ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ಸೂರ್ಯಕುಮಾರ್ ಯಾದವ್ ಅವರು ಪತ್ನಿಯೊಂದಿಗೆ ಆಗಮಿಸಿ ಸುಬ್ರಮ್ಮಣ್ಯನ ದರ್ಶನ ಪಡೆದರು. ಬಳಿಕ ಸುಬ್ರಮಣ್ಯನ ಸನ್ನಿಧಾನದಲ್ಲಿ ಪತ್ನಿಯೊಡನೆ ಆಶ್ಲೇಷ ಬಲಿ ಪೂಜೆ, ಮಹಾಪೂಜೆ ಹಾಗೂ ಅಭಿಷೇಕವನ್ನು ನೆರವೇರಿಸಿ ಹರಕೆ ತೀರಿಸಿದ್ದಾರೆ.