Mysore
27
few clouds

Social Media

ಮಂಗಳವಾರ, 27 ಜನವರಿ 2026
Light
Dark

ಸಿಎಂ ವಿರುದ್ಧದ ವಿಪಕ್ಷಗಳ ಟೀಕೆಗೆ ಮತದಾರರಿಂದ ತಕ್ಕ ಉತ್ತರ ಸಿಕ್ಕಿದೆ: ಎಚ್.ಎ.ವೆಂಕಟೇಶ್‌

ಮೈಸೂರು: ಸಿಎಂ ಸಿದ್ದರಾಮಯ್ಯ ಹಾಗೂ ಸರ್ಕಾರದ ವಿರುದ್ಧ ವಿಪಕ್ಷಗಳು ಮಾಡಿದ ಟೀಕೆಗಳಿಗೆ ಮತದಾರರು ತಕ್ಕ ಉತ್ತರ ಕೊಟ್ಟಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಎಚ್.ಎ.ವೆಂಕಟೇಶ್‌ ತಿಳಿಸಿದ್ದಾರೆ.

ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಭರ್ಜರಿ ಗೆಲುವು ಸಾಧಿಸಿರುವ ಬಗ್ಗೆ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಿಪಕ್ಷಗಳು ಸರ್ಕಾರ ಹಾಗೂ ಸಿಎಂ ವಿರುದ್ಧ ಷಡ್ಯಂತ್ರ ಮಾಡುತ್ತಾ ಬಂದಿದ್ದವು. ಇದಕ್ಕೆ ಮತದಾರ ಸೂಕ್ತ ಉತ್ತರ ಕೊಟ್ಟಿದ್ದಾನೆ ಎಂದು ವಿಪಕ್ಷಗಳ ವಿರುದ್ಧ ಕಿಡಿಕಾರಿದರು.

ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್‌ ಸರ್ಕಾರ ತಾಯಿ ಹೃದಯದಿಂದ ಜನರ ಸಂಕಷ್ಟವನ್ನು ನೋಡುತ್ತಿದೆ. ಈ ಕಾರಣದಿಂದಲೇ ಶಕ್ತಿ ಯೋಜನೆ, ಅನ್ನಭಾಗ್ಯ, ಗೃಹಲಕ್ಷ್ಮೀ ಮುಂತಾದ ಯೋಜನೆಗಳು ಜನರ ನೆರವಿಗೆ ನಿಂತಿವೆ ಎಂದು ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ಸಂತಸ ವ್ಯಕ್ತಪಡಿಸಿದರು.

 

 

Tags:
error: Content is protected !!