ತುಮಕೂರು : ಇಂದು ಬೆಳಿಗ್ಗೆ ಶಿರಾ ತಾಲ್ಲೂಕ್ಕಿನ ಬಾಲೆನಹಳ್ಳಿ ಗೇಟ್ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ 9 ಜನರ ಕುಟುಂಬಕ್ಕೆ ತಲಾ 2 ಲಕ್ಷರೂ ಗಳ ಪರಿಹಾರವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಘೋಷಿಸಿದ್ದಾರೆ. ಮತ್ತು ಗಾಯಾಳುಗಳಿಗೆ ತಲಾ 50 ಸಾವಿರ ರೂಗಳ ಪರಿಹಾರವನ್ನು ಮೋದಿ ಘೋಷಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿದ ಸಂತಾಪ ಸೂಚಿಸಿರುವ ಮೋದಿ ಅವರು
ಕರ್ನಾಟಕದ ತುಮಕೂರು ಜಿಲ್ಲೆಯಲ್ಲಿ ನಡೆದ ಅಪಘಾತ ಹೃದಯ ವಿದ್ರಾವಕ.ಅಪಘಾತದಲ್ಲಿ ಜೀವ ಕಳೆದು ಕೊಂಡವರಿಗೆ ಸಂತಾಪಗಳು.ಗಾಯಗೊಂಡವರು ಶೀಘ್ರ ಗುಣಮುಖರಾಗಲೆಂದು ಪ್ರಾರ್ಥನೆ.ಮೃತರ ಕುಟುಂಬದವರಿಗೆ ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ ಎರಡು ಲಕ್ಷ ರೂಪಾಯಿ ಹಾಗೂ ಗಾಯಗೊಂಡವರಿಗೆ ತಲಾ 50 ಸಾವಿರ ರೂಪಾಯಿ ಪರಿಹಾರ ನೀಡಲಾಗುವುದು. ಎಂದು ತಿಳಿಸಿದ್ದಾರೆ.
ಅಪಘಾತ ನಡೆದಿದ್ದು ಹೇಗೆ?
ರಾಯಚೂರು ಜಿಲ್ಲೆಯಿಂದ ನಿನ್ನೆ 24 ಜನರು ಹೊರಟಿದ್ದು, ಮಾರ್ಗಮಧ್ಯದಲ್ಲಿ ಬೆಳಗಿನ ಜಾವ 4ಗಂಟೆ ಸುಮಾರಿಗೆ ಕ್ರೂಸರ್ ಚಾಲಕ ಲಾರಿವೊಂದನ್ನು ಓವರ್ ಟೇಕ್ ಮಾಡಲು ಹೋಗಿದ್ದು, ಹಿಂಬದಿಯಿಂದ ಬಂದ ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಕ್ರೂಸರ್ ವಾಹನದ ಟೈರ್ ಸ್ಫೋಟಗೊಂಡು ಡಿವೈಡರ್ಗೆ ಡಿಕ್ಕಿ ಹೊಡಿದಿದೆ. ಹುಬ್ಬಳ್ಳಿಯಿಂದ ತಮಿಳುನಾಡಿನ ಕೊಯಂಬತ್ತೂರಿಗೆ ಲಾರಿ ತೆರಳುತ್ತಿತ್ತು. ತಮಿಳುನಾಡಿನ ನೋಂದಣಿ ಸಂಖ್ಯೆಯನ್ನು ಲಾರಿ ಹೊಂದಿದೆ.