ಚಾಮರಾಜನಗರ: ನೆರೆಯ ತಮಿಳುನಾಡಿಗೆ ಹುಲಿ ಉಗುರು ಸಾಗಿಸುತ್ತಿದ್ದ ಆರೋಪಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.
ಗಡಿ ಜಿಲ್ಲೆ ಚಾಮರಾಜನಗರದ ಪುಣಜನೂರು ವನ್ಯಜೀವಿ ವಲಯದಲ್ಲಿ ಈ ಘಟನೆ ನಡೆದಿದ್ದು, ಬೂದಿಪಡಗ ಗ್ರಾಮದ ಚಿಕ್ಕಮಾದ ಎಂಬುವವನೇ ಬಂಧಿತ ಆರೋಪಿಯಾಗಿದ್ದಾನೆ.
ನೆರೆಯ ರಾಜ್ಯ ತಮಿಳುನಾಡಿಗೆ ಐದು ಹುಲಿ ಉಗುರುಗಳನ್ನು ಸಾಗಿಸುತ್ತಿದ್ದ ವೇಳೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅರಣ್ಯ ಇಲಾಖೆ ಅಧಿಕಾರಿಗಳು ಆರೋಪಿಯನ್ನು ಬಂಧಿಸಿದ್ದಾರೆ.
ಸದ್ಯ ಬಂಧಿತ ಆರೋಪಿಯಿಂದ ಐದು ಹುಲಿ ಉಗುರುಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.