ಮಂಡ್ಯ: ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಅವರು ನಾಳೆ ಮಂಡ್ಯ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.
ನಾಳೆ ಬೆಳಿಗ್ಗೆ 10 ಗಂಟೆಗೆ ಮಂಡ್ಯದ ಮೈಸೂರು ಸಕ್ಕರೆ ಕಂಪನಿಯ 2024-25ನೇ ಸಾಲಿನ ಕಬ್ಬು ನುರಿಸುವ ಸಂಬಂಧ ಏರ್ಪಡಿಸಿರುವ ಕಾರ್ಖಾನೆಯ ಬಾಯ್ಲರ್ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಬೆಳಿಗ್ಗೆ 11 ಗಂಟೆಗೆ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಶ್ರೀ ನಾಡಪ್ರಭು ಕೆಂಪೇಗೌಡರ 525ನೇ ಜಯಂತಿ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.
ಇನ್ನೂ ಸಂಜೆ 5 ಗಂಟೆಗೆ ನಾಗಮಂಗಲ ತಾಲ್ಲೂಕಿನಲ್ಲಿ ನಡೆಯುವ ಶ್ರೀ ನಾಡಪ್ರಭು ಕೆಂಪೇಗೌಡರ 515ನೇ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ನಂತರ ರಾತ್ರಿ 8 ಗಂಟೆಗೆ ನಾಗಮಂಗಲ ರಸ್ತೆಯ ಮೂಲಕ ಬೆಳ್ಳೂರು ಕ್ರಾಸ್, ಯಡಿಯೂರು, ಕುಣಿಗಲ್, ನೆಲಮಂಗಲ ಮಾರ್ಗವಾಗಿ ಕೆಂದ್ರ ಸ್ಥಾನ ಬೆಂಗಳೂರಿಗೆ ತಲುಪಲಿದ್ದಾರೆ.
ಮಂಡ್ಯ ಪ್ರವಾಸದ ಬಗ್ಗೆ ಸರ್ಕಾರದ ಮನವಿ ಮಾಡಲಿರುವ ಸಚಿವ ಚಲುವರಾಯಸ್ವಾಮಿ ಅವರು, ರೈತರು ಎದುರಿಸುತ್ತಿರುವ ಅನೇಕ ಸಮಸ್ಯೆಗಳ ಬಗ್ಗೆ ಸಂಪೂರ್ಣ ವಿವರ ನೀಡಲಿದ್ದಾರೆ ಎನ್ನಲಾಗಿದ್ದು, ಮಂಡ್ಯ ಜಿಲ್ಲೆಯ ರೈತರು ಅನುಭವಿಸುತ್ತಿರುವ ಸಮಸ್ಯೆಗೆ ಬಹು ಬೇಗ ಸರ್ಕಾರದಿಂದ ಸ್ಪಂದನೆ ಸಿಗಲಿದೆ ಎನ್ನಲಾಗುತ್ತಿದೆ.