ಮೈಸೂರು: ರಾಮನಗರ ಜಿಲ್ಲೆಯ ಬಿಡದಿ ಹೋಬಳಿಯಲ್ಲಿ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವೂ ಟೌನ್‌ಶಿಪ್ ನಿರ್ಮಾಣಕ್ಕೆ ರೈತರ ಭೂಮಿ ಸ್ವಾಧೀನಪಡಿಸಿಕೊಳ್ಳುವುದನ್ನು ತೀವ್ರವಾಗಿ ವೀರೋಧಿಸಿರುವ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರಿಗೆ ಡಿಸಿಎಂ ಡಿ ಕೆ ಶಿವಕುಮಾರ್ ಟಾಂಗ್ ನೀಡಿದ್ದಾರೆ.
ಬಿಡದಿ ಟೌನ್ ಶಿಪ್ ಗೆ ರೈತರ ಭೂಮಿ ಕೈಬಿಡುವಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ದೇವೇಗೌಡರ ಪತ್ರ ವಿಚಾರವಾಗಿ ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿದ ಡಿಸಿಎಂ ಡಿಕೆ ಶಿವಕುಮಾರ್, ಕುಮಾರಸ್ವಾಮಿ ಕಾಲದಲ್ಲೇ 7 ಟೌನ್ ಶಿಪ್ ಮಾಡಬೇಕು ಅಂತ ತೀರ್ಮಾನ ಆಗಿದ್ದು, ಅದಕ್ಕಾಗಿ 300 ಕೋಟಿ ಹಣ ಕೊಟ್ಟಿದ್ರು ಟೌನ್ ಶಿಪ್ ಪ್ಲಾನ್ ಅವರ ಕಾಲದಲ್ಲೇ ಆಗಿದ್ದು, ನಾನು ಡಿನೋಟಿಫಿಕೇಶ್ ಮಾಡಲು ಹೋಗಲ್ಲ ಎಂದಿದ್ದಾರೆ.
ಈ ಹಿಂದೆ ನನ್ನ ಮೇಲೆ ಏನೆಲ್ಲಾ ಹೇಳಿದ್ರು ಅದೆಲ್ಲ ಇತಿಹಾಸ. ಟೌನ್ ಶಿಪ್ ಪಿತಾಮಹ ದೇವೇಗೌಡ ಹಾಗೂ ಕುಮಾರಸ್ವಾಮಿ ಯಾರು ಏನೇ ಹೇಳಿದ್ರು ಗ್ರೇಟರ್ ಬೆಂಗಳೂರು ಮಾಡೇ ಮಾಡುತ್ತೇವೆ. ಬೆಂಗಳೂರಿಗಿಂತ ಚೆನ್ನಾಗಿ 10 ಸಾವಿರ ಎಕರೆಯಲ್ಲಿ ಉತ್ತಮ ಸಿಟಿ ಮಾಡುತ್ತೇವೆ. ಇದು ಮಾಡೆಲ್ ಸಿಟಿ ಆಗತ್ತೆ ಎಂದರು.
ರೈತರು ಜಮೀನಿನ ಬದಲಾಗಿ ದುಡ್ಡು ತೆಗೆದುಕೊಳ್ಳಬಹುದು. ಇಲ್ಲದಿದ್ರೆ ಅಭಿವೃದ್ದಿ ಪಡಿಸಿದ ಲ್ಯಾಂಡ್ ತೆಗೆದುಕೊಳ್ಳಬಹುದು. ಎರಡು ಬಾರಿ ಕುಮಾರಸ್ವಾಮಿ ಸಿಎಂ ಆದ್ರೂ ಯಾಕೆ ರೈತರ ಭೂಮಿ ಸ್ವಾಧೀನದಿಂದ ಕೈ ಬಿಡಲಿಲ್ಲ. ಈ ಬಗ್ಗೆ ದೇವೇಗೌಡರೇ ಹೇಳಲಿ. ಇದರಲ್ಲಿ ರಾಜಕೀಯ ಬೇಡ. ಇದೆಲ್ಲ ನಿಮ್ಮ ಮಗನೆ ಮಾಡಿದ್ದು, ನಿಮ್ಮ ಕಾಲದಲ್ಲೇ ಆಗಿದ್ದು ಎಂದು ಡಿಸಿಎಂ ಡಿಕೆ ಶಿವಕುಮಾರ್ ದೇವೇಗೌಡರಿಗೆ ಟಾಂಗ್ ನೀಡಿದರು.
ಒಳಿತಾಗಲೆಂದು ಆರತಿ ಮಾಡ್ತೇವೆ: ಕಾವೇರಿ ನಮ್ಮ ಜೀವನದಿ. ತಾಯಿಯ ಆರತಿ ಮಾಡ್ಬೇಕು. ಹೀಗಾಗಿ ಕಾವೇರಿ ಆರತಿ ಮಾಡಲು ಮುಂದಾಗಿದ್ದೇವೆ. ವ್ಯವಸಾಯ, ಕುಡಿಯಲು ನೀರು ಎಲ್ಲವನ್ನೂ ತಾಯಿ ಕೊಡುತ್ತಿದ್ದಾಳೆ. ರಾಜ್ಯದ ಎಲ್ಲರಿಗೂ ಒಳಿತಾಗಲಿ ಎಂದು ಆರತಿ ಮಾಡುತ್ತೇವೆ ಎಂದು ಹೇಳಿದರು.
ದಸರಾ ಕ್ರೀಡೆಗೆ ಕಂಬಳ ಸೇರ್ಪಡೆ: ಈ ಬಾರಿ ದಸರಾದಲ್ಲಿ ಕೆಲ ಬದಲಾವಣೆ ತರಲು ಚಿಂತನೆ ಮಾಡಿದ್ದೇವೆ. ದಸರಾದಲ್ಲಿ ಕಂಬಳ ಸೇರಿಸುತ್ತೇವೆ.ಕೆಲ ಹೊಸ ಆಚರಣೆಗಳನ್ನು ಸೇರಿಸಬೇಕು. ಹಳೆಯ ಪದ್ಧತಿ ಜೊತೆಗೆ ಹೊಸ ಆಚರಣೆಗಳು ದಸರಾ ಮೆರಗನ್ನು ಹೆಚ್ಚು ಮಾಡುತ್ತವೆ. ಈ ಬಗ್ಗೆ ಅಧಿಕಾರಿಗಳ ಜೊತೆ ಚರ್ಚೆ ಮಾಡಿದ್ದೇವೆ. ಈ ಬಾರಿ ದಸರಾದಲ್ಲಿ ಅನೇಕ ಬದಲಾವಣೆ ಆಗತ್ತೆ ಎಂದು ಹೇಳಿದರು.
ಮೈಸೂರು : ಹುಣಸೂರು ವಿಭಾಗದ ಪಿರಿಯಾಪಟ್ಟಣ ವ್ಯಾಪ್ತಿಯ ಗುಳ್ಳೆದಹಳ್ಳ ರಾಜ್ಯ ಅರಣ್ಯದಿಂದ 2 ಕಿ.ಮೀ ದೂರದಲ್ಲಿರುವ ಕೊಪ್ಪ ವಿಭಾಗದಲ್ಲಿ ಗುಂಡೇಟಿನಿಂದ…
ಬೆಂಗಳೂರು : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ನಡೆಸಿದ 2025-2026ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ…
ಬೆಂಗಳೂರು : ಕರ್ನಾಟಕದಲ್ಲಿ ಪೂರ್ವ ಮುಂಗಾರು ಏಪ್ರಿಲ್ 2 ನೇ ವಾರದಿಂದ ಚುರುಕಾಗುತ್ತಿದ್ದು, ಏಪ್ರಿಲ್ 7ರಿಂದ ಮೂರು ದಿನಗಳು ರಾಜ್ಯದಲ್ಲಿ…
ವಾಷಿಂಗ್ಟನ್ : ಒಪ್ಪಂದಕ್ಕೆ ಬನ್ನಿ, ಇಲ್ಲವೇ ಶರಣಾಗಿ, ಇಲ್ಲದಿದ್ದರೆ ಮಂಗಳವಾರ ರಾತ್ರಿ 8 ಗಂಟೆಯ ನಂತರ ಮತ್ತಷ್ಟು ಮಾರಕ ದಾಳಿ…
ಮದುರೈ : ತಮಿಳುನಾಡಿನ ತೂತುಕುಡಿ ಜಿಲ್ಲೆಯ ಶಾಂತನ್‌ಕುಲಂ ಪೊಲೀಸ್ ಠಾಣೆ ಕಸ್ಟಡಿಯಿಂದಲೇ ತಂದೆ,ಮಗ ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಸೋಮವಾರ…
ಬೆಂಗಳೂರು : ಕೌಶಲ್ಯ ಕ್ಷೇತ್ರದಲ್ಲಿ ಕರ್ನಾಟಕ ಈಗ ಇಡೀ ದೇಶದಲ್ಲಿ ಮುಂಚೂಣಿಯತ್ತ ಸಾಗುತ್ತಿದೆ. ಇತ್ತೀಚೆಗೆ ಗ್ರೇಟರ್ ನೋಯ್ಡಾದ ಇಂಡಿಯಾ ಎಕ್ಸ್‌ಪೋ…