Categories: Uncategorized

ಬಿಡದಿ ಬಳಿ ಟೌನ್‌ಶಿಪ್‌ ವಿಚಾರ : ʼಎಚ್‌.ಡಿ. ದೇವೇಗೌಡʼರಿಗೆ ʼಡಿಕೆಶಿʼ ಟಾಂಗ್‌

ಮೈಸೂರು: ರಾಮನಗರ ಜಿಲ್ಲೆಯ ಬಿಡದಿ ಹೋಬಳಿಯಲ್ಲಿ ಗ್ರೇಟರ್‌ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವೂ ಟೌನ್‌ಶಿಪ್‌ ನಿರ್ಮಾಣಕ್ಕೆ ರೈತರ ಭೂಮಿ ಸ್ವಾಧೀನಪಡಿಸಿಕೊಳ್ಳುವುದನ್ನು ತೀವ್ರವಾಗಿ ವೀರೋಧಿಸಿರುವ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರಿಗೆ ಡಿಸಿಎಂ ಡಿ ಕೆ ಶಿವಕುಮಾರ್‌ ಟಾಂಗ್‌ ನೀಡಿದ್ದಾರೆ.

ಬಿಡದಿ ಟೌನ್ ಶಿಪ್ ಗೆ ರೈತರ ಭೂಮಿ ಕೈಬಿಡುವಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ದೇವೇಗೌಡರ ಪತ್ರ ವಿಚಾರವಾಗಿ ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿದ ಡಿಸಿಎಂ ಡಿಕೆ ಶಿವಕುಮಾರ್, ಕುಮಾರಸ್ವಾಮಿ ಕಾಲದಲ್ಲೇ 7 ಟೌನ್ ಶಿಪ್ ಮಾಡಬೇಕು ಅಂತ ತೀರ್ಮಾನ ಆಗಿದ್ದು, ಅದಕ್ಕಾಗಿ 300 ಕೋಟಿ ಹಣ ಕೊಟ್ಟಿದ್ರು ಟೌನ್ ಶಿಪ್ ಪ್ಲಾನ್ ಅವರ ಕಾಲದಲ್ಲೇ ಆಗಿದ್ದು, ನಾನು ಡಿನೋಟಿಫಿಕೇಶ್ ಮಾಡಲು ಹೋಗಲ್ಲ ಎಂದಿದ್ದಾರೆ.

ಈ ಹಿಂದೆ ನನ್ನ ಮೇಲೆ ಏನೆಲ್ಲಾ ಹೇಳಿದ್ರು ಅದೆಲ್ಲ ಇತಿಹಾಸ. ಟೌನ್ ಶಿಪ್ ಪಿತಾಮಹ ದೇವೇಗೌಡ ಹಾಗೂ ಕುಮಾರಸ್ವಾಮಿ ಯಾರು ಏನೇ ಹೇಳಿದ್ರು ಗ್ರೇಟರ್ ಬೆಂಗಳೂರು ಮಾಡೇ ಮಾಡುತ್ತೇವೆ. ಬೆಂಗಳೂರಿಗಿಂತ ಚೆನ್ನಾಗಿ 10 ಸಾವಿರ ಎಕರೆಯಲ್ಲಿ ಉತ್ತಮ ಸಿಟಿ ಮಾಡುತ್ತೇವೆ. ಇದು ಮಾಡೆಲ್ ಸಿಟಿ ಆಗತ್ತೆ ಎಂದರು.

ರೈತರು ಜಮೀನಿನ ಬದಲಾಗಿ ದುಡ್ಡು ತೆಗೆದುಕೊಳ್ಳಬಹುದು. ಇಲ್ಲದಿದ್ರೆ ಅಭಿವೃದ್ದಿ ಪಡಿಸಿದ ಲ್ಯಾಂಡ್ ತೆಗೆದುಕೊಳ್ಳಬಹುದು. ಎರಡು ಬಾರಿ ಕುಮಾರಸ್ವಾಮಿ ಸಿಎಂ ಆದ್ರೂ ಯಾಕೆ ರೈತರ ಭೂಮಿ ಸ್ವಾಧೀನದಿಂದ ಕೈ ಬಿಡಲಿಲ್ಲ. ಈ ಬಗ್ಗೆ ದೇವೇಗೌಡರೇ ಹೇಳಲಿ. ಇದರಲ್ಲಿ ರಾಜಕೀಯ ಬೇಡ. ಇದೆಲ್ಲ ನಿಮ್ಮ ಮಗನೆ ಮಾಡಿದ್ದು, ನಿಮ್ಮ ಕಾಲದಲ್ಲೇ ಆಗಿದ್ದು ಎಂದು ಡಿಸಿಎಂ ಡಿಕೆ ಶಿವಕುಮಾರ್‌ ದೇವೇಗೌಡರಿಗೆ ಟಾಂಗ್ ನೀಡಿದರು.

ಒಳಿತಾಗಲೆಂದು ಆರತಿ ಮಾಡ್ತೇವೆ: ಕಾವೇರಿ ನಮ್ಮ ಜೀವನದಿ. ತಾಯಿಯ ಆರತಿ ಮಾಡ್ಬೇಕು. ಹೀಗಾಗಿ ಕಾವೇರಿ ಆರತಿ ಮಾಡಲು ಮುಂದಾಗಿದ್ದೇವೆ. ವ್ಯವಸಾಯ, ಕುಡಿಯಲು ನೀರು ಎಲ್ಲವನ್ನೂ ತಾಯಿ ಕೊಡುತ್ತಿದ್ದಾಳೆ. ರಾಜ್ಯದ ಎಲ್ಲರಿಗೂ ಒಳಿತಾಗಲಿ ಎಂದು ಆರತಿ ಮಾಡುತ್ತೇವೆ ಎಂದು ಹೇಳಿದರು.

ದಸರಾ ಕ್ರೀಡೆಗೆ ಕಂಬಳ ಸೇರ್ಪಡೆ: ಈ ಬಾರಿ ದಸರಾದಲ್ಲಿ ಕೆಲ ಬದಲಾವಣೆ ತರಲು ಚಿಂತನೆ ಮಾಡಿದ್ದೇವೆ. ದಸರಾದಲ್ಲಿ ಕಂಬಳ ಸೇರಿಸುತ್ತೇವೆ.ಕೆಲ ಹೊಸ ಆಚರಣೆಗಳನ್ನು ಸೇರಿಸಬೇಕು. ಹಳೆಯ ಪದ್ಧತಿ ಜೊತೆಗೆ ಹೊಸ ಆಚರಣೆಗಳು ದಸರಾ ಮೆರಗನ್ನು ಹೆಚ್ಚು ಮಾಡುತ್ತವೆ. ಈ ಬಗ್ಗೆ ಅಧಿಕಾರಿಗಳ ಜೊತೆ ಚರ್ಚೆ ಮಾಡಿದ್ದೇವೆ. ಈ ಬಾರಿ ದಸರಾದಲ್ಲಿ ಅನೇಕ ಬದಲಾವಣೆ ಆಗತ್ತೆ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

2 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

3 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

4 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

7 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

8 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

8 hours ago