Uncategorized

ಕೇಂದ್ರ ಬಜೆಟ್-2024: ಸಮಯ, ಸೆಷನ್ ಮತ್ತಿತರ ವಿವರ

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು( ಫೆಬ್ರುವರಿ 1ರಂದು) ಬಜೆಟ್ ಮಂಡಿಸಲಿದ್ದಾರೆ. ಲೋಕಸಭೆ ಚುನಾವಣೆಗೆ ಮುನ್ನ ಮಂಡಿಸಲಿರುವ ಬಜೆಟ್‌ನ್ನು ಮಧ್ಯಂತರ ಬಜೆಟ್ ಎಂದು ಪರಿಗಣಿಸಲಾಗುತ್ತದೆ. ಅಂದರೆ ಇದು ಇಡೀ ವರ್ಷಕ್ಕೆ ಅನ್ವಯ ಆಗುವುದಿಲ್ಲ. ಚುನಾವಣೆ ಮುಗಿದು ಹೊಸ ಸರ್ಕಾರ ಬಂದು ಹೊಸ ಬಜೆಟ್ ಮಂಡನೆ ಆಗುವವರೆಗೂ ಈ ಮಧ್ಯಂತರ ಬಜೆಟ್ ಹಣಕಾಸು ಬಳಕೆಗೆ ಕೀಲಿ ಒದಗಿಸುತ್ತದೆ.

ಹಿಂದೆಲ್ಲಾ ಫೆಬ್ರುವರಿ ತಿಂಗಳ ಕೊನೆಯ ಕಾರ್ಯದಿನದಂದು ಬಜೆಟ್ ಮಂಡನೆ ಆಗುತ್ತಿತ್ತು. ಬ್ರಿಟಿಷರ ಕಾಲದಿಂದ ಬಂದ ರೂಢಿಯನ್ನೇ ಮುಂದುವರಿಸಲಾಗಿತ್ತು. ಆದರೆ, ಕೆಲ ವರ್ಷಗಳ ಹಿಂದೆ ಬಜೆಟ್ ದಿನವನ್ನು ಫೆಬ್ರುವರಿ 1ಕ್ಕೆ ನಿಗದಿ ಮಾಡಲಾಗಿದೆ. ಏಪ್ರಿಲ್​ನಿಂದ ಶುರುವಾಗುವ ಹಣಕಾಸು ವರ್ಷಕ್ಕೆ ಬಜೆಟ್ ಅಂಶಗಳನ್ನು ಅಳವಡಿಸಲು ಸಾಕಷ್ಟು ಸಮಯಾವಕಾಶ ಸಿಗುತ್ತದೆ.

ಈ ಬಾರಿಯದ್ದು ಮಧ್ಯಂತರ ಬಜೆಟ್ ಆದರೂ ಫೆಬ್ರುವರಿ ಒಂದಕ್ಕೆಯೇ ಇರುತ್ತದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಫೆಬ್ರುವರಿ 1ರಂದು ಬೆಳಗ್ಗೆ 11ಗಂಟೆಗೆ ಜಂಟಿ ಸದನದಲ್ಲಿ ಬಜೆಟ್ ಮಂಡಿಸುತ್ತಾರೆ. ಸಾಮಾನ್ಯವಾಗಿ ಬಜೆಟ್ ಭಾಷಣ ಎರಡೂವರೆಗೆ ಗಂಟೆ ಇರುತ್ತದೆ.

ಬಜೆಟ್ ಸಂಬಂಧಿತ ಪ್ರಮುಖ ಅಂಶಗಳು

ಜ. 24: ಹಲ್ವಾ ಕಾರ್ಯಕ್ರಮ
ಜ. 29: ಆರ್ಥಿಕ ಸಮೀಕ್ಷಾ ವರದಿ ಬದಲು ಆರ್ಥಿಕ ಪರಾಮರ್ಶೆ ವರದಿ
ಜ. 30: ಕೇಂದ್ರ ಸರ್ಕಾರದಿಂದ ಸರ್ವಪಕ್ಷ ಸಭೆ
ಜ. 31: ಬಜೆಟ್ ಸೆಷನ್ ಆರಂಭ, ರಾಷ್ಟ್ರಪತಿಗಳಿಂದ ಜಂಟಿ ಸದನವನ್ನು ಉದ್ದೇಶಿಸಿ ಭಾಷಣ
ಫೆ. 1: ಬೆಳಗ್ಗೆ 11 ಗಂಟೆಗೆ ನಿರ್ಮಲಾ ಸೀತಾರಾಮ್ ಅವರಿಂದ ಮಧ್ಯಂತರ ಬಜೆಟ್ ಮಂಡನೆ ಆರಂಭ
ಫೆ. 9: ಬಜೆಟ್ ಸೆಷನ್ ಮುಕ್ತಾಯ

ನಿರ್ಮಲಾ ಸೀತಾರಾಮನ್ ಬಜೆಟ್ ದಾಖಲೆ:

ನಿರ್ಮಲಾ ಸೀತಾರಾಮನ್ ಬಜೆಟ್ ಮಂಡಿಸಿದ ಎರಡನೇ ಮಹಿಳೆಯಾಗಿದ್ದಾರೆ. ಇಂದಿರಾ ಗಾಂಧಿ ಈ ಹಿಂದೆ ಬಜೆಟ್ ಮಂಡಿಸಿದ್ದರು.

ನಿರ್ಮಲಾ ಸೀತಾರಾಮನ್ ಈವರೆಗೆ ಐದು ಬಾರಿ ಬಜೆಟ್ ಮಂಡಿಸಿದ್ದಾರೆ. ಫೆ. 1ರಂದು ಅವರೇ ಮಾಡಿದರೆ ಆರನೇ ಬಜೆಟ್ ಮಂಡಿಸಿದ ದಾಖಲೆ ಬರೆಯಲಿದ್ದಾರೆ.

ಮೊರಾರ್ಜಿ ದೇಸಾಯಿ ಮಾತ್ರವೇ ಸತತ ಆರು ಬಜೆಟ್ ಮಂಡಿಸಿರುವುದು. ಐದು ಪೂರ್ಣ ಬಜೆಟ್ ಮತ್ತು ಒಂದು ಮಧ್ಯಂತರ ಬಜೆಟ್ ಮಂಡಿಸಿದ್ದರು ಮೊರಾರ್ಜಿ. ಒಟ್ಟು ಅವರು 10 ಬಜೆಟ್ ಮಂಡನೆ ಮಾಡಿದ್ದರು.

ಯಶವಂತ್ ಸಿನ್ಹಾ, ಅರುಣ್ ಜೇಟ್ಲಿ, ಮನಮೋಹನ್ ಸಿಂಗ್, ಪಿ ಚಿದಂಬರಂ ಅವರು ಸತತವಾಗಿ ಐದು ಬಾರಿ ಬಜೆಟ್ ಮಂಡಿಸಿದ್ದರು. ನಿರ್ಮಲಾ ಸೀತಾರಾಮನ್ ಈ ದಾಖಲೆ ಸರಿಗಟ್ಟಿದ್ದಾರೆ.

andolanait

Recent Posts

ಅಂಗನವಾಡಿಗಳಿಗೆ ೬ ತಿಂಗಳಿಂದ ಬಾರದ ಮೊಟ್ಟೆ ಹಣ!

ಚಾಮರಾಜನಗರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ತಾಲ್ಲೂಕಿನ ಅಂಗನವಾಡಿ ಕೇಂದ್ರಗಳಿಗೆ ಕೋಳಿಮೊಟ್ಟೆ ವಿತರಣೆಗಾಗಿ ನೀಡಲಾಗುವ ಅನುದಾನ ಕಳೆದ ೬ತಿಂಗಳಿಂದ…

2 hours ago

‘ತ್ಯಾಜ್ಯ ಸಂಸ್ಕರಣೆ, ವಿಲೇವಾರಿಗೆ ಕ್ರಮಕೈಗೊಳ್ಳಬೇಕು’

ಗುತ್ತಲು ಕೆರೆ, ಕಾಳೇನಹಳ್ಳಿ ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಜಿಲ್ಲಾಧಿಕಾರಿ ಡಾ.ಕುಮಾರ ಭೇಟಿ ಮಂಡ್ಯ: ನಗರದ ಗುತ್ತಲು ಕೆರೆಗೆ ತ್ಯಾಜ್ಯ…

2 hours ago

ಕೇಂದ್ರೀಯ ಬಸ್ ನಿಲ್ದಾಣದಲ್ಲಿ ಕುಡಿಯುವ ನೀರಿಗೆ ಪರದಾಟ

ಪ್ರಶಾಂತ್ ಎಸ್. ಆರು ತಿಂಗಳಿನಿಂದ ಶುದ್ಧ ಕುಡಿಯುವ ನೀರಿನ ಘಟಕ ಸ್ಥಗಿತ ನೀರಿನ ಘಟಕ ನಿರ್ವಹಣೆ ಮಾಡುವಲ್ಲಿ ಕೆಎಸ್‌ಆರ್‌ಟಿಸಿ ವಿಫಲ…

2 hours ago

ವರ್ಷಾಂತ್ಯ: ಗರಿಗೆದರದ ಮೈಸೂರು ಪ್ರವಾಸೋದ್ಯಮ

ಗಿರೀಶ್ ಹುಣಸೂರು ಹೊಸ ವರ್ಷಾಚರಣೆ, ಕ್ರಿಸ್‌ಮಸ್ ರಜೆ ನಿರೀಕ್ಷೆಯಲ್ಲಿ ವ್ಯಾಪಾರಸ್ಥರು, ಉದ್ಯಮಿಗಳು ಮೈಸೂರು: ೨೦೨೫ನೇ ವರ್ಷಕ್ಕೆ ವಿದಾಯ ಹೇಳಿ, ೨೦೨೬ರ…

2 hours ago

ಮಂಡ್ಯ | ಕೊಬ್ಬರಿ ಶೆಡ್‌ಗೆ ಬೆಂಕಿ : ಲಕ್ಷಾಂತರ ರೂ.ಮೌಲ್ಯದ ಕೊಬ್ಬರಿ ನಾಶ

ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…

11 hours ago