Mysore
22
mist

Social Media

ಶುಕ್ರವಾರ, 20 ಡಿಸೆಂಬರ್ 2024
Light
Dark

ನಕ್ಸಲ್‌ ಚಟುವಟಿಕೆ ನಿಗ್ರಹಿಸಲು ವಿಕ್ರಂ ಗೌಡನನ್ನು ಎನ್‌ಕೌಂಟರ್ ಮಾಡಲಾಗಿದೆ:‌ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ನಕ್ಸಲ್‌ ಚಟುವಟಿಕೆ ನಿಗ್ರಹಿಸಲು ವಿಕ್ರಂ ಗೌಡನನ್ನು ಎನ್‌ಕೌಂಟರ್‌ ಮಾಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.

ವಿಕ್ರಂಗೌಡ ಹತನಾಗಿರುವ ಬಗ್ಗೆ ಪ್ರಗತಿಪರ ಚಿಂತಕರು ಅನುಮಾನ ವ್ಯಕ್ತಪಡಿಸುತ್ತಿರುವ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ವಿಕ್ರಂಗೌಡನಿಗೆ ಶರಣಾಗುವಂತೆ ಆದೇಶ ನೀಡಲಾಗಿತ್ತು. ಆದರೆ ಅವನು ಶರಣಾಗಲಿಲ್ಲ. ವಿಕ್ರಂಗೌಡನನ್ನು ಹಿಡಿದವರಿಗೆ ಕೇರಳ ಸರ್ಕಾರ 25 ಲಕ್ಷ ಹಾಗೂ ಕರ್ನಾಟಕ ಸರ್ಕಾರ 5 ಲಕ್ಷ ಬಹುಮಾನವನ್ನು ಘೋಷಣೆ ಮಾಡಿತ್ತು. ಆದರೂ ವಿಕ್ರಂಗೌಡ ಯಾರ ಕೈಗೂ ಸಿಗದೇ ನಕ್ಸಲ್‌ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದ. ಆದ್ದರಿಂದ ಆತನನ್ನು ಎನ್‌ಕೌಂಟರ್‌ ಮಾಡಲಾಗಿದೆ ಎಂದು ಸ್ಪಷ್ಟಪಡಿಸಿದರು.

 

 

Tags: