Mysore
23
overcast clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

WPL-2024 finals: ಟಾಸ್‌ ಗೆದ್ದು ಬ್ಯಾಟಿಂಗ್‌ ಆಯ್ದುಕೊಂಡ ಡೆಲ್ಲಿ!

ನವದೆಹಲಿ: ಇಲ್ಲಿನ ಅರುಣ್‌ ಜೆಟ್ಲಿ ಕ್ರೀಡಾಂಗಣದಲ್ಲಿ ನಡೆಯಲಿರುವ ಡಬ್ಲ್ಯೂಪಿಎಲ್‌ ಸೀಸನ್‌ 2ರ ಫೈನಲ್‌ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ ಮತ್ತು ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡಗಳು ಮುಖಾಮುಖಿಯಾಗಿದ್ದು, ಫೈನಲ್‌ ಪಂದ್ಯದಲ್ಲಿ ಟಾಸ್‌ ಗೆದ್ದ ಡೆಲ್ಲಿ ತಂಡ ಬ್ಯಾಟಿಂಗ್‌ ಆಯ್ದುಕೊಂಡಿದೆ.

ಈ ಕ್ರೀಡಾಂಗಣದಲ್ಲಿ ಈವರೆಗೆ 10 ಪಂದ್ಯಗಳು ನಡೆದಿದ್ದು, 9 ಬಾರಿ ಟಾಸ್‌ ಗೆದ್ದ ತಂಡ ಮೊದಲು ಬ್ಯಾಟ್‌ ಮಾಡಿದೆ.

ಆರ್‌ಸಿಬಿ ಎರಡು ಸೀಸನ್‌ಗಳಲ್ಲಿ ಈವರೆಗೆ ಒಂದೇ ಒಂದು ಪಂದ್ಯವನ್ನು ಡೆಲ್ಲಿ ಕ್ಯಾಪಿಟಲ್ಸ್‌ ವಿರುದ್ಧ ಗೆದ್ದಿಲ್ಲ. ಇಂದು ಗೆದ್ದು ಟ್ರೋಫಿಯೊಂದಿಗೆ ಸೋಲಿಗೂ ವಿದಾಯ ಹೇಳಲಿದೆಯೇ ಎಂಬುದನ್ನು ಕಾದುನೋಡಬೇಕಿದೆ.

ಇತ್ತಂಡಗಳ ಪ್ಲೇಯಿಂಗ್‌ ಇಲೆವೆನ್‌:

ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಹಿಳೆಯರು (ಪ್ಲೇಯಿಂಗ್ XI): ಸ್ಮೃತಿ ಮಂಧಾನ (ನಾಯಕಿ), ಸೋಫಿ ಡಿವೈನ್, ಸಬ್ಬಿನೇನಿ ಮೇಘನಾ, ಎಲ್ಲಿಸ್ ಪೆರ್ರಿ, ರಿಚಾ ಘೋಷ್, ಸೋಫಿ ಮೊಲಿನೆಕ್ಸ್, ಜಾರ್ಜಿಯಾ ವೇರ್ಹ್ಯಾಮ್, ಶ್ರೇಯಾಂಕಾ ಪಾಟೀಲ್, ಆಶಾ ಸೋಭಾನಾ, ಶ್ರದ್ಧಾ ಪೋಖರ್ಕರ್, ರೇಣುಕಾ ಠಾಖರ್ಕರ್, ರೇಣುಕಾ.

ಡೆಲ್ಲಿ ಕ್ಯಾಪಿಟಲ್ಸ್ ಮಹಿಳೆಯರು (ಪ್ಲೇಯಿಂಗ್ XI): ಮೆಗ್ ಲ್ಯಾನಿಂಗ್ (ನಾಯಕಿ), ಶಫಾಲಿ ವರ್ಮಾ, ಆಲಿಸ್ ಕ್ಯಾಪ್ಸಿ, ಜೆಮಿಮಾ ರಾಡ್ರಿಗಸ್, ಮರಿಜಾನ್ನೆ ಕಪ್, ಜೆಸ್ ಜೊನಾಸೆನ್, ರಾಧಾ ಯಾದವ್, ಅರುಂಧತಿ ರೆಡ್ಡಿ, ತಾನಿಯಾ ಭಾಟಿಯಾ, ಶಿಖಾ ಪಾಂಡೆ, ಮಿನ್ನು ಮಣಿ

Tags: