ಕೇಂದ್ರ ಮಾಜಿ ಸಚಿವ, ಕಾಂಗ್ರೆಸ್‌ ಹಿರಿಯ ನಾಯಕ ಆಸ್ಕರ್‌ ಫರ್ನಾಂಡಿಸ್‌ ನಿಧನ

ಮಂಗಳೂರು: ಕೇಂದ್ರದ ಸಚಿವ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಆಸ್ಕರ್ ಫರ್ನಾಂಡಿಸ್ (80) ಸೋಮವಾರ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಕಳೆದ ಭಾನುವಾರ ಮನೆಯಲ್ಲಿ ಜಾರಿ ಬಿದ್ದು ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ತೀವ್ರವಾಗಿ ಪೆಟ್ಟಾಗಿದ್ದರಿಂದ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಫಲಿಸದೇ ನಿಧನರಾಗಿದ್ದಾರೆ.

ಆಸ್ಕರ್ ಫರ್ನಾಂಡಿಸ್ ಯುಪಿಎ ಸರ್ಕಾರದ ಆಡಳಿತದ ಅವಧಿಯಲ್ಲಿ ಕೇಂದ್ರ ಮಂತ್ರಿಯಾಗಿದ್ದರು. ರಸ್ತೆ, ಸಾರಿಗೆ, ಹೆದ್ದಾರಿ ಮತ್ತು ಕಾರ್ಮಿಕ ಸಚಿವರಾಗಿಯೂ ಕೆಲಸ ಮಾಡಿದ್ದರು. ರಾಜೀವ್ ಗಾಂಧಿ ಜೊತೆಗೆ ಸಂಸತ್ ಕಾರ್ಯದರ್ಶಿಯಾಗಿಯೂ ಕಾರ್ಯನಿರ್ವಹಿಸಿದ್ದರು. 1980ರಿಂದ 1996ರ ವರೆಗೆ ಕರ್ನಾಟಕದ ಉಡುಪಿ ಕ್ಷೇತ್ರದಿಂದ ಲೋಕಸಭಾ ಸದಸ್ಯರಾಗಿ ಆಯ್ಕೆ ಆಗಿದ್ದರು. 1998ರಲ್ಲಿ ಹಾಗೂ 2004ರಲ್ಲಿ ರಾಜ್ಯಸಭೆಗೂ ಆಯ್ಕೆ ಆಗಿದ್ದರು.

× Chat with us