ಹಿಂದಿ ಹೇರಿಕೆ ವಿರೋಧಿಸಿ ವಾಟಾಳ್ ಪ್ರತಿಭಟನೆ

ಮೈಸೂರು: ಹಿಂದಿ ಹೇರಿಕೆ ವಿರೋಧಿಸಿ. ಬ್ಯಾಂಕುಗಳು ಕನ್ನಡೀಕರಣ ಆಗಬೇಕು, ಕನ್ನಡಿಗರಿಗೆ ಉದ್ಯೋಗ ದೊರಕಬೇಕು ಎಂದು ಒತ್ತಾಯಿಸಿ ಕನ್ನಡ ಚಳವಳಿ ವಾಟಾಳ್ ಪಕ್ಷದ ವತಿಯಿಂದ ಅಧ್ಯಕ್ಷ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಆರ್.ಗೇಟ್ ವೃತ್ತದ ಬಳಿ ಪ್ರತಿಭಟನೆ ನಡೆಸಲಾಯಿತು.

ಈ ವೇಳೆ ಮಾತನಾಡಿದ ಅವರು, ಕರ್ನಾಟಕದಲ್ಲಿ ಕನ್ನಡ ಭಾಷೆಗೆ ಅಪಾಯ ಇದೆ ಎಂದು ಎಚ್ಚರಿಕೆ ಕೊಡುತ್ತಿದ್ದೇನೆ. ರಾಜ್ಯದಲ್ಲಿ ಕನ್ನಡ ಭಾಷೆ ಮಾಯವಾಗುತ್ತಿದೆ. ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ಕನ್ನಡ ಪತ್ರಿಕೆಯೂ ನಾಶವಾಗುತ್ತದೆ. ನಗರ ಪ್ರದೇಶಗಳಲ್ಲಿ ಕನ್ನಡ ಉಳಿದಿಲ್ಲ.
ಬ್ಯಾಂಕುಗಳಲ್ಲಿ ಠೇವಣಿ ಹಣ ಕನ್ನಡಿಗರದ್ದು. ಆದರೆ ಬ್ಯಾಂಕ್ ಸಿಬ್ಬಂದಿ ಹೊರಗಿನವರು. ಚೆಕ್ ವ್ಯವಹಾರ ಕನ್ನಡದಲ್ಲಿ ನಡೆಯಬೇಕು. ಎರಡರಿಂದ ಮೂರು ಲಕ್ಷ ಸರ್ಕಾರಿ ಜಮೀನು, ರೈತರ ಜಮೀನು ಹಾಗೂ ಗೋಮಾಳಗಳನ್ನು ಒತ್ತುವರಿ ಮಾಡಲಾಗಿದೆ. ಆದರೆ ಅಲ್ಲಿ ಸ್ಥಾಪಿಸಿದ ಕಾರ್ಖಾನೆಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಇಲ್ಲ. ಕರ್ನಾಟಕದಲ್ಲಿ ಕನ್ಮಡಿಗರ ಪರಿಸ್ಥಿತಿ ಹೀನಾಯವಾಗಿದೆ. ಗಡಿ ಜಿಲ್ಲೆಗಳಾದ ಕಾಸರಗೋಡು, ತಾಳವಾಡಿ, ಬೆಳಗಾವಿಯಲ್ಲಿ ಕನ್ನಡಿಗರಿಗೆ ಅನ್ಯಾಯವಾಗುತ್ತಿದೆ. ಬೆಳಗಾವಿಯಲ್ಲಿ ಮರಾಠಿಗರಿಂದ ಕನ್ನಡಿಗರ ಮೇಲೆ ಮರಾಠ ಏಕೀಕರಣ ಸಮಿತಿಯಿಂದ ದಬ್ಬಾಳಿಕೆ ನಡೆಯುತ್ತಿದೆ ಎಂದು ಆರೋಪಿಸಿದರು.

× Chat with us