ಧಾರವಾಡ : : ಜಿ.ಪಂ. ಸಭಾಂಗಣದಲ್ಲಿ ಇಂದು ನಡೆದ ಕೇಂದ್ರ ಸರ್ಕಾರದ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಹಿಳಾ ಐಎಎಸ್ ಅಧಿಕಾರಿ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ
ಧಾರವಾಡ ಜಿ.ಪಂ. ಸಭಾಂಗಣದಲ್ಲಿ ಇಂದು ನಡೆದ ಕೇಂದ್ರ ಸರ್ಕಾರದ ಯೋಜನೆಗಳ ಪ್ರಗತಿ ಪರಿಶೀಲನಾ ದಿಶಾ ಸಭೆಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಮಹಿಳಾ ಐಎಎಸ್ ಅಧಿಕಾರಿ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹುಬ್ಬಳ್ಳಿ-ಧಾರವಾಡ ಬಿ.ಆರ್.ಟಿ.ಎಸ್ ಕಾರಿಡಾರ್‌ನಲ್ಲಿ ಮೇಲ್ಸೇತುವೆ ನಿರ್ಮಾಣವಾಗುತ್ತಿದೆ. ಸದ್ಯ ಕಾಮಗಾರಿ ನಿಂತಿದೆ. ಕಾಮಗಾರಿಗೆ ಹುಬ್ಬಳ್ಳಿ-ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಅಪರ ಮುಖ್ಯ ಕಾರ್ಯದರ್ಶಿ (ಎಸಿಎಸ್) ವಿ ಮಂಜುಲಾ ಅಡ್ಡಿಪಡಿಸುತ್ತಿದ್ದಾರೆಂದು ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು ಸಚಿವ ಪ್ರಲ್ಹಾದ ಜೋಶಿ ಅವರ ಮುಂದೆ ಪ್ರಸ್ತಾಪಿಸದರು. ಆಗ ಅಪರ ಮುಖ್ಯ ಕಾರ್ಯದರ್ಶಿ ವಿ ಮಂಜುಲಾ ವಿರುದ್ಧ ಜೋಶಿ ಗರಂ ಆದರು.