ಚಾಮರಾಜನಗರ: ಭಾರತ ಸರ್ಕಾರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವಾಲಯದ ವತಿಯಿಂದ 2022-23ನೇ ಸಾಲಿನಲ್ಲಿ ದೇಶದಲ್ಲಿ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಮಹಿಳೆಯರನ್ನು ಗುರುತಿಸಿ ಪ್ರೋತ್ಸಾಹಿಸಲು ಪ್ರತಿ ವರ್ಷವೂ ನಾರಿಶಕ್ತಿ ಪುರಸ್ಕಾರ ಎಂಬ ರಾಷ್ಟ್ರೀಯ ಪ್ರಶಸ್ತಿಯನ್ನು ನೀಡುತ್ತಿದ್ದು, ಅಸಕ್ತ ಮಹಿಳೆಯರಿಂದ ಪ್ರಶಸ್ತಿಗಾಗಿ ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ.
ಈ ಸಂಬಂಧ ಮಾರ್ಚ್ ೮ರಂದು ನಡೆಯಲಿರುವ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯಂದು ನಾರಿ ಶಕ್ತಿ ಪ್ರಶಸ್ತಿಯನ್ನು ನೀಡಲಾಗುವುದು. ಪುರಸ್ಕಾರಕ್ಕಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವಾಲಯದ ವೆಬ್‌ಸೈಟ್‌ನಲ್ಲಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶವಿದೆ. ಅರ್ಜಿ ಸಲ್ಲಿಸಲು ಅಕ್ಟೋಬರ್ 31 ಕಡೆಯ ದಿನವಾಗಿದೆ ಎಂದು ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಉಪನಿರ್ದೇಶಕ ಹೆಚ್.ಕೆ. ಪಾಂಡು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.