ಕಾಪು (ಪಡುಬಿದ್ರಿ): ಫೆಮಿನಾ ಮಿಸ್ ಇಂಡಿಯಾ 2022ರ ವಿಜೇತೆ ಸಿನಿ ಶೆಟ್ಟಿ ಅವರು ಕಾಪು ಹೊಸ ಮಾರಿಗುಡಿ ದೇವಸ್ಥಾನಕ್ಕೆ ಕುಟುಂಬದವರೊಂದಿಗೆ ಭೇಟಿ ನೀಡಿ ದೇವರ ದರ್ಶನವನ್ನು ಪಡೆದರು.
‘ಹೊಸ ಮಾರಿಗುಡಿ ದೇಗುಲ ಜೀರ್ಣೋದ್ಧಾರಗೊಳ್ಳುತ್ತಿದ್ದು, ತಮ್ಮ ಕುಟುಂಬದ ವತಿಯಿಂದ 99 ಶಿಲಾ ಸೇವೆ ನೀಡುತ್ತಿದ್ದೇವೆ. ಭಕ್ತರು ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ಕೆ ಕೈಜೋಡಿಸಬೇಕು ಎಂದು ಅವರು ಮನವಿ ಮಾಡಿದರು.
ಸಿನಿ ಶೆಟ್ಟಿ ತಂದೆ ಸದಾನಂದ ಶೆಟ್ಟಿ, ದೇವಸ್ಥಾನ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಕೆ.ವಾಸುದೇವ ಶೆಟ್ಟಿ, ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ರಮೇಶ್ ಹೆಗ್ಡೆ ಕಲ್ಯ, ಕಾಪು ದಿವಾಕರ ಶೆಟ್ಟಿ, ಮನೋಹರ ಶೆಟ್ಟಿ, ಗಂಗಾಧರ ಸುವರ್ಣ, ಯೋಗೀಶ್ ಶೆಟ್ಟಿ, ನಡಿಕೆರೆ ರತ್ನಾಕರ ಶೆಟ್ಟಿ, ಬಾಲಕೃಷ್ಣ ಶೆಟ್ಟಿ ದೊರಕಳಗುತ್ತು, ರವಿರಾಜ ಶೆಟ್ಟಿ ಪಂಜಿತ್ತೂರುಗುತ್ತು, ರತ್ನಾಕರ ಹೆಗ್ಡೆ ಕಲೀಲಬೀಡು, ರಮೇಶ್ ಶೆಟ್ಟಿ ಕೊಲ್ಯ, ಲೀಲಾಧರ ಶೆಟ್ಟಿ, ನಿರ್ಮಲ್ ಕುಮಾರ್ ಹೆಗ್ಡೆ, ಜಗದೀಶ್ ಬಂಗೇರ, ಶಿಲ್ಪಾ ಜಿ. ಸುವರ್ಣ, ಗೌರವ್ ಶೇಣವ ಈ ಸಂದರ್ಭದಲ್ಲಿ ಇದ್ದರು.