ಮಹಿಳೆ

ಮಹಿಳೆಯರ ದಸರೆಯಲ್ಲಿ ಮಹಿಳಾ ಉದ್ಯಮಿಗಳ ಕಲರವ

ಮೈಸೂರು: ನಗರದ ಜೆಕೆ ಮೈದಾನದಲ್ಲಿ ಮಂಗಳವಾರದಿಂದ ಆರಂಭವಾದ ಮಹಿಳಾ ದಸರೆಯಲ್ಲಿ ನೂರಾರು ಮಹಿಳಾ ಉದ್ಯಮಿಗಳು ತಮ್ಮ ಉತ್ಪನ್ನಗಳ ಪ್ರದರ್ಶನದೊಂದಿಗೆ ಮಾರಾಟಕ್ಕೆ ಅಣಿಯಾಗಿದ್ದಾರೆ. ಮಹಿಳಾ ದಸರೆಗೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು, ಐದು ದಿನ ಹಮ್ಮಿಕೊಳ್ಳಲಾಗಿರುವ ಈ ಕಾರ್ಯಕ್ರಮದಲ್ಲಿ ಮಹಿಳೆಯರಿಗೆ, ಮಂಗಳಮುಖಿಯರಿಗೆ, ವಿಶೇಷಚೇತನರಿಗೆ ಮತ್ತು ಹಿರಿಯ ನಾಗರಿಕರಿಗೆ ಅವಕಾಶ ಕಲ್ಪಿಸಲಾಗಿದೆ. ಸ್ತ್ರೀ ಸಬಲೀಕರಣಕ್ಕಾಗಿ ನಮ್ಮ ಸರ್ಕಾರ ಮಹಿಳಾ ಸ್ವಸಹಾಯ ಸಂಘಕ್ಕೆ ಶೂನ್ಯ ಬಡ್ಡಿ ದರದಲ್ಲಿ ಸಾಲ ನೀಡಲಾಗುತ್ತಿದೆ ಎಂದರು.
ಜಾನಪದ ಕಲಾ ಪ್ರದರ್ಶನದೊಂದಿಗೆ ಮೇಳಕ್ಕೆ ಅದ್ದೂರಿ ಆರಂಭ ನೀಡಲಾಯಿತು. ಮೇಳದಲ್ಲಿ ತಿಂಡಿ ತಿನಿಸು, ಬಟ್ಟೆಬರೆಯಿಂದ ಹಿಡಿದು ನಾನಾ ಉತ್ಪನ್ನಗಳ ಪ್ರದರ್ಶನ ಇದ್ದು, ನಾನಾ ಸ್ಪರ್ಧೆಗಳಿಗೂ ಅವಕಾಶ ನೀಡಲಾಗಿದೆ.
ಶಾಸಕ ಎಲ್.ನಾಗೇಂದ್ರ ಮಾತನಾಡಿದರು. ಮೇಯರ್ ಶಿವಕುಮಾರ್, ಉಪ ಮೇಯರ್ ರೂಪಾ, ಜಿಪಂ ಉಪ ಕಾರ್ಯದರ್ಶಿ ಪ್ರೇಮಕುಮಾರ್, ನಗರ ಪಾಲಿಕೆ ಸದಸ್ಯರಾದ ಪ್ರಮಿಳಾ ಭರತ್, ಸಮಿತಿಯ ಅಧ್ಯಕ್ಷರಾದ ಸುನಾಂದ ರಾಜ್, ಹೇಮ ನಂದೀಶ್, ತನುಜಾ ಮಹೇಶ್ ಇತರರು ಇದ್ದರು.

ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಅತಿಥಿಗಳನ್ನು ಜಾನಪದ ಕಲಾ ತಂಡಗಳ ಮೂಲಕ ಸ್ವಾಗತಿಸಲಾಯಿತು. ೪೫ ಮಾರಾಟ ಮತ್ತು ಪ್ರದರ್ಶನ ಮಳಿಗೆಗಳಿಗೆ ಇಲ್ಲಿ ಅವಕಾಶ ಮಾಡಿಕೊಡಲಾಗಿತ್ತು. ಟೇಪ್ ಕತ್ತರಿಸುವ ಮೂಲಕ ಎಸ್.ಟಿ.ಸೋಮಶೇಖರ್ ವಸ್ತುಗಳ ಮಾರಾಟಕ್ಕೆ ಚಾಲನೆ ನೀಡಿದರು.

andolanait

Recent Posts

ಎಚ್.ಡಿ.ಕೋಟೆಯಲ್ಲಿ ಮತ್ತೆ ಶುರುವಾಯ್ತು ಹುಲಿ ಉಪಟಳ

ಎಚ್.ಡಿ.ಕೋಟೆ : ತಾಲೂಕಿನ ಚೌಡಹಳ್ಳಿ ಗ್ರಾಮದ ಪಕ್ಕದಲ್ಲೇ ಇರುವ ಜಮೀನೊಂದರಲ್ಲಿ ಹಸುವಿನ ಮೇಲೆ ದಾಳಿ ನಡೆಸಿರುವ ಹುಲಿ ಹಸುವನ್ನು ಕೊಂದು…

1 hour ago

ಇನ್ಸ್ಟಾಗ್ರಾಮ್ ಪರಿಚಯ : ಪೊಲೀಸಪ್ಪನ ಜತೆ ಮೈಸೂರು ಮೂಲದ ಗೃಹಿಣಿ ಎಸ್ಕೇಪ್

ಮೈಸೂರು : ಮೈಸೂರು ಮೂಲದ ಗೃಹಿಣಿಯೊಬ್ಬಳು ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಉತ್ತರ ಕರ್ನಾಟಕ ಮೂಲದ ಪೊಲೀಸ್ ಕಾನ್ಸ್ ಟೇಬಲ್ ನೊಂದಿಗೆ…

1 hour ago

ಮೈಸೂರಲ್ಲಿ ಸಂಭ್ರಮದ ಹನುಮೋತ್ಸವ ; ಮೆರವಣಿಗೆಯಲ್ಲಿ ಸಾಗಿದ ಅತ್ಯಾಕರ್ಷಕ ಹನುಮಮೂರ್ತಿಗಳು

ಮೈಸೂರು : ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ಹನುಮ ಜಯಂತ್ಯೋತ್ಸವ ಸಮಿತಿ ವತಿಯಿಂದ ಶನಿವಾರ ನಡೆದ ಏಳನೇ ವರ್ಷದ ಹನುಮೋತ್ಸವ ಮೆರವಣಿಗೆಯು…

2 hours ago

ಫೇಸ್‌ಬುಕ್‌ ಕಹಾನಿ | ಪ್ರೀತಿ ಹರಸಿ ಬಂದವನಿಗೆ ಹನಿಟ್ರ್ಯಾಪ್‌ ಗಾಳದ ಶಂಕೆ ; ಹಣಕ್ಕೆ ಡಿಮ್ಯಾಂಡ್‌….

ಮನೆಯಲ್ಲಿ ರಾತ್ರಿಯಿಡೀ ಕೂಡಿಹಾಕಿ ಹಲ್ಲೆ ನಡೆಸಿದ ಮೂವರು ಆರೋಪಿಗಳು; ಹನಿಟ್ರ್ಯಾಪ್ ಶಂಕೆ, ತನಿಖೆ ಚುರುಕು ಮಡಿಕೇರಿ : ಸಾಮಾಜಿಕ ಜಾಲತಾಣದಲ್ಲಿ…

3 hours ago

ಯುನಿಟಿ ಮಾಲ್‌ ನಿರ್ಮಾಣಕ್ಕೆ ವಿರೋಧ ಇಲ್ಲ : ಸಂಸದ ಯದುವೀರ್‌

ಮೈಸೂರು : ನಗರದಲ್ಲಿ ಯುನಿಟಿ ಮಾಲ್ ನಿರ್ಮಿಸಲು ನಮ್ಮ ವಿರೋಧ ಇಲ್ಲ. ಆದರೆ, ಸರ್ಕಾರ ಗೊಂದಲವಿಲ್ಲದ ಸ್ಥಳ ನೀಡದೆ ದಿಕ್ಕು…

3 hours ago

ಮೈಸೂರಲ್ಲಿ ಎರಡು ದಿನ ಮಾಗಿ ಸಂಭ್ರಮ : ಅವರೆಕಾಯಿ ಸೊಗಡು ಜೋರು…

ಮೈಸೂರು : ಚುಮು ಚುಮು ಚಳಿಯ ನಡುವೆ ನಗರದ ನಂಜರಾಜ ಬಹದ್ದೂರ್ ಛತ್ರದಲ್ಲಿ ಗ್ರಾಹಕರ ಆಕರ್ಷಿಸುವ ಹಾಗೂ ಗ್ರಾಮೀಣ ಸೊಗಡಿನ…

3 hours ago