ಬೆಂಗಳೂರು: ‘ಇದೇ 16ರಂದು ಅರಮನೆ ಮೈದಾನದಲ್ಲಿ ಪಕ್ಷದಿಂದ ‘ನಾ ನಾಯಕಿ’ ಸಮಾವೇಶ ನಡೆಯಲಿದ್ದು, ಕಾರ್ಯಕ್ರಮವನ್ನು ಪ್ರಿಯಾಂಕಾ ಗಾಂಧಿ ಉದ್ಘಾಟಿಸಲಿದ್ದಾರೆ’ ಎಂದು ಕಾಂಗ್ರೆಸ್ ನಾಯಕಿ ಉಮಾಶ್ರೀ ಹೇಳಿದರು.
ಕೆಪಿಸಿಸಿ ಮಹಿಳಾ ಕಾಂಗ್ರೆಸ್ ಘಟಕದ ಅಧ್ಯಕ್ಷೆ ಪುಷ್ಪಾ ಅಮರನಾಥ್, ಶಾಸಕಿ ಸೌಮ್ಯಾರೆಡ್ಡಿ, ರಾಣಿ ಸತೀಶ್ ಜೊತೆ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಬೆಳಿಗ್ಗೆ 11 ಗಂಟೆಗೆ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಸುಮಾರು ಒಂದು ಲಕ್ಷ ಮಹಿಳೆಯರು ಭಾಗವಹಿಸಲಿದ್ದಾರೆ’ ಎಂದರು.
‘ಮುಂದಿನ ವಿಧಾನಸಭಾ ಚುನಾ ವಣೆಯಲ್ಲಿ ಟಿಕೆಟ್ ಬಯಸಿ 109 ಮಹಿಳೆಯರು ಅರ್ಜಿ ಸಲ್ಲಿಸಿದ್ದಾರೆ. ಮಹಿಳೆಯರಿಗೆ ಹೆಚ್ಚು ಅವಕಾಶ ನೀಡುವಂತೆ ಪ್ರಿಯಾಂಕಾ ಗಾಂಧಿಗೆ ನಾವೆಲ್ಲರೂ ಒಕ್ಕೊರಲಿನಿಂದ ಒತ್ತಾಯಿಸುತ್ತೇವೆ’ ಎಂದು ಹೇಳಿದರು.
ಪುಷ್ಪಾ ಅಮರನಾಥ್ ಮಾತನಾಡಿ, ‘ಮಹಿಳೆಯರಿಗೆ ರಾಜಕೀಯ ಮೀಸ ಲಾತಿ ಜಾರಿಗೆ ತರಬೇಕು. 74 ಕ್ಷೇತ್ರಗಳಲ್ಲಿ ಟಿಕೆಟ್ ಬಯಸಿ ಮಹಿಳೆಯರು ಅರ್ಜಿ ಸಲ್ಲಿಸಿದ್ದಾರೆ. 30 ಕ್ಷೇತ್ರಗಳಲ್ಲಿ ಟಿಕೆಟ್ ಗೆ ಬೇಡಿಕೆ ಇಟ್ಟಿದ್ದೇವೆ’ ಎಂದರು.
ಬೆಂಗಳೂರು : ಹಾಲಿನ ದರ ಏರಿಕೆ ಕುರಿತು ರಾಜ್ಯದಲ್ಲಿ ಚರ್ಚೆ ತೀವ್ರಗೊಂಡಿರುವ ಬೆನ್ನಲ್ಲೇ ಬೆಂಗಳೂರಿನ ಹೋಟೆಲ್‌ಗಳಲ್ಲಿ ಕಾಫಿ, ಟೀ ಸೇರಿದಂತೆ…
ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಪಶುವೈದ್ಯಕೀಯ ವೈದ್ಯರ ನೇಮಕಾತಿ ಪರೀಕ್ಷೆಯಲ್ಲಿನ ಅಕ್ರಮಗಳ ತನಿಖೆ ಮತ್ತಷ್ಟು ವಿಸ್ತರಿಸಿದ್ದು, ಪ್ರಶ್ನೆಪತ್ರಿಕೆ…
ಡಾ.ಪ್ರಮೀಳಾದೇವಿ ಬಿ.ಕೆ ಗಾಂಧೀಜಿಯ ನೆರಳಿ ನಂತಿದೂ ಅವರ ಚಿಂತನೆಗಳ, ಪ್ರಯೋಗ ಗಳನ್ನು ತಿದ್ದಿ ತೀಡಿದ ಪತ್ನಿ ಕಸ್ತೂರ ಬಾ. ಬಾಲ್ಯ…
ಬ್ಯಾರಿಸ್ಟರ್ ಎನ್ನಿಸಿಕೊಳ್ಳುವುದು ಸುಲಭವಾಗಿತ್ತು. ಆದರೆ ವಕೀಲಿ ವೃತ್ತಿಯನ್ನು ನಡೆಸುವುದು ಕಷ್ಟವಾಗಿತ್ತು. ನಾನು ಕಾನೂನುಗಳನ್ನೇನೋ ವ್ಯಾಸಂಗ ಮಾಡಿದ್ದೆ. ಅವುಗಳನ್ನು ಕಾರ್ಯ ರೂಪದಲ್ಲಿ…
ಲಕ್ನೋ: ಉತ್ತರ ಪ್ರದೇಶದಲ್ಲಿ ರಕ್ಷಣಾ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ದೊರೆಯುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.…
ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಕಾಕ್ರೋಚ್ ಜನತಾ ಪಾರ್ಟಿ, ಅಂದರೆ ಸಿಜೆಪಿ ಆಗ್ರಹಿಸಿದೆ. ಸಿಜೆಪಿ…