ನವದೆಹಲಿ: ಅನಾರೋಗ್ಯದಿಂದ ಬಳಲುತ್ತಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಆರೋಗ್ಯದಲ್ಲಿ ಸುಧಾರಣೆ ಕಂಡುಬಂದಿದೆ. ಅವರು ಬುಧವಾರ ಆಸ್ಪತ್ರೆಯಿಂದ ಬಿಡುಗಡೆಯಾಗುವ ನಿರೀಕ್ಷೆ ಇದೆ ಎಂದು ಅಖಿಲ ಭಾರತ ವೈದ್ಯ ವಿಜ್ಞಾನಗಳ ಸಂಸ್ಥೆ ಆಸ್ಪತ್ರೆ (AIIMS) ಮೂಲಗಳು ತಿಳಿಸಿವೆ. ವೈರಲ್ ಜ್ವರದಿಂದ ಬಳಲುತ್ತಿದ್ದ ನಿರ್ಮಲಾ ಸೀತಾರಾಮನ್ ಅವರನ್ನು ಸೋಮವಾರ ಏಮ್ಸ್ಗೆ ದಾಖಲಿಸಲಾಗಿತ್ತು. ಸಚಿವರ ಆರೋಗ್ಯ ಚೇತರಿಸಿದೆ. ಹೀಗಾಗಿ ಬುಧವಾರ ವೈದ್ಯರು ಅವರನ್ನು ಬಿಡುಗಡೆ ಮಾಡುವ ನಿರೀಕ್ಷೆ ಇದೆ ಎಂದು ಮೂಲಗಳು ಹೇಳಿವೆ. 63 ವರ್ಷದ ನಿರ್ಮಲಾ ಸೀತಾರಾಮನ್ ಅವರನ್ನು ಏಮ್ಸ್ ಆಸ್ಪತ್ರೆಯ ಖಾಸಗಿ ವಾರ್ಡ್‌ನಲ್ಲಿ ದಾಖಲಿಸಲಾಗಿದೆ.
ಸೋಮವಾರ ಬೆಳಿಗ್ಗೆಯಿಂದಲೇ ನಿರ್ಮಲಾ ಸೀತಾರಾಮನ್ ಅಸ್ವಸ್ಥಗೊಂಡಿದ್ದರು. ಬಳಿಕ ಮಧ್ಯಾಹ್ನ 12 ಗಂಟೆ ಸುಮಾರಿಗೆ ಅವರನ್ನು ಏಮ್ಸ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅವರ ಆರೋಗ್ಯ ಸ್ಥಿತಿಯ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಏಮ್ಸ್ ಬಹಿರಂಗಪಡಿಸಿರಲಿಲ್ಲ. ಬಳಿಕ, ಹಣಕಾಸು ಸಚಿವರ ಆರೋಗ್ಯದಲ್ಲಿ ಹೆಚ್ಚಿನ ಏರುಪೇರಾಗಿಲ್ಲ. ಅವರು ಆರೋಗ್ಯವಾಗಿದ್ದಾರೆ ಎಂದು ಏಮ್ಸ್ ಆಸ್ಪತ್ರೆ ಅಧಿಕಾರಿಗಳು ಮಾಹಿತಿ ನೀಡಿದ್ದರು.
ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಇಂದಿನಿಂದ ಮೂರು ದಿನಗಳ ಕಾಲ 87 ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ.ಸಮ್ಮೇಳನದಲ್ಲಿ ನಾಡಪ್ರಭು…
ಬೆಳಗಾವಿ: ಜನಪ್ರತಿನಿಧಿ ಆಗಿರುವ ಸಿ.ಟಿ.ರವಿ ಬಂಧಿಸಿದ ಮೇಲೆ, ಸುರಕ್ಷತೆಗೆ ದೃಷ್ಟಿಯಿಂದ ಅವರನ್ನು ರಾತ್ರಿಯಿಡಿ ಪೊಲೀಸ್ ವಾಹನದಲ್ಲಿ ಸುತ್ತಾಡಿಸಬೇಕಾಯಿತು ಎಂದು ನಗರ…
ಮಂಡ್ಯ: ರಾಜಮಾತೆ ಕೆಂಪನಂಜಮಣ್ಣಿ ಮತ್ತು ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಧಾನ ವೇದಿಕೆಯಲ್ಲಿ ನಡೆದ ದೃಷ್ಟಿಚೇತನರ ವಿಶೇಷ ಕವಿಗೋಷ್ಠಿ ಎಲ್ಲರ…
ಬೆಂಗಳೂರು: ಬಿಜೆಪಿ ವಿಧಾನ ಪರಿಷತ್ ಶಾಸಕ ಸಿ.ಟಿ.ರವಿ ಅವರನ್ನು ಬಿಡುಗಡೆ ಮಾಡುವಂತೆ ಹೈಕೋರ್ಟ್ ಆದೇಶ ಹೊರಡಿಸಿದ್ದು, ಕಾಂಗ್ರೆಸ್ ಸರ್ಕಾರಕ್ಕೆ ಹಾಗೂ…
ಮೈಸೂರು: ವಿಶ್ವ ರೈತ ದಿನದ ಪ್ರಯುಕ್ತ ಡಿ.23ರಂದು ಬೆಳಿಗ್ಗೆ 10ಕ್ಕೆ ʻರೈತರ ರಾಜ್ಯ ಮಟ್ಟದ ಸಮಾವೇಶʼ ವನ್ನು ನಗರದ ಕರ್ನಾಟಕ…
ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧದ ಆಕ್ಷೇಪಾರ್ಹ ಹೇಳಿಕೆ ಸಂಬಂಧ ಬಂಧನಕ್ಕೊಳಗಾಗಿರುವ ಬಿಜೆಪಿ ವಿಧಾನ ಪರಿಷತ್ ಶಾಸಕ ಸಿ.ಟಿ.ರವಿ ಅವರನ್ನು…